Pavagada: ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಬಿ.ಎನ್.ಚಂದ್ರಪ್ಪನವರನ್ನು ಗೆಲ್ಲಿಸಿ– ಅಹಿಂದ ಅದ್ಯಕ್ಷ ರವಿಕುಮಾರ್.

Janataa24 NEWS DESK

Pavagada: ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಬಿ.ಎನ್.ಚಂದ್ರಪ್ಪನವರನ್ನು ಗೆಲ್ಲಿಸಿ– ಅಹಿಂದ ಅದ್ಯಕ್ಷ ರವಿಕುಮಾರ್.

ಪಾವಗಡ: ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ಬಿ.ಎನ್.ಚಂದ್ರಪ್ಪ ಅವರಿಗೆ ಅಹಿಂದ ಒಕ್ಕೂಟ ಬೆಂಬಲ ಸೂಚಿಸಲಿದೆ ಎಂದು ಸಂಘಟನೆಯ ಅಹಿಂದ ಅಧ್ಯಕ್ಷರಾದ ರವಿಕುಮಾರ್ ರವರು ಹೇಳಿದರು.

ಅಹಿಂದ ಕಛೇರಿಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು ಸಿದ್ದರಾಮಯ್ಯ ನೇತೃತ್ವದಲ್ಲಿ ಅಹಿಂದ ವರ್ಗದವರು ಸಂಘಟಕರಾಗಿದ್ದಾರೆ, ಸಂವಿಧಾನವನ್ನು ಬದಲಿಸಲು ಹೊರಟಿರುವ ಬಿಜೆಪಿಯನ್ನು ಸೋಲಿಸಬೇಕು.

ಪ್ರಧಾನ ಮಂತ್ರಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಎಲ್ಲಾ ಕ್ಷೇತ್ರಗಳಲ್ಲೂ ಅಬಿವೃದ್ಧಿ ಮಾಡಲು ವಿಫಲವಾಗಿದೆ ಬರೀ ಟೊಳ್ಳು ಭರವಸೆಗಳನ್ನು ಕೊಡುತ್ತಾ ಹತ್ತು ವರ್ಷಗಳ ಕಾಲ ನಿಷ್ಕ್ರಿಯವಾಗಿದೆ, ಕರ್ನಾಟಕ ರಾಜ್ಯದಲ್ಲಿ ಸಿದ್ದರಾಮಯ್ಯ ರವರ ನೇತೃತ್ವದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರ(Congress Government) ಐದು ಗ್ಯಾರಂಟಿಗಳನ್ನು ಕೊಟ್ಟು ಜನರ ಹಿತ ಕಾಪಾಡುತ್ತಿದೆ, ಮುಂದಿನ ದಿನಗಳಲ್ಲಿ ಕೇಂದ್ರದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಸ್ಥಿತ್ವಕ್ಕೆ ಬಂದರೆ ಹಲವು ಗ್ಯಾರಂಟಿಗಳನ್ನು ಜಾರಿಗೆ ತರಲಾಗುವುದು ಆದ್ದರಿಂದ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಬೇಕೆಂದು ತಿಳಿಸಿದರು ರಾಜ್ಯದಲ್ಲಿ ಅಹಿಂದ ನಾಯಕರಾದ ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah)ನವರ ಕೈ ಬಲಪಡಿಸಲು ಮುಂದಾಗಬೇಕೆಂದು ಕರೆ ನೀಡಿದರು.

ಪಾವಗಡ ತಾಲ್ಲೂಕಿನಲ್ಲಿ ಶಾಸಕರಾದ ವೆಂಕಟೇಶ್(Venkatesh) ಮತ್ತು ಮಾಜಿ ಸಚಿವ ವೆಂಕಟರಮಣಪ್ಪ(Venkataramanappa)ನವರ ನೇತೃತ್ವದಲ್ಲಿ ಕಾಂಗ್ರೆಸ್(Congress) ಪಕ್ಷ ಬಲಿಷ್ಠವಾಗಿದೆ, ಅವರುಗಳ ಮತ್ತು ಜನರ ಆಶೀರ್ವಾದದಿಂದ ನಾನು ತಾಲ್ಲೂಕು ಪಂಚಾಯಿತಿ ಸದಸ್ಯನಾಗಿದ್ದೆ, ಅವರ ಮಾರ್ಗದರ್ಶನದಲ್ಲಿ ನಾನೂ ಸೇರಿದಂತೆ ನಾವೆಲ್ಲರೂ ಕಾಂಗ್ರೆಸ್ ಪಕ್ಷ ಸಂಘಟನೆ ಮಾಡಿ ಚಂದ್ರಪ್ಪ ನವರನ್ನು ದೆಹಲಿಗೆ ಕಳುಹಿಸಬೇಕಾಗಿದೆ,ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ಬಿ.ಎನ್.ಚಂದ್ರಪ್ಪ(BN Chandrappa)ನವರು ಸರಳ ಸಜ್ಜನಿಕೆಯ ವ್ಯಕ್ತಿತ್ವ ಹೊಂದಿದವರಾಗಿದ್ದು ಅವರು ಈ ಹಿಂದೆ ಸಂಸದರಾಗಿದ್ದಾಗ ಚಿತ್ರದುರ್ಗ(Chithradurga)ಲೋಕಸಭಾ ಕ್ಷೇತ್ರದಲ್ಲಿ ಹಲವಾರು ಅಭಿವೃದ್ಧಿ ಯೋಜನೆಗಳನ್ನು ರೂಪಿಸಿದ್ದರು, ನಮ್ಮ ತಾಲೂಕಿಗೂ ಸಹ ಅಪಾರವಾದ ಕೊಡುಗೆ ನೀಡಿದ್ದಾರೆ ಅವರಿಗೆ ಹೆಚ್ಚಿನ ಮತಗಳನ್ನು ಕೊಡುವುದರ ಮೂಲಕ ಜಯಶೀಲ ರನ್ನಾಗಿ ಮಾಡಬೇಕೆಂದು ಕರೆ ನೀಡಿದರು ದೇಶ ಉಳಿಯಬೇಕಾದರೆ ಬಿಜೆಪಿ(BJP) ಅಧಿಕಾರದಿಂದ ತೊಲಗಬೇಕು. ಇಂಡಿಯಾ(INDIA) ಒಕ್ಕೂಟ ಅಧಿಕಾರಕ್ಕೆ ಬರಬೇಕು ಎಂಬುದು ನಮ್ಮ ಉದ್ದೇಶ.

ಅನೇಕರು ಕಾಂಗ್ರೆಸ್ ಅನ್ನು ಬೆಂಬಲಿಸುತ್ತಿದ್ದು, ಕಾಂಗ್ರೆಸ್ ಬೆಂಬಲಿಸಲು ಕಟುಬದ್ಧರಾಗಿದ್ದೇವೆ ಎಂದು ಹೇಳಿದರು.

ನಂತರ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯಲ್ಲಿ ನೀಡಿದ್ದ ಗ್ಯಾರಂಟಿ ಕಾರ್ಡ್ ಗಳನ್ನು ವಿತರಣೆ ಮಾಡಲಾಯಿತು ಅಹಿಂದ ಒಕ್ಕೂಟದ ಪದಾಧಿಕಾರಿಗಳನ್ನು ಹಾಗೂ ಸಾರ್ವಜನಿಕರನ್ನು ಲೋಕೇಶ್ ರವರು ಸ್ವಾಗತಿಸಿದರು ಈ ಸಂದರ್ಭದಲ್ಲಿ ಅಹಿಂದ ಸಂಘಟನೆಯ ಪದಾಧಿಕಾರಿಗಳು ಮತ್ತು ಸಾರ್ವಜನಿಕರು ಹಾಜರಿದ್ದರು.

ವರದಿ: ಇಮ್ರಾನ್ ಉಲ್ಲಾ. ಪಾವಗಡ

ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ https://chat.whatsapp.com/Jf6jZ0gyQAEA5GBRpHnkrv

https://www.janataa24.com/turuvekere-assault-on-village-panchayat-member/

Leave a Reply

Your email address will not be published. Required fields are marked *