Document

Kodagu: ವಿದೇಶಿ ಮಹಿಳೆಯ ಮೇಲೆ ಅತ್ಯಾಚಾರ- ಹೋಂಸ್ಟೇ ಮಾಲಿಕ ಸೇರಿ ಇಬ್ಬರ ಬಂಧನ.

JANATAA24 NEWS DESK 

Kodagu: ವಿದೇಶಿ ಮಹಿಳೆಯ ಮೇಲೆ ಅತ್ಯಾಚಾರ- ಹೋಂಸ್ಟೇ ಮಾಲಿಕ ಸೇರಿ ಇಬ್ಬರ ಬಂಧನ.
Kodagu
ಕೊಡಗು: ಜಿಲ್ಲೆಯ ಕುಟ್ಟ ಗ್ರಾಮದಲ್ಲಿರುವ ಖಾಸಗಿ ಹೋಂಸ್ಟೇ ನಲ್ಲಿ ವಿದೇಶಿ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ ಎಂಬ ಗಂಭೀರ ಆರೋಪ ಕೇಳಿಬಂದಿದ್ದು, ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

 

ಪೊನ್ನಂಪೇಟೆ ತಾಲೂಕಿನ ಕುಟ್ಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಈ ಪ್ರಕರಣದಲ್ಲಿ, ಅಮೆರಿಕದ ವಾಷಿಂಗ್ಟನ್ ಮೂಲದ ಮಹಿಳೆ ಏಪ್ರಿಲ್ 19ರಂದು ಹೋಂಸ್ಟೇನಲ್ಲಿ ವಾಸ್ತವ್ಯ ಹೂಡಿದ್ದ ವೇಳೆ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ. ಜಾರ್ಖಂಡ್ ಮೂಲದ ವೃಜೇಶ್ ಕುಮಾ‌ರ್ ಎಂಬಾತ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂಬ ಆರೋಪ ಕೇಳಿಬಂದಿದೆ.

 

 

ಏನಿದು ಪ್ರಕರಣ?

ಪ್ರವಾಸಕ್ಕೆ ಬಂದಿದ್ದ ವಿದೇಶಿ ಮಹಿಳೆ ಕುಟ್ಟ ಗ್ರಾಮದ ದೇವಿ ವಿಲ್ಲಾ ಹೋಂ ಸ್ಟೇನಲ್ಲಿ ತಂಗಿದ್ದರು. ಈ ವೇಳೆ ಅಲ್ಲಿದ್ದ ಜಾರ್ಖಂಡ್‌ ಮೂಲದ ವ್ಯಕ್ತಿ ವೃಜೇಶ್ ಕುಮಾರ್ ಸಿಹಿ ಪಾನಕಕ್ಕೆ ಮತ್ತು ಬರುವ ಔಷಧಿ ಬೆರಸಿ ಮಹಿಳೆಗೆ ನೀಡಿದ್ದಾನೆ. ಆಕೆ ಪ್ರಜ್ಞೆ ತಪ್ಪಿದ ಬಳಿಕ ಅತ್ಯಾಚಾರ ಎಗಿದ್ದಾನೆ ಎಂದು ಸಂತ್ರಸ್ತೆ ನೀಡಿದ ದೂರಿನಲ್ಲಿ ಉಲ್ಲೇಖವಾಗಿದೆ.

 

ಪ್ರಕರಣ ಮುಚ್ಚಿಹಾಕಲು ಹೋಂಸ್ಟೇ ಮಾಲೀಕನಿಂದ ಯತ್ನ..!

ಇನ್ನೂ ವಿಷಯ ತಿಳಿದ ಹೋಮ್‌ಸ್ಟೇ ಮಾಲೀಕ ವಿಶಾಲ್‌ ಪ್ರಕರಣವನ್ನೇ ಮುಚ್ಚಿಹಾಕಲು ಯತ್ನಿಸಿರೋದು ದೂರಿನಿಂದ ಗೊತ್ತಾಗಿದೆ. ಮೂರು ದಿನಗಳ ಕಾಲ ಸಂತ್ರಸ್ತೆ ಯಾರನ್ನೂ ಸಂಪರ್ಕ ಮಾಡದಂತೆ ತಡೆದಿದ್ದಾನೆ. ಹೋಂ ಸ್ಟೇ ವೈಫೈ ಕೂಡ ಕಟ್‌ ಮಾಡಿದ್ದಾನೆ. 3 ದಿನದ ಬಳಿಕ ಸಂತ್ರಸ್ತೆ ಮೈಸೂರಿಗೆ ಹೋಗುವುದಾಗಿ ಹೇಳಿ ಹೊರಟಿದ್ದಾರೆ. ನಂತರ ಮೈಸೂರಿಗೆ ಬಂದ ವಿದೇಶಿ ಮಹಿಳೆ ಅಮೆರಿಕದ ರಾಯಭಾರ ಕಚೇರಿಯನ್ನ (American Embassy) ಸಂಪರ್ಕಿಸಿ, ಮಾಹಿತಿ ನೀಡಿದ್ದಾರೆ. ಬಳಿಕ ಇ-ಮೇಲ್‌ ಮೂಲಕ ಮೈಸೂರಿನ ಅಧಿಕಾರಿಗಳನ್ನ ಸಂಪರ್ಕಿಸಿದ ಅಮೆರಿಕ ರಾಯಭಾರ ಕಚೇರಿ ಅಧಿಕಾರಿಗಳು ಪ್ರಕರಣ ದಾಖಲಿಸುವಂತೆ ಸೂಚಿಸಿದ್ದಾರೆ. ಅಧಿಕಾರಿಗಳ ಸೂಚನೆ ಮೇರೆಗೆ ಮೈಸೂರಿನ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

ಕೊಡಗಿಗೆ ವಿದೇಶಾಂಗ ಸಚಿವಾಲಯದ ಅಧಿಕಾರಿಗಳ ಭೇಟಿ

ಘಟನೆ ಬೆಳಕಿಗೆ ಬಂದ ನಂತರ ಡೆಲ್ಲಿ ಹಾಗೂ ಚೆನ್ನೈ ಕಚೇರಿಗಳ ವಿದೇಶಾಂಗ ಸಚಿವಾಲಯದ ಅಧಿಕಾರಿಗಳು ಮಂಗಳವಾರ ಕೊಡಗಿಗೆ ಭೇಟಿ ನೀಡಿದ್ದಾರೆ. ಆದ್ರೆ ಅಧಿಕಾರಿಗಳಿಗೆ ಸ್ಪಷ್ಟ ಮಾಹಿತಿ ನೀಡಲು ಕೊಡಗು ಎಸ್ಪಿ ಹಿಂದೇಟು ಹಾಕಿದ್ದಾರೆ.

 

ಸದ್ಯ ಪ್ರಕರಣ ಸಂಬಂಧ ಅತ್ಯಾಚಾರ ಆರೋಪಿ ಹಾಗೂ ಹೋಂ ಸ್ಟೇ ಮಾಲಿಕ ಇಬ್ಬರನ್ನೂ ಬಂಧಿಸಿದ್ದಾರೆ. ಕೋರ್ಟ್‌ ಮೇ 3ರ ವರೆಗೆ ನ್ಯಾಯಾಂಗ ಬಂಧನದಲ್ಲಿಡಲು ಆದೇಶ ನೀಡಿದೆ. ಘಟನೆ ಸಂಬಂಧ ತನಿಖೆ ನಡೆಯುತ್ತಿದೆ, ಈಗಲೇ ಹೆಚ್ಚಿನ ವಿವರ ನೀಡಲು ಸಾಧ್ಯವಿಲ್ಲ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ತಿಳಿಸಿದ್ದಾರೆ.

ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ https://chat.whatsapp.com/Jf6jZ0gyQAEA5GBRpHnkrv

 

https://news.google.com/publications/CAAqBwgKMPHDwgswk9_ZAw?hl=en-IN&gl=IN&ceid=IN:en

 

 

https://youtube.com/@janataa24?si=XsFcych2GMH0O6Gv

 

 

https://www.janataa24.com/turuvekere-protesting-against-stone-mining/

 

IAS,IPS,KAS, ಕನಸು ಹೊತ್ತ ವಿದ್ಯಾರ್ಥಿಗಳಿಗೆ ಗಾಡ್ ಫಾದರ್ ಆಗಿ ನಿಂತ ಮೂರ್ತಿ ಸಿ ಎಸ್.

 

 

Turuvekere: ಫಸಲಿಗೆ ಬಂದ 40 ತೆಂಗಿನ ಮರಗಳನ್ನ ಕಡಿದುರುಳಿಸಿದ ಕಿಡಿಗೇಡಿಗಳು.

 

 

Operation Sindor: POK ಪಾಕಿಸ್ತಾನದ 9 ಉಗ್ರ ನೆಲೆಗಳನ್ನು ನೆಲಸಮಗೊಳಿಸಿದ ಭಾರತ ಸೇನೆ.

 

Document

Leave a Reply

Your email address will not be published. Required fields are marked *