Janataa24 NEWS DESK
Lokayukta: ತುರುವೇಕೆರೆ ತಾಲೂಕು ಕಚೇರಿಗೆ ದಿಢೀರ್ ಭೇಟಿ ಕೊಟ್ಟ ಲೋಕಾಯುಕ್ತ ಅಧಿಕಾರಿಗಳು.

ತುರುವೇಕೆರೆ: ತುಮಕೂರು ಜಿಲ್ಲೆಯ ಎಲ್ಲಾ ತಾಲೂಕು ಕಚೇರಿಗಳ ಮೇಲೆ ಇಂದು ಬೆಳಗ್ಗೆ ಸರಿ ಸುಮಾರು 11 ಗಂಟೆಗೆ ಒಂದೇ ಬಾರಿ ಬೆಂಗಳೂರು ಲೋಕಾಯುಕ್ತ ಕೇಂದ್ರ ಕಚೇರಿಯ ಅಧಿಕಾರಿಗಳು ದಾಳಿ ನಡೆಸಿದ್ದು, ಸಾರ್ವಜನಿಕರಿಂದ ಲೋಕಾಯುಕ್ತಕ್ಕೆ ತಾಲೂಕು ಕಚೇರಿಗಳಲ್ಲಿ ಅಧಿಕಾರಿಗಳ ನಿರ್ಲಕ್ಷತನ ಬೇಜವಾಬ್ದಾರಿ ಅಧಿಕಾರಿಗಳ ಬಗ್ಗೆ ದೂರುಗಳು ಬಂದ ಹಿನ್ನೆಲೆ, ಒಂದೇ ಬಾರಿ ತುಮಕೂರು ಜಿಲ್ಲೆಯ ಹತ್ತು ತಾಲೂಕು ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ ನಡೆಸಿದೆ.
ಬೆಂಗಳೂರು ಕೇಂದ್ರ ಕಚೇರಿಯಿಂದ ಲೋಕಾಯುಕ್ತ ಎಸ್ಪಿ ಅವರ ಆದೇಶದ ಮೇರೆಗೆ ಇಂದು ಎಲ್ಲಾ ಕಡೆ ದಾಳಿ ನಡೆಸಿದ್ದು, ತುರುವೇಕೆರೆ ತಾಲೂಕು ಕಚೇರಿಗೆ ಲೋಕಾಯುಕ್ತ ಇನ್ಸ್ಪೆಕ್ಟರ್ ಅಶೋಕ್ ಕುಮಾರ್ ಇವರ ನೇತೃತ್ವದ 7 ಅಧಿಕಾರಿಗಳ ತಂಡ ದಿಡೀರ್ ಭೇಟಿ ಕೊಟ್ಟು ಕಡತಗಳನ್ನು ಪರಿಶೀಲಿಸುತ್ತಿದೆ ಇಂದು ಸಂಜೆಯವರೆಗೂ ಲೋಕಾಯುಕ್ತ ಅಧಿಕಾರಿಗಳು ಕಡತಗಳನ್ನು ಪರಿಶೀಲಿಸಿ, ನಾಳೆಯೂ ಸಹ ಇದೇ ಕ್ರಮ ಮುಂದುವರಿಯಲಿದ್ದು ನಾಳೆ ಲೋಕಾಯುಕ್ತ ಎಸ್ಪಿ ಅವರು ತಾಲೂಕು ಕಚೇರಿಗೆ ಭೇಟಿ ನೀಡಲಿದ್ದಾರೆ ಎಂದು ಕೆಲವು ಮೂಲಗಳಿಂದ ತಿಳಿದುಬಂದಿದೆ, ಒಟ್ಟಾರೆ ಇಂದು ಮತ್ತು ನಾಳೆ ಲೋಕಾಯುಕ್ತರಿಗೆ ತಾಲೂಕು ಆಡಳಿತದ ವ್ಯಾಪ್ತಿಗೆ ಬರುವ ಇಲಾಖೆಗಳ ಅಧಿಕಾರಿಗಳಿಂದ ಸಾರ್ವಜನಿಕರಿಗೆ ಏನಾದರೂ ನಿರ್ಲಕ್ಷತನ ಬೇಜವಾಬ್ದಾರಿತನ ತೋರಿ ಹಲವು ಬಾರಿ ಸುಮ್ಮನೆ ಕಚೇರಿಗಳಿಗೆ ಅಲೆದಾಡಿಸುತ್ತಿರುವ ಅಥವಾ ಇನ್ನಿತರ ಯಾವುದೇ ಜವಾಬ್ದಾರಿಯುತ ಕಾರ್ಯ ನಿರ್ವಹಿಸದೆ ಕಾಲ ಹರಣ ಮಾಡುತ್ತಿರುವ ಅಧಿಕಾರಿಗಳ ವಿರುದ್ಧ ಸಾಕ್ಷಿ ಸಮೇತ ದೂರುಗಳಿದ್ದರೆ ಲೋಕಾಯುಕ್ತಕ್ಕೆ ನೀಡಬಹುದು ಎಂದು ತಿಳಿದುಬಂದಿದೆ.
ವರದಿ: ಮಂಜುನಾಥ್ ತುರುವೇಕೆರೆ.
ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ https://chat.whatsapp.com/Jf6jZ0gyQAEA5GBRpHnkrv
https://news.google.com/publications/CAAqBwgKMPHDwgswk9_ZAw?hl=en-IN&gl=IN&ceid=IN:en
https://youtube.com/@janataa24?si=XsFcych2GMH0O6Gv
https://www.janataa24.com/turuvekere-protesting-against-stone-mining/
IAS,IPS,KAS, ಕನಸು ಹೊತ್ತ ವಿದ್ಯಾರ್ಥಿಗಳಿಗೆ ಗಾಡ್ ಫಾದರ್ ಆಗಿ ನಿಂತ ಮೂರ್ತಿ ಸಿ ಎಸ್.
Turuvekere: ಫಸಲಿಗೆ ಬಂದ 40 ತೆಂಗಿನ ಮರಗಳನ್ನ ಕಡಿದುರುಳಿಸಿದ ಕಿಡಿಗೇಡಿಗಳು.
Operation Sindor: POK ಪಾಕಿಸ್ತಾನದ 9 ಉಗ್ರ ನೆಲೆಗಳನ್ನು ನೆಲಸಮಗೊಳಿಸಿದ ಭಾರತ ಸೇನೆ.