Document

SSLC ಯಲ್ಲಿ ಹೆಚ್ಚು ಅಂಕ ಪಡೆದ ಮಕ್ಕಳಿಗೆ ಲ್ಯಾಪ್ಟಾಪ್ ವಿತರಿಸಿದ ಶಾಸಕರು.

Janataa24 NEWS DESK 

 

 

SSLC ಯಲ್ಲಿ ಹೆಚ್ಚು ಅಂಕ ಪಡೆದ ಮಕ್ಕಳಿಗೆ ಲ್ಯಾಪ್ಟಾಪ್ ವಿತರಿಸಿದ ಶಾಸಕರು.
SSLC ಯಲ್ಲಿ ಹೆಚ್ಚು ಅಂಕ ಪಡೆದ ಮಕ್ಕಳಿಗೆ ಲ್ಯಾಪ್ಟಾಪ್ ವಿತರಿಸಿದ ಶಾಸಕರು.

 

 

ಪಾವಗಡ ತಾಲ್ಲೂಕಿನಲ್ಲಿ 2022-23 ಸಾಲಿನ ಹತ್ತನೇ ತರಗತಿಯಲ್ಲಿ ಅತೀ ಹೆಚ್ಚು ಅಂಕಗಳಿಸಿ ರ್‍ಯಾಂಕ್ ಗಳಿಸಿದ ಮೊದಲ ಮೂರು ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆಯ ವತಿಯಿಂದ ಲ್ಯಾಪ್ ಟಾಪ್ ವಿತರಣಾ ಕಾರ್ಯಕ್ರಮವನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಈ ದಿನ ಹಮ್ಮಿಕೊಳ್ಳಲಾಗಿತ್ತು.

ಮಾನ್ಯ ಜನಪ್ರಿಯ ಶಾಸಕರಾದ ಹೆಚ್ ವಿ ವೆಂಕಟೇಶ್ ರವರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಲ್ಯಾಪ್ ಟಾಪ್ ವಿತರಿಸಿ. ಈ ಬಾರಿ ಎಸ್ ಎಸ್ ಎಲ್ ಸಿ ಫಲಿತಾಂಶ ಬಹಳಷ್ಟು ಕುಗ್ಗಿದೆ ಮುಂದಿನ ದಿನಗಳಲ್ಲಿ ಶಿಕ್ಷಕರು ಶ್ರಮಿಸಬೇಕಾಗಿದೆ. ತಾಲೂಕು ಉತ್ತಮ ಫಲಿತಾಂಶ ತರಲು ಕ್ಷಮಿಸಿ ಎಂದರು. ವೈಯಕ್ತಿಕವಾಗಿ ಪ್ರೋತ್ಸಾಹ ಧನ ನೀಡಿ ವಿದ್ಯಾರ್ಥಿಗಳ ಮುಂದಿನ ಶೈಕ್ಷಣಿಕ ಜೀವನಕ್ಕೆ ಶುಭ ಕೋರಿದರು..

ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಇಂದ್ರಣಮ್ಮ ನವರು,ಬ್ಲಾಕ್ ಕಾಂಗ್ರೆಸ್ ನಗರಾಧ್ಯಕ್ಷರಾದ ಸುದೇಶ್ ಬಾಬು ರವರು,ಮುಖಂಡ ಶಂಕರ್ ರೆಡ್ಡಿ ರವರು,BRC ವೆಂಕಟೇಶ್ ರವರು ಸೇರಿ ಹಲವು ಮುಖಂಡರು, ಸಿಬ್ಬಂದಿಯವರು ಉಪಸ್ಥಿತರಿದ್ದರು..

 

 

 ವರದಿ: ಇಮ್ರಾನ್ ಉಲ್ಲಾ.ಪಾವಗಡ

ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ https://chat.whatsapp.com/Jf6jZ0gyQAEA5GBRpHnkrv

https://news.google.com/publications/CAAqBwgKMPHDwgswk9_ZAw?hl=en-IN&gl=IN&ceid=IN:en

https://youtube.com/@janataa24?si=XsFcych2GMH0O6Gv

https://www.instagram.com/janataa24?igsh=aXM0Ym9zb2Y2YTRn

https://www.janataa24.com/pavagada-nss-students-can-learn-rural-values/

DATAMER AI ಎಂಬ ಆನ್ಲೈನ್ ಆಪ್ ನಿಂದ ಕೋಟಿ ಕೋಟಿ ಹಣ ವಂಚನೆ.

Document

Leave a Reply

Your email address will not be published. Required fields are marked *