Document

KARNARAKA CM:ಕಂಠೀರವ ಸ್ಟೇಡಿಯಂನಲ್ಲಿ ಸಿದ್ದರಾಮಯ್ಯ ಪ್ರಮಾಣವಚನ

Janataa24 NEWS DESK

images28729282829

ಬೆಂಗಳೂರು: ಸೋಮವಾರ ಸಿದ್ದರಾಮಯ್ಯನವರ (Siddaramaiah) ಪ್ರಮಾಣ ವಚನ ಕಾರ್ಯಕ್ರಮ ಬೆಂಗಳೂರಿನಲ್ಲಿ ಅದ್ಧೂರಿಯಾಗಿ ನಡೆಸಲು ಕಾಂಗ್ರೆಸ್‌ ಹೈಕಮಾಂಡ್‌ ಮುಂದಾಗಿದೆ.

ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ (Kanteerava Stadium) ಗುರುವಾರ ಮಧ್ಯಾಹ್ನ 3:30ಕ್ಕೆ ಸಿದ್ದರಾಮಯ್ಯ ಮತ್ತು ನೂತನ ಸಚಿವರ ಪ್ರಮಾಣ ವಚನ ಕಾರ್ಯಕ್ರಮ ನಡೆಯಲಿದೆ.

images28729283029

ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ನಿಗದಿಯಾದ ಬೆನ್ನಲ್ಲೇ ಅಧಿಕಾರಿಗಳು ಸಿದ್ಧತೆಗಾಗಿ ಕಂಠೀರವ ಸ್ಟೇಡಿಯಂಗೆ ಆಗಮಿಸಿದ್ದಾರೆ. ಸುಮಾರು 1 ಲಕ್ಷಕ್ಕೂ ಅಧಿಕ ಕಾರ್ಯಕರ್ತರು, ಅಭಿಮಾನಿಗಳ ಮುಂದೆ ಸಿದ್ದರಾಮಯ್ಯ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆಯಿದೆ. ಈ ಕಾರ್ಯಕ್ರಮಕ್ಕೆ ಕಾಂಗ್ರೆಸ್‌ ಮತ್ತು ಕಾಂಗ್ರೆಸ್‌ನ ಬೆಂಬಲಿತ ಬೇರೆ ರಾಜ್ಯದ ಮುಖ್ಯಮಂತ್ರಿಗಳು ಆಗಮಿಸುವ ಸಾಧ್ಯತೆಯಿದೆ.

images28729282929



2013 ರಲ್ಲೂ ಸಿದ್ದರಾಮಯ್ಯ ಕಂಠೀರವ ಸ್ಟೇಡಿಯಂನಲ್ಲೇ ಪ್ರಮಾಣವಚನ ಸ್ವೀಕರಿಸಿ 5 ವರ್ಷ ಅಧಿಕಾರ ನಡೆಸಿದ್ದರು. ಈ ಕಾರಣಕ್ಕೆ ಎರಡನೇ ಬಾರಿ ಸಿದ್ದರಾಮಯ್ಯ ಕಂಠೀರವ ಸ್ಟೇಡಿಯಂನಲ್ಲೇ ಪ್ರಮಾಣ ವಚನ ನಡೆಸಲಿದ್ದಾರೆ.

Document

Leave a Reply

Your email address will not be published. Required fields are marked *