Janataa24 NEWS DESK
Dr.Manmohan Singh: ಮನಮೋಹನರಿಗೆ ಅಂತಿಮ ವಿದಾಯ ಸಲ್ಲಿಸಿದ ನರೇಂದ್ರ ಮೋದಿ.
ಮನಮೋಹನ್ ಸಿಂಗ್ ನಮ್ಮ ದೇಶದ ಮಾಜಿ ಪ್ರಧಾನಿ. ಭಾರತ ಕಂಡಂಥ ಅಪ್ರತಿಮ ನಾಯಕರಲ್ಲಿ ಒಬ್ಬರು. ಭಾರತದ ಆರ್ಥಿಕತೆಗೆ ಭದ್ರ ಬುನಾದಿ ಹಾಕಿದ ಆರ್ಥಿಕ ತಜ್ಞ. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ವಿಧಿವಶರಾಗಿದ್ದಾರೆ. 92 ವರ್ಷ ವಯಸ್ಸಿನ ಡಾ. ಮನಮೋಹನ್ ಸಿಂಗ್ ಅವರ ಆರೋಗ್ಯ ಸ್ಥಿತಿ ಗಂಭೀರವಾದ ಹಿನ್ನೆಲೆ ಅವರನ್ನು ಕಳೆದ ರಾತ್ರಿ ದೆಹಲಿಯ ಏಮ್ಸ್ಗೆ ಕರೆತರಾಗಿತ್ತು. ಬಳಿಕ ಅವರನ್ನು ತುರ್ತು ನಿಗಾ ಘಟಕದಲ್ಲಿ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ವಿಧಿವಶರಾಗಿದ್ದಾರೆ.
Dr.Manmohan Singh: ಸಿಂಗ್ ಜೀವನ ಚರಿತ್ರೆ
ಸೆಪ್ಟೆಂಬರ್ 26, 1932ರಂದು ಮನಮೋಹನ್ ಸಿಂಗ್ ಪಂಜಾಬ್‌ನ ಗಾಹ್‌ನ ಸಿಖ್ ಕುಟುಂಬದಲ್ಲಿ ಸಿಂಗ್ ಜನಿಸಿದ್ರು.. ಗುರುಮುಖ್ ಸಿಂಗ್ ಮತ್ತು ಅಮೃತ್ ಕೌರ್ ದಂಪತಿ ಪುತ್ರರಾದ ಇವರು ಉರ್ದು ಮಾಧ್ಯಮದಲ್ಲಿ ಆರಂಭಿಕ ಶಾಲಾ ಶಿಕ್ಷಣ ಪೂರೈಸಿದ್ರು.. 1948ರಲ್ಲಿ ಅಮೃತಸರದ ಹಿಂದೂ ಕಾಲೇಜಿನಲ್ಲಿ ಅಧ್ಯಯನ ಮಾಡಿ, ಪಂಜಾಬ್ ವಿ.ವಿಯಲ್ಲಿ ವ್ಯಾಸಂಗದ ಬಳಿಕ ಉನ್ನತ ಶಿಕ್ಷಣ ಮುಂದುವರಿಸಿದ್ರು
ಹೋಶಿಯಾರ್ಪುರದಲ್ಲಿ ಅರ್ಥಶಾಸ್ತ್ರ ಅಧ್ಯಯನ ಪೂರೈಸಿದ ಇವರು 1952ರಿಂದ 1954 ರಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಪಡೆದ್ರು. 1957ರಲ್ಲಿ ಕೇಂಬ್ರಿಡ್ಜ್ ವಿವಿಯಲ್ಲಿ ಅರ್ಥಶಾಸ್ತ್ರ ಟ್ರೈಪೋಸ್ ಪಡೆದು ಬಳಿಕ ಪಂಜಾಬ್ ವಿಶ್ವವಿದ್ಯಾಲಯದಲ್ಲಿ ಪ್ರಾಧ್ಯಾಪಕಾಗಿ ಸೇವೆ ಸಲ್ಲಿಸಿದ್ರು. 1957 ರಿಂದ 1959ರವರೆಗೆ ಅರ್ಥಶಾಸ್ತ್ರ ಹಿರಿಯ ಉಪನ್ಯಾಸಕ ಸೇವೆ ಸಲ್ಲಿಸಿದ್ದು, ಐ.ಎಂ.ಡಿ. ಲಿಟಲ್ ಅವರ ಮೇಲ್ವಿಚಾರಣೆಯಲ್ಲಿ ಪಿಹೆಚ್‌ಡಿ ಪಡೆದ ಅವರು 1959-1963ರವರೆಗೆ ಅರ್ಥಶಾಸ್ತ್ರದಲ್ಲಿ ರೀಡರ್ ಆಗಿ ಸೇವೆ ಸಲ್ಲಿಸಿದ್ರು..
ಮನಮೋಹನ್ ಸಿಂಗ್ ಅವರು 1991- 96ರ ಅವಧಿಯಲ್ಲಿ ಮಾಜಿ ಪ್ರಧಾನಿ ಪಿ.ವಿ. ನರಸಿಂಹರಾವ್ ಅವರ ನೇತೃತ್ವದ ಸರ್ಕಾರದಲ್ಲಿ ಹಣಕಾಸು ಸಚಿವರಾಗಿ ಕಾರ್ಯನಿರ್ವಹಿಸಿ ಮೆಚ್ಚುಗೆ ಗಳಿಸಿದ್ದರು. ಬಳಿಕ 2004ರಿಂದ 2014ರವರೆಗೆ ದೇಶದ ಪ್ರಧಾನಿಯಾಗಿ ಸೇವೆ ಸಲ್ಲಿಸಿದ್ದರು. ಇನ್ನು ಮನಮೋಹನ್ ಸಿಂಗ್ ನಿಧನದ ವಿಷಯ ತಿಳಿಯುತ್ತಿದ್ದಂತೆಯೇ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಸಂಸದೆ ಪ್ರಿಯಾಂಕಾ ಗಾಂಧಿ ಸೇರಿದಂತೆ ಹಲವು ರಾಜಕೀಯ ನಾಯಕರು ಆಸ್ಪತ್ರೆಗೆ ದೌಡಾಯಿಸಿದ್ರು. ಬೆಳಗಾವಿ ಕಾಂಗ್ರೆಸ್ ಕಾರ್ಯಕ್ರಮದಲ್ಲಿದ್ದ ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ಮಲ್ಲಿಕಾರ್ಜುನ್ ಖರ್ಗೆ ರಾತ್ರಿಯೇ ವಿಶೇಷ ವಿಮಾನದಲ್ಲಿ ದೆಹಲಿಗೆ ತೆರಳಿದ್ದಾರೆ.
ಆರ್ಥಿಕ ತಜ್ಞನ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಕಂಬನಿ ಮಿಡಿದಿದ್ದಾರೆ. ಭಾರತದ ಅತ್ಯಂತ ಗೌರವಾನ್ವಿತ ನಾಯಕರಲ್ಲಿ ಒಬ್ಬರಾದ ಡಾ. ಮನಮೋಹನ್ ಸಿಂಗ್ ಜಿ ಅವರನ್ನು ಕಳೆದುಕೊಂಡಿದೆ ಎಂದು ಸಂತಾಪ ಸೂಚಿಸಿದ್ದಾರೆ. ಸಿಂಗ್ ಜೊತೆಗಿನ ಒಡನಾಟವನ್ನು ಮೆಲುಕು ಹಾಕಿರುವ ಮೋದಿ, ಸಿಂಗ್ ಅವರ ಬುದ್ಧಿವಂತಿಕೆ ಮತ್ತು ನಮ್ರತೆ ಯಾವಾಗಲೂ ಗೋಚರಿಸುತ್ತದೆ ಎಂದು ಸ್ಮರಿಸಿದ್ದಾರೆ. ಸಿಂಗ್ ಅವರ ಪಾರ್ಥೀವ ಶರೀರ ದೆಹಲಿಯ ಅವರ ನಿವಾಸದಲ್ಲಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮನಮೋಹನ್ ಸಿಂಗ್ ಅವರ ನಿವಾಸಕ್ಕೆ ಭೇಟಿ ನೀಡಿ, ಅಂತಿಮ ದರ್ಶನ ಪಡೆದರು.
ಮನಮೋಹನ್ ಸಿಂಗ್ ಅವರಿಗೆ ಅಂತಿಮ ನಮನ ಸಲ್ಲಿಸಿದ ಮೋದಿಯವರು, ಅವರ ಕುಟುಂಬಕ್ಕೆ ಸಂತಾಪ ಸೂಚಿಸಿದರು.
ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ. ಮಾಜಿ ಪ್ರಧಾನಿ ದೇವೇಗೌಡ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಸಿಎಂ ಸಿದ್ದರಾಮಯ್ಯ ಸೇರಿದಂತೆ ರಾಜಕೀಯ ಗಣ್ಯರು ಸಂತಾಪ ಸೂಚಿಸಿದ್ದಾರೆ.
ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ https://chat.whatsapp.com/Jf6jZ0gyQAEA5GBRpHnkrv
https://news.google.com/publications/CAAqBwgKMPHDwgswk9_ZAw?hl=en-IN&gl=IN&ceid=IN:en
https://youtube.com/@janataa24?si=XsFcych2GMH0O6Gv
https://www.janataa24.com/iasipskas-who-stood-as-the-godfather-of-the/
https://www.janataa24.com/miscreants-uprooted-40-coconut-trees-turuvekere/
Mandya: ಪತ್ನಿ ನೇಣಿಗೆ ಶರಣಾದದನ್ನು ಕಂಡು ಕೆರೆಗೆ ಹಾರಿ ಪ್ರಾಣ ಬಿಟ್ಟ ಪತಿ.