Janataa24 NEWS DESK
PAVAGADA: NSS ಶಿಬಿರಗಳಿಂದ ವಿದ್ಯಾರ್ಥಿಗಳು ಗ್ರಾಮೀಣ ಮೌಲ್ಯಗಳನ್ನು ಕಲಿಯಲು ಸಾಧ್ಯ ಸಿಪಿಐ ಸುರೇಶ್.
ಪಾವಗಡ: ರಾಷ್ಟ್ರೀಯ ಸೇವಾ ಯೋಜನೆಯ ಶಿಬಿರಗಳಿಂದ ವಿದ್ಯಾರ್ಥಿಗಳು ಗ್ರಾಮೀಣ ಪ್ರದೇಶದ ಜನರ ಜೊತೆ ಬೆರೆತು ಮೌಲ್ಯಗಳನ್ನು ಕಲಿಯಲು ಸಾಧ್ಯವಾಗುತ್ತದೆ ಎಂದು ಪಾವಗಡ ಪೊಲೀಸ್ ಠಾಣೆಯ ಸಿಪಿಐ ಸುರೇಶ್(CPI Suresh) ತಿಳಿಸಿದರು.
ಶನಿವಾರ ಪಾವಗಡ ತಾಲೂಕಿನ ದೊಮ್ಮತಮರಿ ಗ್ರಾಮದಲ್ಲಿ ಶ್ರೀಮತಿ ಮತ್ತು ಶ್ರೀ ವೈ ರಂಗಯ್ಯ ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಿಂದ ಆಯೋಜಿಸಲಾಗಿದ್ದ ವಾರ್ಷಿಕ ವಿಶೇಷ ಶಿಬಿರದಲ್ಲಿ ಭಾಗವಹಿಸಿ ಮಾತನಾಡಿದ ಅವರು ಈ ಒಂದು ಶಿಬಿರವನ್ನು ನೋಡುತ್ತಿದ್ದರೆ ನಮ್ಮ ಬಾಲ್ಯದ ನೆನಪುಗಳು ಮರುಕಳಿಸುತ್ತಿವೆ, ಕಾಲೇಜುಗಳಲ್ಲಿ ಬರಿ ಪದ್ಯವನ್ನು ಪಠಿಸುವುದರ ಜೊತೆಗೆ ಈ ರೀತಿಯ ಪಠ್ಯೇತರ ಕೌಶಲ್ಯಾಧಾರಿತ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವುದರಿಂದ ಮನೋವಿಕಾಸ ಅಭಿವೃದ್ಧಿಯಾಗುತ್ತದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲರಾದ ಡಾ. ವಿ ಎನ್ ಮುರಳೀಧರ್ ಏಳು ದಿನಗಳ ಕಾಲ ನಡೆಯುವಂತಹ ವಿಶೇಷ ಶಿಬಿರದಲ್ಲಿ ಗ್ರಾಮೀಣ ಭಾಗದ ಜನರಿಗೆ ಶಿಬಿರದ ಬಗ್ಗೆ ಅರಿವು ಮೂಡಿಸುವುದರ ಜೊತೆಗೆ ಗ್ರಾಮೀಣ ನೈರ್ಮಲ್ಯ ಹಾಗೂ ಪ್ರಸ್ತುತ ವಿಷಯಗಳ ಬಗ್ಗೆ ಅರಿವು ಮೂಡಿಸಬೇಕು ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಶಿಬಿರಾಧಿಕಾರಿ ರಾಮಾಂಜನಿ ಮಾತನಾಡಿ ರಾಷ್ಟ್ರೀಯ ಸೇವಾ ಯೋಜನೆ ಎನ್ನುವುದು ಕಾಲೇಜು ಹಂತಗಳಲ್ಲಿ ವಿದ್ಯಾರ್ಥಿಗಳ ಸಮಾಜ ಸೇವೆಯನ್ನು ವೃದ್ಧಿಪಡಿಸುವ ಉದ್ದೇಶದಿಂದ ಸ್ಥಾಪಿಸಲಾಗಿತ್ತು ಅದರಂತೆ ಒಂದು ಗ್ರಾಮವನ್ನು ಆಯ್ಕೆ ಮಾಡಿ ಗ್ರಾಮದಲ್ಲಿನ ಆಚಾರ ವಿಚಾರ ಪರಂಪರೆಯನ್ನ ಕಲಿಯುವುದರ ಜೊತೆಗೆ ಸ್ವಚ್ಛತೆಯ ಬಗ್ಗೆ ಅರಿವು ಮೂಡಿಸುವಂತಹ ಕಾರ್ಯಕ್ರಮಗಳಲ್ಲಿ ಇದು ಅತಿ ಮುಖ್ಯವಾದದ್ದು ಎಂದರು
ಕಾರ್ಯಕ್ರಮದಲ್ಲಿ ಗ್ರಾ.ಮಂ ಅಧ್ಯಕರ ಗಂಗಮ್ಮ ಕೃಷ್ಣಪ್ಪ, ಗ್ರಾ.ಮಂ ಉಪಾಧ್ಯಕ್ಷ
ರಶೀದ್ ಬಾನು, ನಿವೃತ್ತ ಮುಖ್ಯ ಶಿಕ್ಷಕ ನಾರಾಯಣಪ್ಪ, ಪತ್ರಾಂಕಿತ ವ್ಯವಸ್ಥಾಪಕ ಬಿ.ಪಿ ಪ್ರಹ್ಲಾಲ್, ಶಿಬಿರಾಧಿಕಾರಿಗಳಾದ ಕೆ.ಪಿ ರಾಘವೇಂದ್ರ,ವೆಂಕಟರಮಣಪ್ಪ,
ಗಿರೀಶ್ ಹಾಗೂ ಶಿಬಿರ ಅಭ್ಯರ್ಥಿಗಳು ಹಾಜರಿದ್ದರು.
ವರದಿ: ಇಮ್ರಾನ್ ಉಲ್ಲಾ ಪಾವಗಡ.
ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ https://chat.whatsapp.com/Jf6jZ0gyQAEA5GBRpHnkrv
https://news.google.com/publications/CAAqBwgKMPHDwgswk9_ZAw?hl=en-IN&gl=IN&ceid=IN:en
https://youtube.com/@janataa24?si=XsFcych2GMH0O6Gv
https://www.janataa24.com/pavagada-theft-of-gold-worth-4-lakhs/