Document

SSLC: ಪರೀಕ್ಷೆ ಬರೆಯುವಾಗ ಆಸ್ವಸ್ಥಗೊಂಡ ವಿದ್ಯಾರ್ಥಿ ಸಾವು.

Janataa24 NEWS DESK

SSLC: ಪರೀಕ್ಷೆ ಬರೆಯುವಾಗ ಆಸ್ವಸ್ಥಗೊಂಡ ವಿದ್ಯಾರ್ಥಿ ಸಾವು.

Student Death

ತುರುವೇಕೆರೆ: ಸೋಮವಾರ ಪರೀಕ್ಷಾ ಕೊಠಡಿಯಲ್ಲಿ ಪರೀಕ್ಷೆ ಬರೆಯುವ ವೇಳೆ ವಿದ್ಯಾರ್ಥಿ ಅಸ್ವಸ್ಥನಾಗಿದ್ದು, ಗಾಬರಿಗೊಂಡ ಶಿಕ್ಷಕರು ಹತ್ತಿರದ ಆಸ್ವತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ವಿಧಿವಶ.

ಮೃತ ವಿದ್ಯಾರ್ಥಿ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಚಿಕ್ಕರಾಂಪುರ ನಿವಾಸಿ ಸಿದ್ದೇಶ್ ಅವರ ಪುತ್ರ ಮೋಹನ್ ಕುಮಾರ್(Mohan Kumar) ಸಿ.ಎಸ್ (16) ಎಂದು ಗುರುತಿಸಲಾಗಿದೆ. ಮೃತ ವಿದ್ಯಾರ್ಥಿ ತಾಲ್ಲೂಕಿನ ಲೋಕಮ್ಮನಹಳ್ಳಿ ಗೇಟ್ನ ಶ್ರೀ ಕಂಚಿರಾಯ ಸನಿವಾಸ ಪ್ರೌಢ ಶಾಲೆಯ ಹತ್ತನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದನೆಂದು ತಿಳಿದು ಬಂದಿದೆ.

ಪಟ್ಟಣದ ದಬ್ಬೇಘಟ್ಟ ರಸ್ತೆಯಲ್ಲಿನ ಸರಸ್ವತಿ ಬಾಲಿಕಾ ಪ್ರೌಢ ಶಾಲಾ ಪರೀಕ್ಷಾ ಕೇಂದ್ರದಲ್ಲಿ ಮೋಹನ್ ಕುಮಾರ್ ಸಿ.ಎಸ್ ಸೋಮವಾರ ಬೆಳಗ್ಗೆ ಪ್ರಥಮ ಭಾಷೆ ಕನ್ನಡ ವಿಷಯವನ್ನು ಬರೆಯುತ್ತಿದ್ದ ವೇಳೆ ಅಸ್ವಸ್ಥಗೊಂಡಿದ್ದಾನೆ.

ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿದ್ದಾರೆ. ಕೆಲ ಸಮಯದ ನಂತರ ಮತ್ತೆ ತೀವ್ರ ಅಸ್ಪಸ್ಥಗೊಂಡಿದ್ದರಿಂದ ವೈದ್ಯರು ಜಿಲ್ಲಾ ಸಾರ್ವಜನಿಕ ಆಸ್ಪತ್ರೆಗೆ ಕರೆದುಕೊಂಡು ಹೋಗುವಂತೆ ಶಿಕ್ಷಕರಿಗೆ ತಿಳಿಸಿದ್ದಾರೆ. ತಕ್ಷಣ ಆಂಬ್ಯೂಲೆನ್ಸ್ ಮೂಲಕ ಜಿಲ್ಲಾ ಆಸ್ಪತ್ರೆಗೆ ಸಾಗಿಸುವಾಗ ಗುಬ್ಬಿ ಸಮೀಪ ಸಾವನ್ನಪ್ಪಿದ್ದರಿಂದ ಗುಬ್ಬಿ ಸಾರ್ವಜನಿಕ ಆಸ್ಪತ್ರೆಗೆ ಕೊಂಡೊಯ್ದಿದ್ದಾರೆ.

ಮಧ್ಯಾಹ್ನ ಹುಲ್ಲೇಕೆರೆಯ ಬಸವೇಶ್ವರ ಸಂಯುಕ್ತ ಪದವಿಪೂರ್ವ ಪ್ರೌಢ ಶಾಲಾ ವಿಭಾಗದ ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರದಲ್ಲಿ ಮತ್ತೊರ್ವ ವಿದ್ಯಾರ್ಥಿ ರೋಹಿತ್ ಅಸ್ವಸ್ಥಗೊಂಡಿದ್ದರಿಂದ ದಂಡಿನಶಿವರ (Dandinashivara) ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಮತ್ತೆ ಪರೀಕ್ಷಾ ಕೇಂದ್ರಕ್ಕೆ ಬಿಡಲಾಗಿದೆಯೆಂದು ಇಲಾಖಾ ಮೂಲಗಳಿಂದ ತಿಳಿದು ಬಂದಿದೆ.

ಒಟ್ಟಾರೆ ತುರುವೇಕೆರೆ ತಾಲ್ಲೂಕಿನಲ್ಲಿ ಸಾರ್ವಜನಿಕ ಆಸ್ಪತ್ರೆ ಇದ್ದು, ಹೆಚ್ಚಿನ ಚಿಕಿತ್ಸೆಗೆಂದು ಹೊರಗೆ ಹೋಗುವ ಪರಿಸ್ಥಿತಿ ಎದುರಾಗಿರುವುದು ಇಲ್ಲಿನ ಜನರ ದುರಂತ. ಅದೇ ಚಿಕಿತ್ಸೆ ಇದೆ ಸರ್ಕಾರಿ ಆಸ್ಪತ್ರೆಯಲ್ಲಿ ದೊರಕಿದ್ದರೆ ಆ ವಿದ್ಯಾರ್ಥಿ ಬದುಕುತ್ತಿದ್ದನೇನೋ. ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಜನಪ್ರತಿನಿಧಿಗಳು ಕೂಡಲೇ ಸಾರ್ವಜನಿಕ ಆಸ್ಪತ್ರೆಗೆ ಬೇಕಾಗುವ ಎಲ್ಲಾ ಸೌಲಭ್ಯಗಳು ದೊರಕುವಂತೆ ಆಗ್ರಹಿಸಿ ಕ್ರಮ ವಹಿಸಬೇಕಿದೆ.

ವರದಿ : ಮಂಜುನಾಥ ತುರುವೇಕೆರೆ.

ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ

https://chat.whatsapp.com/Jf6jZ0gyQAEA5GBRpHnkrv

Subscribe YouTube

https://youtube.com/@janataa24?si=XsFcych2GMH0O6Gv

Chithradurga : ಚಿತ್ರದುರ್ಗ ಎಂಪಿ ಟಿಕೆಟ್ ಭೋವಿ ಸಮಾಜಕ್ಕೆ ವಂಚಿಸಿದರೆ ಬಂಡಾಯ ಸ್ವರ್ಧೆ ಆರ್ ದಾಸಬೋವಿ.

Document

Leave a Reply

Your email address will not be published. Required fields are marked *