JANATAA24 NEWS DESK
Siddaramaiah: ಮರ್ಯಾದೆ ಹತ್ಯೆ ವಿರುದ್ಧ ಹೊಸ ಕಾನೂನು ತರುವುದಾಗಿ ಮುಖ್ಯಮತ್ರಿ ಸಿದ್ಧರಾಮಯ್ಯ ಘೋಷಣೆ.

ಬೆಂಗಳೂರು: ಹುಬ್ಬಳ್ಳಿಯಲ್ಲಿ ನಡೆದ ಮರ್ಯಾದಾ ಹತ್ಯೆ ಪ್ರಕರಣ ಬೆನ್ನಲ್ಲೇ ಅದರ ವಿರುದ್ಧ ಹೊಸ ಕಾನೂನು ಜಾರಿಗೆ ತರಬೇಕು ಎಂಬ ಆಗ್ರಹ ಜೋರಾಗಿದೆ. ಇದೀಗ ಮರ್ಯಾದಾ ಹತ್ಯೆ ತಡೆ ಕಾನೂನು ತರುವ ಬಗ್ಗೆ ಸಿಎಂ ಸಿದ್ದರಾಮಯ್ಯ ಮಾತನಾಡಿದ್ದಾರೆ.
ಒಂದಷ್ಟು ಮಂದಿ ಮರ್ಯಾದೆ ಹತ್ಯೆ ತಡೆ ಕಾಯ್ದೆ ಜಾರಿಗೆ ಒತ್ತಾಯಿಸಿದ್ದಾರೆ. ಹುಬ್ಬಳ್ಳಿ, ಚಿತ್ರದುರ್ಗದಲ್ಲಿ ಅಂತಹ ಪ್ರಕಣಗಳು ನಡೆದಿವೆ. ಕಾಯ್ದೆ ತರೋದು ಮುಖ್ಯ ಅಲ್ಲ, ಅನುಷ್ಠಾನಕ್ಕೆ ತರಬೇಕು.
ಆ ಕೆಲಸ ಮಾಡುತ್ತೇನೆ ಎಂದಿದ್ದಾರೆ. ಆ ಮೂಲಕ ರಾಜ್ಯದಲ್ಲಿ ಮರ್ಯಾದೆ ಹತ್ಯೆ ವಿರೋಧಿ ಕಾಯ್ದೆ ಜಾರಿಗೆ ತರೋದಾಗಿ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.
ಕನ್ನಡಿಗರಿಗೆ ಉದ್ಯೋಗ ಮೀಸಲು
ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಕುರಿತು ಕ್ಯಾಬಿನೆಟ್ ಮೀಟಿಂಗ್‌ನಲ್ಲಿ ಚರ್ಚೆ ಮಾಡಿ ಅಮೇಲೆ ತೀರ್ಮಾನ ಮಾಡ್ತೀವಿ. ಈಗಲೇ ನಾನು ಹೇಳೋಕೆ ಆಗಲ್ಲ. ಕರ್ನಾಟಕದಲ್ಲಿ ಕನ್ನಡಿಗರಿಗೆ ಉದ್ಯೋಗ ಸಿಗಬೇಕು.
ಬೇರೆ ಯಾರಿಗೆ ಕೆಲಸ ಸಿಕ್ಕಿದ್ರೂ ಕನ್ನಡ ಮಾತಾಡಬೇಕು. ಕನ್ನಡಕ್ಕೆ ಅನ್ಯಾಯ ಆದಾಗ ಒಟ್ಟಾಗಿ ಹೋರಾಟ ಮಾಡೋಣ. ಕನ್ನಡಿಗರು ಯಾವುದಕ್ಕೂ ಕಮ್ಮಿ ಇಲ್ಲ. ಕನ್ನಡ ಭಾಷೆ, ನೆಲ, ಗಡಿ, ವಿಚಾರದಲ್ಲಿ ಒಟ್ಟಾಗಿ ಹೋರಾಟ ಮಾಡೋಣ ಎಂದಿದ್ದಾರೆ.
ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ https://chat.whatsapp.com/Jf6jZ0gyQAEA5GBRpHnkrv
https://news.google.com/publications/CAAqBwgKMPHDwgswk9_ZAw?hl=en-IN&gl=IN&ceid=IN:en
https://youtube.com/@janataa24?si=XsFcych2GMH0O6Gv
https://www.janataa24.com/turuvekere-protesting-against-stone-mining/
IAS,IPS,KAS, ಕನಸು ಹೊತ್ತ ವಿದ್ಯಾರ್ಥಿಗಳಿಗೆ ಗಾಡ್ ಫಾದರ್ ಆಗಿ ನಿಂತ ಮೂರ್ತಿ ಸಿ ಎಸ್.
Turuvekere: ಫಸಲಿಗೆ ಬಂದ 40 ತೆಂಗಿನ ಮರಗಳನ್ನ ಕಡಿದುರುಳಿಸಿದ ಕಿಡಿಗೇಡಿಗಳು.
Operation Sindor: POK ಪಾಕಿಸ್ತಾನದ 9 ಉಗ್ರ ನೆಲೆಗಳನ್ನು ನೆಲಸಮಗೊಳಿಸಿದ ಭಾರತ ಸೇನೆ.