Janataa24 NEWS DESK

ನವದೆಹಲಿ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಮೊದಲ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ದೆಹಲಿಯ ಬಿಜೆಪಿ ಕಚೇರಿಯಲ್ಲಿ ಪ್ರಧಾನ ಕಾರ್ಯದರ್ಶಿ ವಿನೋದ್ ತಾವಡೆ ಅವರು ಸುದ್ದಿಗೋಷ್ಟಿ ನಡೆಸಿ ಮಾಹಿತಿ ನೀಡಿದ್ದಾರೆ. ಬಿಜೆಪಿ ಪಕ್ಷದ ಮೊದಲ ಪಟ್ಟಿಯಲ್ಲಿ 195 ಲೋಕಸಭಾ(LokaSabha) ಕ್ಷೇತ್ರದ ಅಭ್ಯರ್ಥಿಗಳ ಹೆಸರು ಘೋಷಣೆ ಮಾಡಲಾಗಿದೆ. 16 ರಾಜ್ಯ ಮತ್ತು ಎರಡು ಕೇಂದ್ರಾಡಳಿತ ಕ್ಷೇತ್ರದ ಅಭ್ಯರ್ಥಿಗಳ ಬಗ್ಗೆ ನಿರ್ಧಾರ ಮಾಡಲಾಗಿದೆ.

ಬಿಜೆಪಿ ಮೊದಲ ಪಟ್ಟಿಯಲ್ಲಿ ಮೊದಲ ಹೆಸರು ಪ್ರಧಾನಿ ನರೇಂದ್ರ ಮೋದಿ ಅವರದ್ದಾಗಿದೆ. ಪ್ರಧಾನಿ ನರೇಂದ್ರ ಮೋದಿ(Narendra Modi)ಅವರು ಈ ಬಾರಿಯೂ ವಾರಾಣಸಿಯಿಂದ ಸ್ಪರ್ಧೆ ಮಾಡುತ್ತಿದ್ದಾರೆ. ಇನ್ನುಳಿದಂತೆ 34 ಕೇಂದ್ರ ಸಚಿವರು, 28 ಮಹಿಳೆಯರಿಗೆ ಬಿಜೆಪಿ ಪಕ್ಷ ಟಿಕೆಟ್ ಘೋಷಣೆ ಮಾಡಿದೆ.
ಬಿಜೆಪಿ ಪಕ್ಷದ ಮೊದಲ ಪಟ್ಟಿಯಲ್ಲಿ 50ಕ್ಕಿಂತ ಕಡಿಮೆ ವಯಸ್ಸಿನ 47 ಜನರ ಹೆಸರು ಇದೆ. ಇಬ್ಬರು ಮಾಜಿ ಮುಖ್ಯಮಂತ್ರಿಗಳು ಸೇರಿದಂತೆ ಹಿಂದುಳಿದ ವರ್ಗದ 57 ಜನರಿಗೆ ಹಾಗೂ ಪರಿಶಿಷ್ಟ ಜಾತಿ 27, ಪರಿಶಿಷ್ಟ ಪಂಗಡ 18 ಮಂದಿಗೆ ಟಿಕೆಟ್ ನೀಡಲಾಗಿದೆ.

ಪ್ರಮುಖವಾಗಿ ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರ ಪುತ್ರಿ ಬನ್ಸೂರಿ ಸ್ವರಾಜ್‌ಗೆ(Bansuri Swaraj) ಟಿಕೆಟ್ ನೀಡಲಾಗಿದ್ದು, ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಅವರು ಕೇರಳದ ತಿರುವನಂತಪುರಂನಿಂದ ಕಣಕ್ಕಿಳಿಯಲಿದ್ದಾರೆ.

ಉತ್ತರ ಪ್ರದೇಶದ 51 ಕ್ಷೇತ್ರಗಳಿಗೆ, ಪಶ್ಚಿಮ ಬಂಗಾಳದ 20 ಕ್ಷೇತ್ರಗಳಿಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಮಧ್ಯಪ್ರದೇಶದಿಂದ 24, ಗುಜರಾತ್ 15, ರಾಜಸ್ಥಾನ 15, ಕೇರಳ 12, ಅಸ್ಸಾಂ 11, ತೆಲಂಗಾಣ 9, ಜಾರ್ಖಂಡ್ 11, ಛತ್ತೀಸ್‌ಗಢ 11, ಹೊಸದಿಲ್ಲಿ 5, ಜಮ್ಮು ಕಾಶ್ಮೀರ 2, ಉತ್ತರಾಖಂಡ 3, ಅರುಣಾಚಲ ಪ್ರದೇಶ 2 ಹಾಗೂ ಗೋವಾ, ತ್ರಿಪುರ, ಅಂಡಮಾನ್ ಮತ್ತು ನಿಕೋಬಾರ್, ದಿಯು ಮತ್ತು ದಮನ್‌ಗಳ ತಲಾ ಒಂದು ಕ್ಷೇತ್ರಗಳಿಗೆ ಟಿಕೆಟ್ ನೀಡಲಾಗಿದೆ.
ಕರ್ನಾಟಕ, ತಮಿಳುನಾಡು ಹಾಗೂ ಓಡಿಶಾದ ಯಾವ ಕ್ಷೇತ್ರಗಳಿಗೂ ಬಿಜೆಪಿ ಅಭ್ಯರ್ಥಿಗಳನ್ನು ಮೊದಲ ಪಟ್ಟಿಯಲ್ಲಿ ಘೋಷಿಸಿಲ್ಲ. ಮೊದಲ ಪಟ್ಟಿಯಲ್ಲಿ ಹೆಚ್ಚಿನ ಅಭ್ಯರ್ಥಿಗಳನ್ನು ಘೋಷಿಸುವ ತಂತ್ರವನ್ನು ಮುಂದುವರಿಸಿರುವ ಬಿಜೆಪಿ ಮೊದಲ ಪಟ್ಟಿಯಲ್ಲಿ ಹೊಸ ಮುಖಗಳಿಗೆ ಮಣೆ ಹಾಕಿದೆ. ಜೊತೆಗೆ ಹಲವು ಕಡೆ ಹಾಲಿ ಸಂಸದರಿಗೆ ಕೋಕ್ ನೀಡಿರುವ ಬಿಜೆಪಿ ಪ್ರಯೋಗಕ್ಕೆ ಮುಂದಾಗಿದೆ.
https://www.janataa24.com/accident-between-a-bike-and-a-tipper-lorry-bike-rider-died-on-the-spot/