Siddaramaiah: ಬರ ಪರಿಹಾರ ಬಿಡುಗಡೆ ಮಾಡದ ಕೇಂದ್ರ ಸರ್ಕಾರದ ವಿರುದ್ದ ಸುಪ್ರೀಂಗೆ ರಿಟ್ ಅರ್ಜಿ- ಸಿದ್ದರಾಮಯ್ಯ

Janataa24 NEWS DESK

Siddaramaiah: ಬರ ಪರಿಹಾರ ಬಿಡುಗಡೆ ಮಾಡದ ಕೇಂದ್ರ ಸರ್ಕಾರದ ವಿರುದ್ದ ಸುಪ್ರೀಂಗೆ ರಿಟ್ ಅರ್ಜಿ- ಸಿದ್ದರಾಮಯ್ಯ

CM Siddaramaiah

ಬೆಂಗಳೂರು: ಈ ವರುಷ ವಾಡಿಕೆಯಂತೆ ಮಳೆ ಬೆಳೆಯಾಗದೇ ಪ್ರತಿ ವರ್ಷಕ್ಕಿಂತ ಈ ವರುಷ ಅಧಿಕ ತಾಪಮಾನ(Temperature) ಇರುವ ಕಾರಣ ರಾಜ್ಯದಲ್ಲಿ ಬರಗಾಲ ಎದುರಾಗಿದೆ. ಇಂತಹ ಪರಿಸ್ಥಿತಿಯಲ್ಲೂ ಕೂಡ ಕೇಂದ್ರ ಸರ್ಕಾರ ಬರ ಪರಿಹಾರಕ್ಕೆ ಹಣಕಾಸು(Relief Fund) ಮಾಡದೇ ಕರುನಾಡಿಗೆ ಧೋರಣೆ ಮಾಡುತ್ತಿದೆ. ಇಂತಹ ಸಂದರ್ಭದಲ್ಲಿ ರಾಜ್ಯಕ್ಕೆ ಬರ ಪರಿಹಾರ ನೀಡದ ಕೇಂದ್ರದ ವಿರುದ್ಧ ಸುಪ್ರೀಂ ಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ(CM Siddaramaiah).

ತೀವ್ರ ಬರಗಾಲದಿಂದ ತತ್ತರಿಸಿರುವ ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ಮಾಡುವಂತೆ ಮೇಲಿಂದ ಮೇಲೆ ಮನವಿ ಮಾಡಿದರೂ ಹಣ ಬಿಡುಗಡೆ ಮಾಡದ ಕೇಂದ್ರ ಸರ್ಕಾರದ ವಿರುದ್ಧ ಸುಪ್ರೀಂ ಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah) ಅವರು ಶನಿವಾರ ಹೇಳಿದ್ದಾರೆ.

ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗೋಷ್ಠಿ ನಡೆಸಿ ಮೋದಿ ನೇತೃತ್ವದ ಕೇಂದ್ರ ಬಿಜೆಪಿ ಸರ್ಕಾರ ಕರ್ನಾಟಕ ಇಷ್ಟು ಬರಗಾಲ ಎದುರಿಸುತ್ತಿದ್ದರು ಅನುದಾನ ನೀಡದೇ ಸಮಯ ಕಳೆಯುತ್ತಿದೆ. ಕರ್ನಾಟಕ ಮೇಲೆ ಯಾಕಿಷ್ಟು ಧೋರಣೆ ಎಂದು ಕೇಂದ್ರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಸಿಎಂ, ರಾಜ್ಯದಲ್ಲಿ ತೀವ್ರ ಬರ ಆವರಿಸಿದ್ದರೂ ಕೂಡ ಕೇಂದ್ರ ಸರ್ಕಾರ ಇನ್ನೂ ಬರ ಪರಿಹಾರ ಘೋಷಣೆ ಮಾಡಿಲ್ಲ. ಐದು ತಿಂಗಳ ಕಾಲ ಕಾದರೂ ಇನ್ನೂ ಬಿಡುಗಡೆ ಮಾಡಿಲ್ಲ. ಹೀಗಾಗಿ ಬರ ಪರಿಹಾರ ಕೊಡಿಸುವಂತೆ ಸುಪ್ರೀಂ ಕೋರ್ಟ್ ನಲ್ಲಿ ಆರ್ಟಿಕಲ್ 32ರ ಅಡಿಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ರಿಟ್ ಅರ್ಜಿ ಸಲ್ಲಿಸಿದ್ದೇವೆ ಎಂದು ತಿಳಿಸಿದರು.

ಸುಪ್ರೀಂ ಕೋರ್ಟ್ ವಾರದ ರಜೆ ಮುಗಿದ ಬಳಿಕ ಅರ್ಜಿಯನ್ನು ವಿಚಾರಣೆಗೆ ತೆಗೆದುಕೊಳ್ಳಲಿದೆ. ಕೇಂದ್ರ ಸರ್ಕಾರದ ವಿರುದ್ಧ ಕಾನೂನು ಹೋರಾಟ ಮಾಡಲು ನಿರ್ಧರಿಸಿದ್ದೇವೆ ಎಂದು ಸಿಎಂ ಹೇಳಿದರು. ರಾಜ್ಯದ ಬರಗಾಲದ ಕುರಿತು ಕಳೆದ ವರ್ಷ ಸೆಪ್ಟೆಂಬರ್ ಮತ್ತು ಅಕ್ಟೋಬರ್ ಅವಧಿಯಲ್ಲಿ ರಾಜ್ಯ ಸರ್ಕಾರ ಅಧ್ಯಯನ ನಡೆಸಿತು.

ಅಧ್ಯಯನ ಬಳಿಕ ರಾಜ್ಯದಲ್ಲಿ 223 ತಾಲೂಕುಗಳು ಬರಪೀಡಿತ ಎಂದು ಘೋಷಿಸಿದ್ದೇವೆ. ಇದರಲ್ಲಿ 196 ತಾಲೂಕುಗಳು ತೀವ್ರ ಬರಗಾಲ ಎದುರಿಸುತ್ತಾ ಸಂಕ್ಷಷ್ಟದಿಂದ ಕೂಡಿವೆ. ಬರಗಾಲದಿಂದ 48 ಲಕ್ಷ ಹೆಕ್ಟೇರ್ ಪ್ರದೇಶ ಕೃಷಿ, ತೋಟಗಾರಿಕೆ ಬೆಳೆ ನಷ್ಟ ಆಗಿದೆ. ಅಧ್ಯಯನ ವರದಿಯನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದ್ದೇವೆ. ಕೇಂದ್ರ ಸರ್ಕಾರಕ್ಕೆ 2023ರ ಸೆಪ್ಟೆಂಬರ್ 23, ನವೆಂಬರ್ 15 ಮತ್ತು ಅಕ್ಟೋಬರ್ 20 ಎಂದು ಮೂರು ಬಾರಿ ಮನವಿ ಸಲ್ಲಿಸಿದ್ದೇವೆ ಎಂದರು.

ಮೊದಲ ಮನವಿ ಕೊಟ್ಟ ಬಳಿಕ, ಒಂದು ವಾರದೊಳಗೆ ಕೇಂದ್ರ ಅಧ್ಯಯನ ತಂಡ ರಾಜ್ಯಕ್ಕೆ ಆಗಮಿಸಿ ಅಧ್ಯಯನ ನಡೆಸಬೇಕು. ಆದರೆ ಕೇಂದ್ರದ ತಂಡ ಅಕ್ಟೋಬರ್ ತಿಂಗಳಲ್ಲಿ‌ ಬಂದಿದ್ದತ್ತು. ಅ.9 ರಿಂದ 14ರ ವರೆಗೆ 10 ಅಧಿಕಾರಿಗಳು ಮೂರು ತಂಡ ಪರಿಶೀಲನೆ ನಡೆಸಿದೆ. ಪರಿಶೀಲನೆ ಬಳಿಕ‌ ತಂಡ ಕೇಂದ್ರ ಸರ್ಕಾರಕ್ಕೆ ವರದಿ‌ ನೀಡಿದೆ. ವರದಿ ನೀಡಿ ಒಂದು ತಿಂಗಳಲ್ಲಿ ಆಯಾ ರಾಜ್ಯಗಳಿಗೆ ಪರಿಹಾರ ಕೊಡಬೇಕು. ಆದರೆ ಇದುವರೆಗೂ ಯಾವುದೇ ಪರಿಹಾರ ಬಿಡುಗಡೆ ಮಾಡಿಲ್ಲ. ಬರ ಪರಿಹಾರವನ್ನು ಕೇಂದ್ರ ಸರ್ಕಾರ ಶೇ.75ರಷ್ಟು ಮತ್ತು ರಾಜ್ಯ ಸರ್ಕಾರ ಶೇ.25ರಷ್ಟು ನೀಡುತ್ತವೆ ಎಂದು ಸಿಎಂ ತಿಳಿಸಿದರು.

ಬರ ಪರಿಹಾರ ವಿಚಾರದಲ್ಲಿ ಕೇಂದ್ರ ಸರ್ಕಾರ ಕಾಯ್ದೆ ಉಲ್ಲಂಘಿಸಿದೆ. ಕಾನೂನು ಮಾಡೋದು ಸಂವಿಧಾನದ ಅಡಿಯಲ್ಲಿ ಅಲ್ವಾ? ನಿಯಮ ಮೀರಿದರೇ ಕೋರ್ಟ್ನಲ್ಲಿ‌ ನ್ಯಾಯ ಕೇಳಬೇಕು ಅಲ್ವಾ? ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಅನ್ಯಾಯ ಆಗಿದೆ. ಕೇಂದ್ರ ಸರ್ಕಾರದಿಂದ ಎಲ್ಲವೂ ನಿಯಮ ಬಾಹಿರ ಆಗಿದೆ. ರೈತರಿಗೆ ಕಷ್ಟ ಇದೆ ಎಂದು‌ ನಾವು ತಾತ್ಕಾಲಿಕವಾಗಿ 2,000 ರೂ. ಕೊಟ್ಟಿದ್ದೇವೆ. 33 ಲಕ್ಷದ 44 ಸಾವಿರ ರೈತರಿಗೆ 650 ಕೋಟಿ‌ ಬಿಡುಗಡೆ ಮಾಡಿದ್ದೇವೆ. ಬರಗಾಲ ನಿಭಾಯಿಸುವ ಕೆಲಸವನ್ನ ನಾವು ಯಶಸ್ವಿಯಾಗಿ ಮಾಡಿದ್ದೇವೆ ಸಿದ್ದರಾಮಯ್ಯನವರು ಹೇಳಿದರು.

ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ

https://chat.whatsapp.com/Jf6jZ0gyQAEA5GBRpHnkrv

Subscribe YouTube

https://youtube.com/@janataa24?si=XsFcych2GMH0O6Gv

Bagalakote : ಕಾಂಗ್ರೆಸ್ ನ ಅಭ್ಯರ್ಥಿ ಸಂಯುಕ್ತ ಪಾಟೀಲ ಗೆ ಬೆಂಬಲ ಸೂಚಿಸಿದ ಆಮ್ ಆದ್ಮಿ ಪಕ್ಷದ ಯುವ ರಾಜ್ಯ ಉಪಾಧ್ಯಕ್ಷ ಆನಂದ

Leave a Reply

Your email address will not be published. Required fields are marked *