Document

Rajya Sabha Election: ಬಿಜೆಪಿ, ಜೆಡಿಎಸ್ ಮೈತ್ರಿಗೆ ಹೀನಾಯ ಸೋಲು.

Janataa24 NEWS DESK

img 20240227 wa00152330850234504416166
Rajya Sabha Election: ಬಿಜೆಪಿ, ಜೆಡಿಎಸ್ ಮೈತ್ರಿಗೆ ಹೀನಾಯ ಸೋಲು.

Rajya Sabha Election


ಇಂದು ನಡೆದ ರಾಜ್ಯಸಭಾ ಚುನಾವಣೆಯಲ್ಲಿ 222 ಶಾಸಕರು ಮತ ಚಾಯಿಸಿದ್ದಾರೆ. ಸದ್ಯ ಆಡಳಿತಾರೂಢ ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದ ಮೂವರು ಅಭ್ಯರ್ಥಿಗಳಾದ ಅಜಯ್ ಮಾಕನ್, ನಾಸೀ‌ರ್ ಹುಸೇನ್, ಜಿ.ಸಿ ಚಂದ್ರಶೇಖ‌ರ್ ಅವರು ಭರ್ಜರಿ ಗೆಲುವು ಸಾಧಿಸುವ ಮೂಲಕ ರಾಜ್ಯಸಭೆಗೆ ಆಯ್ಕೆ ಆಗಿದ್ದಾರೆ. ಈ ಮೂಲಕ ಬಿಜೆಪಿ, ಜೆಡಿಎಸ್‌ ಮೈತ್ರಿ ಅಭ್ಯರ್ಥಿಗೆ ಹೀನಾಯವಾಗಿ ಸೋಲು ಅನುಭವಿಸಿದ್ದಾರೆ….

ಯಾರಿಗೆ ಎಷ್ಟು ಮತ?

ಕಾಂಗ್ರೆಸ್ – ಅಜಯ್ ಮಾಕನ್ – 47

ಕಾಂಗ್ರೆಸ್‌ – ನಾಸೀರ್ ಹುಸೇನ್ – 46

ಕಾಂಗ್ರೆಸ್‌ – ಜಿ.ಸಿ ಚಂದ್ರಶೇಖರ್ – 46

ಬಿಜೆಪಿ – ನಾರಾಯಣ ಸಾ ಭಾಂಡಗೆ – 48

ಜೆಡಿಎಸ್‌ – ಕುಪೇಂದ್ರ ರೆಡ್ಡಿ – 35 ..

rajya sabha election winners5284303908335482449
Rajya Sabha Election: ಬಿಜೆಪಿ, ಜೆಡಿಎಸ್ ಮೈತ್ರಿಗೆ ಹೀನಾಯ ಸೋಲು.

ರಾಜ್ಯಸಭಾ ಚುನಾವಣೆಯ ತಂತ್ರಗಾರಿಕೆ ರೂಪಿಸುವಲ್ಲಿ ಕಾಂಗ್ರೆಸ್‌ ಯಶಸ್ವಿಯಾಗಿದೆ. ಬಿಜೆಪಿ ಶಾಸಕ ಶಿವರಾಮ್‌ ಹೆಬ್ಬಾರ್ ಹೊರತುಪಡಿಸಿ ಎಲ್ಲಾ ಶಾಸಕರು ಇಂದು ಮತದಾನದಲ್ಲಿ ಭಾಗಿಯಾಗಿದ್ದರು. ಬಿಜೆಪಿ ನಾಯಕ ಎಸ್.ಟಿ ಸೋಮಶೇಖರ್ ಅವರು ಅಡ್ಡ ಮತದಾನ ಮಾಡಿದ್ದಾರೆ ಎನ್ನಲಾಗಿದ್ದು, ಕಾಂಗ್ರೆಸ್ ಪಕ್ಷದ ಮೂರು ಅಭ್ಯರ್ಥಿಗಳು ಭರ್ಜರಿ ಗೆಲುವು ಸಾಧಿಸಿದ್ದಾರೆ.

ಬಿಜೆಪಿಯ ನಾರಾಯಣ ಸಾ ಬಾಂಡ ಅವರು 48 ಮತ ಪಡೆದು ರಾಜ್ಯಸಭೆಗೆ ಮೊದಲ ಬಾರಿಗೆ ಆಯ್ಕೆಯಾಗಿದ್ದಾರೆ. ಜೆಡಿಎಸ್ನ ಕುಪೇಂದ್ರ ರೆಡ್ಡಿ ಅವರು ಮೈತ್ರಿ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದು, 10 ಮತಗಳ ಅಂತರದಲ್ಲಿ ಸೋಲು ಅನುಭವಿಸಿದ್ದಾರೆ.

images282292261351031302910761

ಕೈಹಿಡಿದ ಪಕ್ಷೇತರರು

images283296567818922685195561
ಮೇಲುಕೋಟೆ ಪಕ್ಷೇತರ ಶಾಸಕ ದರ್ಶನ್ ಪುಟ್ಟಣ್ಣಯ್ಯ


ಪಕ್ಷೇತರ ಶಾಸಕರಾದ ಗಾಲಿ ಜನಾರ್ದನ ರೆಡ್ಡಿ, ದರ್ಶನ್‌ ಪುಟ್ಟಣ್ಣಯ್ಯ, ಪುಟ್ಟ ಸಿದ್ದೇಗೌಡ, ಲತಾ ಮಲ್ಲಿಕಾರ್ಜುನ ಅವರು ಕಾಂಗ್ರೆಸ್‌ ಅನ್ನು ಬೆಂಬಲಿಸಿದ್ದು, ಕಾಂಗ್ರೆಸ್‌ ಅಭ್ಯರ್ಥಿಗಳ ಪರ ಮತ ಚಲಾಯಿಸಿದ್ದಾರೆ. ಅಲ್ಲದೆ, ಕಾಂಗ್ರೆಸ್‌ನ ಯಾವೊಬ್ಬ ಶಾಸಕರೂ ಅಡ್ಡ ಮತದಾನ ಮಾಡದೇ ಇದ್ದಿದ್ದರಿಂದ ನಿರಾಯಾಸವಾಗಿ ಗೆಲುವನ್ನು ಪಡೆದುಕೊಂಡಿದೆ

ಚಲಾವಣೆಯಾಗಿದ್ದು 222 ಮತಗಳು!


ವಿಧಾನಸಭೆಯಲ್ಲಿ ಒಟ್ಟು 224 ಮತ ಶಾಸಕರು ಇದ್ದಾರೆ. ರಾಜ್ಯಸಭೆಗೆ ನಾಲ್ವರು ಸದಸ್ಯರನ್ನು ಆಯ್ಕೆ ಮಾಡುವ ಸಂಬಂಧ ಇಷ್ಟು ಶಾಸಕರು ಮತದಾನವನ್ನು ಮಾಡಬೇಕಿತ್ತು. ಅದರಲ್ಲಿ ಕಾಂಗ್ರೆಸ್‌ ಶಾಸಕ ರಾಜಾವೆಂಕಟಪ್ಪ ನಾಯಕ ಅವರು ಭಾನುವಾರ (ಫೆ. 25) ಮೃತಪಟ್ಟರು. ಇನ್ನು ಮತದಾನ ಮಾಡಬೇಕಿದ್ದ ಬಿಜೆಪಿಯ ಶಿವರಾಂ ಹೆಬ್ಬಾರ್‌ ಬರಲೇ ಇಲ್ಲ.

https://youtube.com/@janataa24?si=XsFcych2GMH0O6Gv

https://www.janataa24.com/tumkur-mayasandra-village-elected-new-president-unopposed/

https://youtube.com/@janataa24?si=XsFcych2GMH0O6Gv

Document

Leave a Reply

Your email address will not be published. Required fields are marked *