Janataa24 NEWS DESK
Madenur Manu: ಕಾಮಿಡಿ ಕಿಲಾಡಿಗಳು ಖ್ಯಾತಿಯ ಮಡೆನೂರು ಮನು ಅರೆಸ್ಟ್.
ಕಾಮಿಡಿ ಕಿಲಾಡಿ ಸ್ಟಾರ್ ಹಾಗೂ ನಟ ಮಡೆನೂರು ಮನು (Madenuru Manu) ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ.
ಮಡೆನೂರು ಮನು, ಕುಲದಲ್ಲಿ ಕೀಳ್ಯಾವುದೊ ಚಿತ್ರದಲ್ಲಿ ನಾಯಕ ನಟನಾಗಿ ಅಭಿನಯಿಸಿದ್ದರು. ನಾಳೆ ಚಿತ್ರ ರಾಜ್ಯಾದ್ಯಂತ ತೆರೆ ಕಾಣುತ್ತಿದೆ. ಈ ಹೊತ್ತಲ್ಲೇ ನಟನ ಮೇಲೆ ಎಫ್‌ಐಆರ್ ದಾಖಲಾಗಿದೆ.
ಕಾಮಿಡಿ ಕಿಲಾಡಿಯ ಸಹ ಕಲಾವಿದೆಯಿಂದಲೇ ಅತ್ಯಾಚಾರ ಕೇಸ್ ದಾಖಲಾಗಿದೆ. ಅತ್ಯಾಚಾರ ಪ್ರಕರಣ ದಾಖಲಾಗುತ್ತಿದ್ದಂತೆ ನಟ ತಲೆಮರೆಸಿಕೊಂಡಿದ್ದಾನೆ. ಆರೋಪಿ ನಟ ಮಡೆನೂರು ಮನುಗಾಗಿ ಅನ್ನಪೂರ್ಣೇಶ್ವರಿ ನಗರ ಪೊಲೀಸರು ಹುಡುಕಾಟ ನಡೆಸಿ ಬಂಧಿಸಿರುತ್ತಾರೆ.
Madenur Manu Rape Case: ಏನಿದು ಪ್ರಕರಣ.
ನಟ ಮಡೆನೂರು ಮನು (Madenuru Manu) ವಿರುದ್ಧ ಕಿರುತೆರೆ ನಟಿಯೊಬ್ಬರು ಅತ್ಯಾಚಾರ(Physical Abuse), ಬಲವಂತದ ಗರ್ಭಪಾತ (Abortion) , ಹಲ್ಲೆ (Assault) ಹಾಗೂ ಕೊಲೆ ಬೆದರಿಕೆಯ ದೂರು ಹೊರಿಸಿದ್ದಾರೆ. ಈ ಸಂಬಂಧ ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು.
ದೂರು ನೀಡಿದ ಈ ಯುವತಿಗೆ ಬಾಡಿಗೆ ಮನೆಯನ್ನು ನಾಗರಭಾವಿಯಲ್ಲಿ ಮನುವೇ ಹುಡುಕಿಕೊಟ್ಟಿದ್ದ. 2018 ರಿಂದಲೂ ಮನುವಿಗೆ ಈಕೆಯ ಪರಿಚಯ ಇತ್ತು ಎಂದು ಗೊತ್ತಾಗಿದೆ. ಮನುಗೆ ಮದುವೆ ಆಗಿ ಒಂದು ಮಗು ಕೂಡ ಇದೆ.
“ನಾವು ಕಾಮಿಡಿ ಕಿಲಾಡಿಗಳು ಕಾರ್ಯಕ್ರಮದಲ್ಲಿ ಜೊತೆಯಾಗಿ ಕೆಲಸ ಮಾಡಿದ್ದೆವು. ಮೊದಲಿಗೆ ಪರಿಚಯ ಆಗಿ ಸ್ನೇಹ ಬೆಳೆದಿತ್ತು. 29/11/2022 ರಂದು ಶಿವಮೊಗ್ಗದ ಶಿಕಾರಿಪುರದ ಕಾರ್ಯಕ್ರಮಕ್ಕೆ ಹೋಗಿದ್ದೆವು. ಅಲ್ಲಿ ಒಂದು ಹಾಸ್ಯ ಕಾರ್ಯಕ್ರಮ ಮಾಡಿದ್ದರು. ಕಾರ್ಯಕ್ರಮದ ಬಳಿಕ ಸಂಭಾವನೆ ನೀಡುವ ನೆಪದಲ್ಲಿ ರೂಂಗೆ ಕರೆಸಿಕೊಂಡಿದ್ದರು. ಬಳಿಕ ನನ್ನ ಮೇಲೆ ಅತ್ಯಾಚಾರ ಮಾಡಿದ್ದಾರೆ. ಇದಾದ ಬಳಿಕ 2022ರ ಡಿಸೆಂಬರ್ 3ರಂದು ಮನೆಗೆ ಬಂದು ಬಲವಂತವಾಗಿ ತಾಳಿ ಕಟ್ಟಿರುತ್ತಾರೆ. ಬಳಿಕ ಹಲವು ಬಾರಿ ನನ್ನನ್ನು ಅತ್ಯಾಚಾರ ಮಾಡಿರುತ್ತಾರೆ. ಬಳಿಕ ನಾನು ಗರ್ಭಿಣಿ ಕೂಡ ಆಗಿರುತ್ತೇನೆ. ಮನು ಗರ್ಭಪಾತ ಆಗುವ ಮಾತ್ರೆ ನೀಡಿದ್ದರು. ಇದಾದ ಬಳಿಕವೂ ಮತ್ತೊಮ್ಮೆ ಗರ್ಭಿಣಿ ಆಗಿದ್ದೆ. ಎರಡನೇ ಬಾರಿಯೂ ಗರ್ಭಪಾತ ಮಾಡಿಸಿದ್ದರು” ಎಂದು ದೂರಲಾಗಿದೆ.
ಸಧ್ಯ ಮಡೆನೂರು ಮನು ಪೊಲೀಸರ ಅತಿಥಿಯಾಗಿದ್ದು ಮುಂದೇನಾಗುತ್ತೆ ಕಾದು ನೋಡಬೇಕಿದೆ.
ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ https://chat.whatsapp.com/Jf6jZ0gyQAEA5GBRpHnkrv
https://news.google.com/publications/CAAqBwgKMPHDwgswk9_ZAw?hl=en-IN&gl=IN&ceid=IN:en
https://youtube.com/@janataa24?si=XsFcych2GMH0O6Gv
https://www.janataa24.com/turuvekere-protesting-against-stone-mining/
IAS,IPS,KAS, ಕನಸು ಹೊತ್ತ ವಿದ್ಯಾರ್ಥಿಗಳಿಗೆ ಗಾಡ್ ಫಾದರ್ ಆಗಿ ನಿಂತ ಮೂರ್ತಿ ಸಿ ಎಸ್.
Turuvekere: ಫಸಲಿಗೆ ಬಂದ 40 ತೆಂಗಿನ ಮರಗಳನ್ನ ಕಡಿದುರುಳಿಸಿದ ಕಿಡಿಗೇಡಿಗಳು.
Operation Sindor: POK ಪಾಕಿಸ್ತಾನದ 9 ಉಗ್ರ ನೆಲೆಗಳನ್ನು ನೆಲಸಮಗೊಳಿಸಿದ ಭಾರತ ಸೇನೆ.