Document

Pendrive: ಸಂಸದ ಪ್ರಜ್ವಲ್ ರೇವಣ್ಣ ಜೆಡಿಎಸ್ ನಿಂದ ಉಚ್ಚಾಟನೆ.

Janataa24 NEWS DESK

Pendrive: ಸಂಸದ ಪ್ರಜ್ವಲ್ ರೇವಣ್ಣ ಜೆಡಿಎಸ್ ನಿಂದ ಉಚ್ಚಾಟನೆ| MP Prajwal Revanna expelled from JDS|

ಬೆಂಗಳೂರು: ಮನೆಯಲ್ಲಿ ಕೆಲಸಕ್ಕಿದ್ದ ಮಹಿಳೆ ಮತ್ತು ಅವರ ಮಗಳ ಮೇಲೆ ಲೈಂಗಿಕ ದೌರ್ಜನ್ಯ(Sexual Harassment) ನಡೆಸಿದ ಆರೋಪದಡಿ ಹೊಳೆನರಸೀಪುರ ಕ್ಷೇತ್ರದ ಶಾಸಕ ಎಚ್‌.ಡಿ.ರೇವಣ್ಣ(HD Revanna) ಮತ್ತು ಅವರ ಮಗ, ಹಾಸನ ಕ್ಷೇತ್ರದ ಸಂಸದ ಪ್ರಜ್ವಲ್‌ ರೇವಣ್ಣ(Prajwal Revanna) ವಿರುದ್ಧ ಎಫ್‌ಐಆರ್‌(FIR) ದಾಖಲಿಸಲಾಗಿದೆ. ಸಂತ್ರಸ್ತೆಯ ದೂರು ಆಧರಿಸಿ ಹೊಳೆನರಸೀಪುರ ನಗರ ಪೊಲೀಸ್‌ ಠಾಣೆ(Holenarsipura Police Station)ಯಲ್ಲಿ ಭಾನುವಾರ ಎಫ್‌ಐಆರ್‌ ದಾಖಲಿಸಲಾಗಿದೆ. ರೇವಣ್ಣ ಅವರನ್ನೇ ಮೊದಲ ಆರೋಪಿಯನ್ನಾಗಿ ಮಾಡಿದ್ದು, ಪ್ರಜ್ವಲ್‌ ರೇವಣ್ಣ ಎರಡನೇ ಆರೋಪಿ ಎಂದು ಉಲ್ಲೇಖಿಸಲಾಗಿದೆ.

ಪ್ರತಿಕ್ರಿಯಿಸದ ಆರೋಪಿಗಳು: ಪ್ರಕರಣದ ಬಗ್ಗೆ, ಆರೋಪಿಗಳಾದ ಎಚ್‌.ಡಿ.ರೇವಣ್ಣ ಹಾಗೂ ಪ್ರಜ್ವಲ್‌ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರು ಈಗ ಜೆಡಿಎಸ್ ಪಕ್ಷದಿಂದ ಉಚ್ಛಾಟನೆಯಾಗಿದ್ದಾರೆ. ಆದರೆ ಹಾಸನ ಲೋಕಸಭಾ ಚುನಾವಣೆಗೆ ಈಗಾಗಲೇ ಮತದಾನ ಮುಗಿದಿದೆ. ಜೂನ್ 4 ರಂದು ಹಾಸನ ಲೋಕಸಭಾ ಚುನಾವಣೆಯ ಫಲಿತಾಂಶ ಹೊರ ಬೀಳಲಿದೆ. ಇದೀಗ ಪ್ರಜ್ವಲ್ ರೇವಣ್ಣ ಅವರು ಜೆಡಿಎಸ್(JDS) ಪಕ್ಷದಿಂದ ಉಚ್ಛಾಟನೆಯಾಗಿರುವ ಹಿನ್ನೆಲೆಯಲ್ಲಿ ಚುನಾವಣೆಯಲ್ಲಿ ಗೆದ್ದರೆ ಸಂಸದ ಸ್ಥಾನದಲ್ಲಿ ಮುಂದುವರಿಯುತ್ತಾರಾ ಅನ್ನೋದು ಕುತೂಹಲ ಕೆರಳಿಸಿದೆ.

ಹಾಸನದಲ್ಲಿ ಸಂಸದ ಪ್ರಜ್ವಲ್ ರೇವಣ್ಣ ಅವರು ಸೋತರೆ ಅಶ್ಲೀಲ ವಿಡಿಯೋ ಪ್ರಕರಣದ ವಿಚಾರಣೆಯನ್ನು ಎದುರಿಸಬೇಕಾಗುತ್ತೆ. ಒಂದು ವೇಳೆ ಲೋಕಸಭಾ ಚುನಾವಣೆಯಲ್ಲಿ ಗೆದ್ದರೂ ಪ್ರಜ್ವಲ್ ರೇವಣ್ಣ ಅವರ ಸಂಸದ ಸ್ಥಾನಕ್ಕೆ ಕುತ್ತು ಬರಲಿದೆ. ಚುನಾವಣೆಯಲ್ಲಿ ಗೆದ್ದರೆ ಪ್ರಜ್ವಲ್ ರೇವಣ್ಣ ಅವರು ಸಂಸದರಾಗಿ ಮುಂದುವರಿಯುತ್ತಾರೆ. ಆದರೆ ಪ್ರಜ್ವಲ್ ರೇವಣ್ಣ ಅವರ ಮೇಲೆ SIT ತನಿಖೆ ನಡೆಯುತ್ತಿರುವುದರಿಂದ ಜೆಡಿಎಸ್‌ ಪಕ್ಷವೇ ರಾಜೀನಾಮೆ ನೀಡುವಂತೆ ಸೂಚಿಸುವ ಸಾಧ್ಯತೆ ಇದೆ. ವಿಡಿಯೋ ಪ್ರಕರಣದಲ್ಲಿ ಮೇಲ್ನೋಟಕ್ಕೆ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಜೆಡಿಎಸ್ ಪಕ್ಷದಿಂದ ಉಚ್ಛಾಟನೆ(Expelled) ಮಾಡಿ ಸದ್ಯಕ್ಕೆ ಮುಜುಗರದಿಂದ ತಪ್ಪಿಸಿಕೊಳ್ಳುವ ಪ್ರಯತ್ನ ಮಾಡಿದೆ.

https://www.janataa24.com/fire-accident-coirr-factory-worth-more-than-one/

ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ https://chat.whatsapp.com/Jf6jZ0gyQAEA5GBRpHnkrv

Document

Leave a Reply

Your email address will not be published. Required fields are marked *