ನೂತನ ಗ್ರಾ. ಪಂ.ಅಧ್ಯಕ್ಷರಾಗಿ ಎನ್ ಡಿ ಮೈಲಾರಯ್ಯ ಅವಿರೋಧ ಆಯ್ಕೆ.
Janataa24 NEWS DESK

ಗುಬ್ಬಿ: ತಾಲ್ಲೂಕಿನ ಚೇಳೂರು ಹೋಬಳಿಯ ಬಿದರೆ ಗ್ರಾಮ ಪಂಚಾಯಿತಿಯಲ್ಲಿ ತೆರವಾಗಿದ್ದ, ಅಧ್ಯಕ್ಷ ಸ್ಥಾನಕ್ಕೆ ಸರ್ವ ಸದಸ್ಯರ ಒಪ್ಪಿಗೆ ಮೇರೆಗೆ ನೂತನ ಅಧ್ಯಕ್ಷರಾಗಿ ಅಧ್ಯಕ್ಷರಾಗಿ ಎನ್ ಡಿ ಮೈಲಾರಯ್ಯ ಅವಿರೋಧವಾಗಿ ಆಯ್ಕೆಯಾದರು. ಚುನಾವಣಾಧಿಕಾರಿಯಾಗಿ ನಾಗಭೂಷಣ್ ಕರ್ತವ್ಯ ನಿರ್ವಹಿಸಿದರು.

ನೂತನ ಗ್ರಾಪಂ ಅಧ್ಯಕ್ಷ ಮೈಲಾರಯ್ಯ ಮಾತನಾಡಿ ಗ್ರಾಮ ಪಂಚಾಯಿತಿಯ ಸರ್ವಾಂಗಿಣ ಅಭಿವೃದ್ಧಿಗೆ ಸದಾ ಶ್ರಮಿಸುತ್ತೇನೆ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಮೂಲಕ ತಾಲ್ಲೂಕಿನಲ್ಲಿ ಮಾದರಿ ಗ್ರಾಮ ಪಂಚಾಯಿತಿಯನ್ನಾಗಿ ಮಾಡಲಾಗುವುದು.
ಶಾಸಕರ ಅನುದಾನ ಹಾಗೂ ಕಾಂಗ್ರೆಸ್ ಸರ್ಕಾರ ಇರುವುದರಿಂದ ಹೆಚ್ಚಿನ ಅನುದಾನವನ್ನು ತಂದು ಗ್ರಾಮ ಪಂಚಾಯತಿ ಸದಸ್ಯರ ಸಹಕಾರದೊಂದಿಗೆ ಹೆಚ್ಚಿನ ಅಭಿವೃದ್ಧಿಗೆ ಸದಾ ಬದ್ದ ಹಾಗೂ ಕುಡಿಯುವ ನೀರು, ಗ್ರಾಮ ನೈರ್ಮಲ್ಯಕ್ಕೆ ಆದ್ಯತೆ ನೀಡಲಾಗುವುದು ಎಂದು ತಿಳಿಸಿದರು.
ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಯತೀಶ್ ಮಾತನಾಡಿ ಗ್ರಾಮೀಣ ಅಭಿವೃದ್ಧಿ ಸಚಿವರ ಬಳಿ ತೆರಳಿ ನಮ್ಮ ಶಾಸಕರು ತೆರಳಿ ಖಂಡಿತವಾಗಿಯೂ ತಾಲೂಕಿನ ಎಲ್ಲಾ ಪಂಚಾಯ್ತಿಗಳಿಗೆ ಹೆಚ್ಚಿನ ಅನುದಾನ ತರುವುದಕ್ಕೆ ಪ್ರಯತ್ನ ಮಾಡಿದ್ದಾರೆ. ಅದರಂತೆ ಬಿದರೆ ಗ್ರಾಮ ಪಂಚಾಯಿತಿಗೂ ಹೆಚ್ಚಿನ ಸೌಲಭ್ಯವನ್ನು ಒದಗಿಸಿ ಪಂಚಾಯಿತಿ ವ್ಯಾಪ್ತಿಯ ಶಾಲೆ, ಆಸ್ಪತ್ರೆ ,ಸೇರಿದಂತೆ ಸಾರ್ವಜನಿಕ ಪ್ರದೇಶಗಳನ್ನು ಅಭಿವೃದ್ಧಿಗೊಳಿಸಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಕಾರ್ಯಕರ್ತರು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು.

ಈ ಸಂದರ್ಭದಲ್ಲಿ ಪಂಚಾಯಿತಿ ಉಪಾಧ್ಯಕ್ಷೆ
ಸುಶೀಲ, ಹಾಗೂ ಗ್ರಾ, ಪಂ,ಸರ್ವ ಸದಸ್ಯರು, ಕಾಂಗ್ರೆಸ್ ತಾಲ್ಲೂಕು ಅಧ್ಯಕ್ಷ ಕೆ ಆರ್ ವೆಂಕಟೇಶ್, ಮಾಜಿ ಗ್ರಾಪಂ ಅಧ್ಯಕ್ಷ ಶಿವಾಜಿ ರಾವ್, ಮುಖಂಡರಾದ ಮೂರ್ತಿ, ಮಾದಪಟ್ಟಣ ವಿರೂಪಾಕ್ಷ ಸೇರಿದಂತೆ ಹಲವು ಮುಖಂಡರು ಹಾಜರಿದ್ದರು.
ವರದಿ
ಗುಬ್ಬಿ: ಶ್ರೀಕಾಂತ್