Janataa24 NEWS DESK
Mandya: ಪತ್ನಿ ನೇಣಿಗೆ ಶರಣಾದದನ್ನು ಕಂಡು ಕೆರೆಗೆ ಹಾರಿ ಪ್ರಾಣ ಬಿಟ್ಟ ಪತಿ.
ಮಂಡ್ಯ: ಕೌಟುಂಬಿಕ ಕಲಹದಿಂದ ಪತ್ನಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಬೆನ್ನಲ್ಲೇ ಪತಿ ಕೆರೆಗೆ ಹಾರಿ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ಕೆಆರ್ ಪೇಟೆ ತಾಲೂಕಿನ ಗದ್ದೆಹೊಸರು ಗ್ರಾಮದಲ್ಲಿ ನಡೆದಿದೆ.
ತಂದೆ-ತಾಯಿ ಇಬ್ಬರನ್ನು ಕಳೆದುಕೊಂಡಿರುವ ಒಂದು ವರ್ಷದ ಮಗು ಇದೀಗ ಅನಾಥವಾಗಿದೆ. ಮೋಹನ್ ಹಾಗೂ ಸ್ವಾತಿ ಮೃತ ದಂಪತಿಯಾಗಿದ್ದು ಕಳೆದ ಎರಡು ವರ್ಷಗಳ ಹಿಂದೆ ಮದುವೆಯಾಗಿದ್ದರು. ದಂಪತಿಗೆ ಒಂದು ಹೆಣ್ಣು ಮಗು ಹುಟ್ಟಿದ್ದು, ಇದೀಗ ದಂಪತಿಯ ಕಲಹಕ್ಕೆ ಇಬ್ಬರು ಸಾವನ್ನಪ್ಪಿದ್ದು ಕೂಸು ಬಡವಾಗಿದೆ.
ಮೋಹನ್ ಮತ್ತು ಸ್ವಾತಿ ನಡುವೆ ಆಗಾಗ್ಗೆ ಜಗಳವಾಗುತ್ತಿತ್ತು. ಆದರೆ ನಿನ್ನೆ ಸಂಜೆ ಮತ್ತೆ ಮನೆಯಲ್ಲಿ ಯಾರು ಇಲ್ಲದೇ ಇಬ್ಬರ ನಡುವೆ ಜಗಳ ವಿಕೋಪಕ್ಕೆ ತಿರುಗಿದೆ. ನಂತರ ಸ್ವಾತಿ ಅವರ ಅಣ್ಣ, ಹೆಣ್ಣು ಮಗುವನ್ನು ಕರೆದುಕೊಂಡು ಮನೆಗೆ ಬಂದು ನೋಡಿದಾಗ ಸ್ವಾತಿ ಮೃತ ದೇಹ ನೇಣು ಬಿಗಿದ ಸ್ಥಿತಿಯಲ್ಲಿ ನೇತಾಡುತ್ತಿತ್ತು. ಇದರಿಂದ ಕೆರಳಿದ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದು ಇದು ಆತ್ಮಹತ್ಯೆ ಅಲ್ಲ ಕೊಲೆ ಎಂದು ಆರೋಪಿಸಿದರು. ಇದನ್ನು ಕಂಡ ಮೋಹನ್ ಅಲ್ಲಿಂದ ಪರಾರಿಯಾಗಿದ್ದನು.
ಆದರೆ ಇಂದು ಬೆಳಗ್ಗೆ ಮನೆಯಿಂದ ಅರ್ಧ ಕಿ.ಮೀ ದೂರದಲ್ಲಿ ಇದ್ದ ಕೆರೆಯಲ್ಲಿ ಮೋಹನ್ ಶವ ಸಹ ಪತ್ತೆಯಾಗಿದೆ. ಮೋಹನ್ ಕೆರೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಶಂಕಿಸಲಾಗಿದೆ. ಇನ್ನು ಆನ್ ಲೈನ್ ಬೆಟ್ಟಿಂಗ್ ಆಡಲು ಹಣ ನೀಡುವಂತೆ ಸ್ವಾತಿಗೆ ಕಿರುಕುಳ ನೀಡುತ್ತಿದ್ದ ಎಂದು ಸ್ವಾತಿಯ ಘೋಷಕರು ಆರೋಪಿಸಿದ್ದಾರೆ.
ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ https://chat.whatsapp.com/Jf6jZ0gyQAEA5GBRpHnkrv
https://news.google.com/publications/CAAqBwgKMPHDwgswk9_ZAw?hl=en-IN&gl=IN&ceid=IN:en
https://youtube.com/@janataa24?si=XsFcych2GMH0O6Gv
https://www.janataa24.com/iasipskas-who-stood-as-the-godfather-of-the/
https://www.janataa24.com/miscreants-uprooted-40-coconut-trees-turuvekere/