Document

Kannada 75%: ಖಾಸಗಿ ಕಂಪನಿಗಳಲ್ಲಿ ಕನ್ನಡಿಗರಿಗೆ ಮೀಸಲಾತಿ.!

Janataa24 NEWS DESK

Kannada 75%: ಖಾಸಗಿ ಕಂಪನಿಗಳಲ್ಲಿ ಕನ್ನಡಿಗರಿಗೆ ಮೀಸಲಾತಿ.!

Kannada ,75, reservation,

 

Kannada 75% ಏನಿದು ಮಸೂದೆ?

ಕರ್ನಾಟಕ ಸರ್ಕಾರ ‘ಕೈಗಾರಿಕೆಗಳು, ಕಾರ್ಖಾನೆಗಳು ಮತ್ತು ಇತರ ಸಂಸ್ಥೆಗಳಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ಆದ್ಯತೆ ನೀಡುವ ಕರ್ನಾಟಕ ರಾಜ್ಯ ಉದ್ಯೋಗ ಮಸೂದೆ 2024 ಅನ್ನು ವಿಧಾನಸಭೆಯಲ್ಲಿ ಮಂಡಿಸಲು ಮುಂದಾಗಿದೆ. ಇದರಿಂದ ಉದ್ಯೋಗದಿಂದ ವಂಚಿರಾಗುತ್ತಿದ್ದ ಕನ್ನಡಿಗರಿಗೆ ಅನುಕೂಲ ಆಗಲಿದೆ.

 

 

ಈಗಾಗಲೇ ಸಂಪುಟದಲ್ಲಿ ಇದಕ್ಕೆ ಅನುಮೋದನೆ ಸಿಕ್ಕಿದೆ. ವಿಧಾನಸಭೆ ಹಾಗೂ ವಿಧಾನ ಪರಿಷತ್‌ನಲ್ಲಿ ಮಂಡನೆಯಾಗಿ, ರಾಜ್ಯಪಾಲರ ಅಂಕಿತ ಬಿದ್ದರೆ ಮಸೂದೆ ಶೀಘ್ರದಲ್ಲೇ ಕಾನೂನು ಆಗಿ ಜಾರಿಗೆ ಬರಲಿದೆ. ಈ ಮಸೂದೆಗೆ ಉದ್ಯಮಿಗಳ ವಿರೋಧ ಕೂಡ ವ್ಯಕ್ತವಾಗುತ್ತಿದೆ. ಸರ್ಕಾರ ಈ ಸಮಸ್ಯೆಯನ್ನು ಯಾವ ರೀತಿ ಬಗೆಹರಿಸುತ್ತದೆ ಎಂಬುದು ಕೂಡ ಚರ್ಚೆಯ ವಿಷಯವಾಗಿದೆ.

 

 

ಹಾಗಾದರೆ ಮೀಸಲಾತಿ ಮಸೂದೆ ಜಾರಿಯಾದರೆ ಯಾರು ಅರ್ಹರು? ಕರ್ನಾಟಕ ರಾಜ್ಯ ಉದ್ಯೋಗ ಮಸೂದೆ-2024ರಲ್ಲಿ ಏನಿದೆ ಎಂಬುದನ್ನು ನೋಡುವುದಾದರೆ, ಕರ್ನಾಟಕದಲ್ಲಿ ಖಾಸಗಿ ವಲಯದ ಕಂಪನಿಗಳು, ಕಾರ್ಖಾನೆಗಳು ಹಾಗೂ ಸಂಸ್ಥೆಗಳ ಉದ್ಯೋಗಗಳಲ್ಲಿ ಕನ್ನಡಿಗರಿಗೆ ಶೇ.50 ರಿಂದ ಶೇ.75 ರವರೆಗೆ ಮೀಸಲಾತಿ ನೀಡಬೇಕು.

 

 

ಮ್ಯಾನೇಜ್‌ಮೆಂಟ್ ಹುದ್ದೆಗಳಲ್ಲಿ ಶೇ50ರಷ್ಟು, ನಾನ್ ಮ್ಯಾನೇಜ್‌ಮೆಂಜ್ ಹುದ್ದೆಗಳಲ್ಲಿ ಶೇ.75ರಷ್ಟು ಕನ್ನಡಿಗರಿಗೆ ಮೀಸಲಾತಿ ನೀಡುವ ಮಸೂದೆಗೆ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ಸಿದ್ದರಾಮಯ್ಯ ತಮ್ಮ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದರು. ಆ ಪೋಸ್ಟ್‌ ಅನ್ನು ಸಿದ್ದರಾಮಯ್ಯ ಅವರು ಡಿಲೀಟ್ ಮಾಡಿರುವುದು ಹಲವು ಪ್ರಶ್ನೆಗಳನ್ನು ಸೃಷ್ಟಿಸಿದೆ. ಇದಕ್ಕೆ ಉದ್ಯಮಿಗಳ ವಿರೋಧ ಕಾರಣನಾ ಎಂಬ ಅನುಮಾನ ಕೂಡ ಮೂಡಿದೆ.

 

 

ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ https://chat.whatsapp.com/Jf6jZ0gyQAEA5GBRpHnkrv

https://news.google.com/publications/CAAqBwgKMPHDwgswk9_ZAw?hl=en-IN&gl=IN&ceid=IN:en

https://youtube.com/@janataa24?si=XsFcych2GMH0O6Gv

https://www.janataa24.com/bengaluru-action-to-solve-parking-parameshwar/

Document

Leave a Reply

Your email address will not be published. Required fields are marked *