Document

Kejriwal: ಅಬಕಾರಿ ನೀತಿ ಹಗರಣಲ್ಲಿ ಅರವಿಂದ್ ಕೇಜ್ರಿವಾಲ್ ಗೆ ಕ್ಲೀನ್ ಚಿಟ್–CBI ಬಳಿ ಸಾಕ್ಷ್ಯ ಕೊರತೆ.!

JANATAA24 NEWS DESK

 

Kejriwal: ಅಬಕಾರಿ ನೀತಿ ಹಗರಣಲ್ಲಿ ಅರವಿಂದ್ ಕೇಜ್ರಿವಾಲ್ ಗೆ ಕ್ಲೀನ್ ಚಿಟ್–CBI ಬಳಿ ಸಾಕ್ಷ್ಯ ಕೊರತೆ.!

Kejriwal- Clean chit to Arvind Kejriwal in excise policy scam – CBI lacks evidence!

ನವದೆಹಲಿ: ದೆಹಲಿ ಅಬಕಾರಿ ನೀತಿ ಕೇಸಿನಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆಗೊಳಿಸಿದ ಕೆಲವೇ ಕ್ಷಣಗಳಲ್ಲಿ ಅರವಿಂದ್ ಕೇಜ್ರಿವಾಲ್ ಅವರು ಮಾಧ್ಯಮಗಳ ಮುಂದೆ ಭಾವುಕರಾಗಿ ಕಣ್ಣೀರು ಹಾಕಿದರು.

 

ಕಳೆದ ಕೆಲವು ವರ್ಷಗಳಿಂದ ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಿಜೆಪಿ ನಮ್ಮ ಮೇಲೆ ಆರೋಪ ಮಾಡುತ್ತಿದ್ದ ರೀತಿಯನ್ನು ನೀವೆಲ್ಲರೂ ನೋಡಿದ್ದೀರಿ, ಇಂದು ನ್ಯಾಯಾಲಯ ನಮ್ಮ ವಿರುದ್ಧದ ಎಲ್ಲಾ ಆರೋಪಗಳನ್ನು ತಳ್ಳಿ ಹಾಕಿದೆ. ನಾವು ಸದಾ ಸತ್ಯವೇ ಗೆಲ್ಲುತ್ತದೆ ಎಂದು ಹೇಳಿಕೊಂಡು ಬಂದಿದ್ದೆವು.

 

ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಆಮ್ ಆದ್ಮಿ ಪಕ್ಷದ ವಿರುದ್ಧ ಸಂಚು ರೂಪಿಸಿ, ಪಕ್ಷದ ಐವರು ಪ್ರಮುಖ ನಾಯಕರನ್ನು ಬಂಧಿಸಿದರು. ಅಧಿಕಾರದಲ್ಲಿದ್ದ ಮುಖ್ಯಮಂತ್ರಿಯನ್ನೇ ಬಂಧಿಸಲಾಯಿತು. ಪ್ರತಿಯೊಂದು ಚಾನೆಲ್‌ನಲ್ಲಿ ನಮ್ಮನ್ನು ಭ್ರಷ್ಟರೆಂದು ಕರೆಯಲಾಯಿತು. ಕೇಜ್ರಿವಾಲ್ ಭ್ರಷ್ಟನಲ್ಲ. ನಾನು ಸಂಪಾದಿಸಿರುವುದು ಪ್ರಾಮಾಣಿಕತೆ ಮಾತ್ರ. ಇಂದು ನ್ಯಾಯಾಲಯವೇ ಕೇಜ್ರಿವಾಲ್, ಮನೀಶ್ ಸಿಸೋಡಿಯಾ ಮತ್ತು ಎಎಪಿ ಪ್ರಾಮಾಣಿಕರು ಎಂದು ಹೇಳಿದೆ ಎಂದು ಕಣ್ಣೀರು ಹಾಕುತ್ತ ನುಡಿದರು.

 

 

ವಿಶೇಷ ನ್ಯಾಯಾಧೀಶ ಜಿತೇಂದ್ರ ಸಿಂಗ್ ಅವರು ಕೇಜ್ರಿವಾಲ್, ಸಿಸೋಡಿಯಾ ಮತ್ತು ಇತರ 21 ಜನರನ್ನು ಖುಲಾಸೆಗೊಳಿಸಿತು. ಆರೋಪಪಟ್ಟಿಯಲ್ಲಿ ಸಾಕ್ಷ್ಯಾಧಾರಗಳಿಲ್ಲದೆ ಹಲವು ಕೊರತೆಗಳಿವೆ ಎಂದು ನ್ಯಾಯಾಲಯ ಹೇಳಿದೆ.

 

 

ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ https://chat.whatsapp.com/Jf6jZ0gyQAEA5GBRpHnkrv

 

https://news.google.com/publications/CAAqBwgKMPHDwgswk9_ZAw?hl=en-IN&gl=IN&ceid=IN:en

 

 

https://youtube.com/@janataa24?si=XsFcych2GMH0O6Gv

 

 

https://www.janataa24.com/turuvekere-protesting-against-stone-mining/

 

IAS,IPS,KAS, ಕನಸು ಹೊತ್ತ ವಿದ್ಯಾರ್ಥಿಗಳಿಗೆ ಗಾಡ್ ಫಾದರ್ ಆಗಿ ನಿಂತ ಮೂರ್ತಿ ಸಿ ಎಸ್.

 

 

Turuvekere: ಫಸಲಿಗೆ ಬಂದ 40 ತೆಂಗಿನ ಮರಗಳನ್ನ ಕಡಿದುರುಳಿಸಿದ ಕಿಡಿಗೇಡಿಗಳು.

 

 

Operation Sindor: POK ಪಾಕಿಸ್ತಾನದ 9 ಉಗ್ರ ನೆಲೆಗಳನ್ನು ನೆಲಸಮಗೊಳಿಸಿದ ಭಾರತ ಸೇನೆ.

 

Document

Leave a Reply

Your email address will not be published. Required fields are marked *