Janataa24 NEWS DESK
Sonu Srinivas Gowda : ಸೋನು ಶ್ರೀನಿವಾಸ್ ಗೌಡ ಅವರಿಗೆ ಕಾನೂನು ಸಂಕಷ್ಟ

ಬೆಂಗಳೂರು: ಕಾನೂನು ಬಾಹಿರವಾಗಿ ಹೆಣ್ಣು ಮಗುವುನ್ನು ದತ್ತು ಪಡೆದ ಆರೋಪ ಎದುರಿಸುತ್ತಿರುವ ಸೋನು ಶ್ರೀನಿವಾಸ್ ಗೌಡ ಅವರನ್ನು ರಾಯಚೂರಿಗೆ ಕರೆದೊಯ್ದ ಪೊಲೀಸರು ತನಿಖೆ ಮುಂದುವರೆಸುತ್ಯಿದ್ದಾರೆ. ಹಾಗಾಗಿ ನ್ಯಾಯಾಲಯವು ಅವರನ್ನು ನಾಲ್ಕು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ಬಾಲಕಿ ಪರಿಚಯವಾಗಿದ್ದ ಸ್ಥಳ ಮತ್ತು ಬಾಲಕಿಯ ನಿವಾಸ ಸೇರಿ ಹಲವು ಕಡೆಗಳಿಗೆ ಭೇಟಿ ನೀಡಿ ಪೊಲೀಸರು ಪರಿಶೀಲನೆ ನಡೆಸಲಿದ್ದಾರೆ.
ಸಾಮಾಜಿಕ ಜಾಲತಾಣ ಹಾಗೂ ಬಿಗ್ ಬಾಸ್ ರಿಯಾಲಿಟಿ ಶೋ ಮೂಲಕ ಜನಪ್ರೀಯತೆ ಗಳಿಸಿದ್ದ ಸೋನು ಶ್ರೀನಿವಾಸ್ ಗೌಡ ಅವರಿಗೆ ಈಗ ಕಾನೂನಿನ ಸಂಕಷ್ಟದ ತೊಡಕು ಹೆಚ್ಚಾಗಿದೆ. ಕಾನೂನು ಬಾಹಿರವಾಗಿ ಹೆಣ್ಣು ಮಗುವನ್ನು ದತ್ತು ಪಡೆದ ಆರೋಪ ಅವರ ಮೇಲಿದೆ. ಈ ಪ್ರಕರಣದಲ್ಲಿ ಅವರನ್ನು ಬೆಂಗಳೂರಿನ(Bangalore) ಮಾಗಡಿ ರಸ್ತೆಯ ಬ್ಯಾಡರಹಳ್ಳಿ ಪೊಲೀಸರು ಬಂಧಿಸಿದ್ದು ಹೆಚ್ಚಿನ ವಿಚಾರಣೆಗಾಗಿ 4 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿ ಸಿಜೆಎಂ ಕೋರ್ಟ್ ಆದೇಶ ನೀಡಿದೆ. ಮಾರ್ಚ್ 25ರವರೆಗೆ ಸೋನು ಗೌಡ ಅವರು ಪೊಲೀಸ್ ಕಸ್ಟಡಿಯಲ್ಲಿ ಇರಲಿದ್ದಾರೆ.
ಮಾರ್ಚ್ 25ರ ಸೋಮವಾರ ಸೋನು ಶ್ರೀನಿವಾಸ್ ಗೌಡ ಅವರನ್ನು ಪೊಲೀಸರು ಕೋರ್ಟ್ಗೆ ಹಾಜರುಪಡಿಸಬೇಕಿದೆ.ಬ್ಯಾಡರಹಳ್ಳಿ ಠಾಣೆ ಪೊಲೀಸರು ಸೋನು ಶ್ರೀನಿವಾಸ್ ಗೌಡ ಅವರ ವಿಚಾರಣೆ ಪೋಲಿಸರು ಮುಂದುವರಿಸಿದ್ದಾರೆ. ರಾತ್ರಿ ವೇಳೆ ಮಹಿಳಾ ಸಾಂತ್ವನ ಕೇಂದ್ರದಲ್ಲಿ ಅವರನ್ನು ಇರಿಸಲಾಗುವುದು.
ಕೆಲವು ತಿಂಗಳ ಹಿಂದೆ ಸೋನು ಶ್ರೀನಿವಾಸ್ ಗೌಡ ಅವರು ಹೆಣ್ಣು ಮಗುವನ್ನು ದತ್ತು ಪಡೆದಿರುವುದಾಗಿ ಹೇಳಿಕೊಂಡಿದ್ದರು. ಆದರೆ ಅವರು ದತ್ತು ಪ್ರಕ್ರಿಯೆಯ ಕಾನೂನನ್ನು ಪಾಲಿಸಿಲ್ಲ ಎಂಬುದು ತಿಳಿದು ಬಂದ ಬಳಿಕ ರಾಜ್ಯ ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ಗೀತಾ ಅವರು ಪೊಲೀಸರಿಗೆ ದೂರು ನೀಡಿದ್ದರು. ಅದರನ್ವಯ ಸೋನು ಗೌಡ ಅವರನ್ನು ಪೊಲೀಸರು ಬಂಧಿಸಿದರು.
ನಾಳೆ (ಮಾರ್ಚ್ 23) ಬೆಳಗ್ಗೆ ಠಾಣೆಗೆ ಕರೆತಂದು ವಿಚಾರಣೆ ನಡೆಸಲಿದ್ದಾರೆ.
ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ
https://chat.whatsapp.com/Jf6jZ0gyQAEA5GBRpHnkrv
Subscribe YouTube