Janataa24 NEWS DESK
Lokayukta: ರಾಜ್ಯದ 60 ಸ್ಥಳಗಳಲ್ಲಿ ಲೋಕಾಯುಕ್ತ ದಾಳಿ.

ಬೆಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಸಿದ ಆರೋಪದಡಿಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಬುಧವಾರ ಲೋಕಾಯುಕ್ತ ಅಧಿಕಾರಿಗಳು (Lokayukta) ದಾಳಿ ನಡೆಸಿದ್ದಾರೆ.
ಬೆಂಗಳೂರಿನ ಮಹಾನಗರ ಪಾಲಿಕೆಯ ಮುಖ್ಯ ಎಂಜಿನಿಯರ್ ರಂಗನಾಥ್‌ಗೆ ಸೇರಿದ ಹಲವು ಸ್ಥಳಗಳಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಜೊತೆಗೆ ರಾಜ್ಯದ 60 ಕಡೆಗಳಲ್ಲಿ 13 ಮಂದಿ ಎಸ್ಪಿ(SP)ಗಳು, 12 ಮಂದಿ ಡಿವೈಎಸ್ಪಿ(DySP) 25 ಪಿಐ ಸೇರಿದಂತೆ 130 ಅಧಿಕಾರಿಗಳು ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ.
ಸರ್ಕಾರಿ ಅಧಿಕಾರಿಗಳ ಅಕ್ರಮ ಆಸ್ತಿ ಗಳಿಕೆಗೆ ಸಂಬಂಧಿಸಿದಂತೆ ದೂರು ಬಂದ ಹಿನ್ನೆಲೆಯಲ್ಲಿ ಬುಧವಾರ ಬೆಳಗ್ಗೆ ಗಡಿ ಜಿಲ್ಲೆ ಬೀದರ್‌ನಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದಾರೆ. ಏಕಕಾಲಕ್ಕೆ ಬೀದರ್‌ನಲ್ಲಿ ಮೂರು ಕಡೆ ಹಾಗೂ ಕಲಬುರಗಿಯಲ್ಲಿ ಒಂದು ಕಡೆ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದಾರೆ. ಕಾರಂಜಾ ಇಲಾಖೆಯ ಕಾರ್ಯಪಾಲಕ ಅಭಿಯಂತರ ಶಿವಕುಮಾರ ಸ್ವಾಮಿಗೆ ಸೇರಿದ ಹಲವು ನಿವಾಸಗಳು ಹಾಗೂ ಕಚೇರಿ ಮೇಲೆ ದಾಳಿ ಮಾಡಲಾಗಿದೆ.
ಬೀದರ್ ನಗರದ ವೀರಭದ್ರೇಶ್ವರ ಕಾಲೋನಿಯ ನಿವಾಸ, ಭಾಲ್ಕಿ ತಾಲೂಕಿನ ನಾಗೂರು ಗ್ರಾಮದ ನಿವಾಸ, ಬೀದರ್ ನಗರದ ಕಾರಂಜಾ ಕಚೇರಿ ಹಾಗೂ ಕಲಬುರಗಿಯ ಹಳೆ ನಿವಾಸದ ಮೇಲೆ ದಾಳಿ ಮಾಡಲಾಗಿದೆ ಎಂದು ತಿಳಿದು ಬಂದಿರುತ್ತದೆ.
ಭಾಲ್ಕಿಯ ಕಾರಂಜಾ ಇಲಾಖೆಯಲ್ಲಿ ಕಾರ್ಯನಿರ್ವಹಿಸುವತ್ತಿರುವ ಶಿವಕುಮಾರ್ ಸ್ವಾಮಿ ನಿವಾಸಗಳಲ್ಲಿ ದಾಖಲೆಗಳನ್ನು ತೀವ್ರ ಪರಿಶೀಲನೆ ಮಾಡಲಾಗುತ್ತಿದೆ.
ಕಾರ್ಯಾಚರಣೆಯಲ್ಲಿ ಒಟ್ಟು ₹41.76 ಕೋಟಿ ಮೌಲ್ಯದ ಸ್ಥಿರ ಮತ್ತು ಚರ ಆಸ್ತಿಗಳನ್ನು ಪತ್ತೆ ಮಾಡಲಾಗಿದೆ. 13 ಆರೋಪಿಗಳ ಘೋಷಿತ ಆದಾಯಕ್ಕೆ ಹೋಲಿಸಿದಾಗ ₹35.83 ಕೋಟಿ ಮೌಲ್ಯದ ಅಕ್ರಮ ಆಸ್ತಿಗಳಿವೆ ಎಂದು ತನಿಖಾ ಸಂಸ್ಥೆಯ ಪ್ರಕಟಣೆಯಲ್ಲಿ ವಿವರ ನೀಡಲಾಗಿದೆ.
ಕೆಳಗಿನ #ಲಿಂಕ್ ಬಳಸಿ #ಜನತಾ24   #ವಾಟ್ಸಾಪ್_ಗ್ರೂಪ್ ಸೇರಿರಿ  https://chat.whatsapp.com/Jf6jZ0gyQAEA5GBRpHnkrv 
Subscribe YouTube 
https://youtube.com/@janataa24?si=XsFcych2GMH0O6Gv
https://news.google.com/publications/CAAqBwgKMPHDwgswk9_ZAw?hl=en-IN&gl=IN&ceid=IN:en