JANATAA24 NEWS DESK
Tiptur: ಚರಂಡಿ ದುರ್ವಾಸನೆಯಿಂದ ಜನಜೀವನ ಅಸ್ತವ್ಯಸ್ತ.
ತಿಪಟೂರು: ಸಾರ್ವಜನಿಕರು ಆರೋಗ್ಯಕರ ಜೀವನ ನಡೆಸಲು ಅಗತ್ಯವಾಗಿ ಬೇಕಿರುವ ಮೂಲಸೌಕರ್ಯಗಳಲ್ಲಿ ಒಂದಾದ ಸಮರ್ಪಕ ಚರಂಡಿ ವ್ಯವಸ್ಥೆ ಇಲ್ಲದೇ ನಾಗರಿಕರು ತೀವ್ರ ತೊಂದರೆಗೆ ಸಿಲುಕಿದ್ದಾರೆ. ಸಾಂಕ್ರಾಮಿಕ ರೋಗಗಳು ಹರಡುವ ಭೀತಿಯಲ್ಲಿ ಜನತೆ ಕಂಗಾಲಾಗಿದ್ದಾರೆ.
ಅವೈಜ್ಞಾನಿಕವಾಗಿ ನಿರ್ಮಾಣವಾಗಿರುವ ಚರಂಡಿಗಳಲ್ಲಿ ಕೊಳಚೆನೀರು ಒಂದಿಂಚು ಮುಂದಕ್ಕೆ ಹರಿದು ಹೋಗುತ್ತಿಲ್ಲ. ಕೊಳಚೆ ನೀರಿನ ದುರ್ನಾತಕ್ಕೆ ನಿವಾಸಿಗಳು ಮೂಗು ಮುಚ್ಚಿಕೊಂಡು ಬದುಕಬೇಕಾದ ಅನಿವಾರ್ಯತೆ ಇದೆ. ತಿಪಟೂರು ನಗರದ ಗಾಂಧಿನಗರದ 20ನೇ ವಾರ್ಡ್‌ಗಳಲ್ಲಿ ಚರಂಡಿ ಸ್ವಚ್ಚತೆ ಮಾಯವಾಗಿರುವ ಕಾರಣ ಪ್ರತಿನಿತ್ಯವೂ ನರಕಯಾತನೆ ಅನುಭವಿಸುವಂತಾಗಿದೆ.
ರಾತ್ರಿಯಾದರೆ ಸೊಳ್ಳೆಗಳ ಕಾಟ, ತಿನ್ನುವ ಆಹಾರಕ್ಕೂ ಹುಳಗಳ ಕಾಟ ತಾಳಲಾರದೆ ಬೇಸತ್ತಿದ್ದಾರೆ. ಅನೇಕ ವರ್ಷಗಳಿಂದ ತಾಂಡವವಾಡುತ್ತಿರುವ ಚರಂಡಿ ಸಮಸ್ಯೆಯನ್ನು ಬಗೆಹರಿಸಲು ಸ್ಥಳೀಯ ಆಡಳಿತ, ಜನಪ್ರತಿನಿಧಿಗಳು ತಲೆ ಕೆಡಿಸಿಕೊಂಡಿಲ್ಲ. ಈ ಕಾರಣಕ್ಕೆ ನಗರದ ಜನರು ವ್ಯವಸ್ಥೆಯ ವಿರುದ್ಧ ಪ್ರತಿನಿತ್ಯ ಆಕ್ರೋಶ ಹೊರಹಾಕುತ್ತಿದ್ದಾರೆ.
ಸ್ವಚ್ಛತೆ ಸಿಬ್ಬಂದಿ ನಿಯಮಿತವಾಗಿ ಬಂದು ಚರಂಡಿಗಳನ್ನು ಸ್ವಚ್ಛಗೊಳಿಸುವುದಿಲ್ಲ. ಇದರಿಂದ ಎಲ್ಲೆಂದರಲ್ಲಿ ಚರಂಡಿಗಳು ಬ್ಲಾಕ್ ಆಗಿ ನೀರು ನಿಂತು ಗಬ್ಬು ವಾಸನೆ ಹರಡುತ್ತಿದೆ. ಇದರಿಂದ ಸುತ್ತಮುತ್ತಲಿನ ನಿವಾಸಿಗಳು ಮೂಗು ಮುಚ್ಚಿಕೊಂಡು ತಿರುಗಾಡುವಂತಾಗಿದೆ. 20ನೇ ವಾರ್ಡ್ ನಲ್ಲಿ ಎರಡು ಅಂಗನವಾಡಿ ಕೇಂದ್ರವಿದ್ದು ಒಂದು ಅಂಗನವಾಡಿಗಳಲ್ಲಿ 50 ಮಕ್ಕಳು ಇಲ್ಲಿ ಕಲಿಯುತ್ತಿದ್ದಾರೆ.
ಪಕ್ಕದಲ್ಲಿ ಚರಂಡಿ ತುಂಬಿದ್ದರಿಂದ ದುರ್ವಾಸನೆ ನಡುವೆಯೂ ಮಕ್ಕಳು ಕಲಿಯುವಂತಾಗಿದೆ. ಅಂಗನವಾಡಿ ಪಕ್ಕದ ಮನೆಯಲ್ಲಿ ಒಬ್ಬ ಅಂಗವಿಕಲನ ಹುಡುಗ ವಾಸವಿದ್ದು ಅವನು ಸಹ ದುರ್ವಾಸನೆಯಿಂದ ಹಾಗೂ ರೋಗ ರುಜನೇಗಳಿಂದ ಜೀವನ ಸಾಗಿಸುತ್ತಿದ್ದಾನೆ. ಅವನ ತಂದೆ ತಾಯಿಗಳು ಚರಂಡಿಯ ಅವ್ಯವಸ್ಥೆಯ ಕಂಡು ಪ್ರತಿನಿತ್ಯ ತೂಂದರೆ ಎದುರಿಸುತ್ತಿದ್ದು ಅಧಿಕಾರಿಗಳ ಬೇಜವಾಬ್ದಾರಿತನವೇ ಇದಕ್ಕೆ ಕಾರಣ ಎಂದು ಬೇಸರ ವ್ಯಕ್ತಪಡಿಸಿದರು. ಸುಮಾರು ವರ್ಷಗಳಿಂದಲೂ ಚರಂಡಿಯ ಅವ್ಯವಸ್ಥೆ ಎದುರಿಸುತ್ತಿದ್ದು ಇದಕ್ಕೆ ಮುಕ್ತಿ ಯಾವಾಗ ಎಂಬುದು ಯಕ್ಷಪ್ರಶ್ನೆಯಾಗಿ ಉಳಿದಿದೆ. ಸಮಗ್ರ ಮತ್ತು ವೈಜ್ಞಾನಿಕ ಚರಂಡಿ ವ್ಯವಸ್ಥೆಯನ್ನು ರೂಪಿಸಿ.
ಸರಿಯಾದ ನಿರ್ವಹಣೆ ಮಾಡಿ ಚರಂಡಿಗಳನ್ನು ಕಾಲಕಾಲಕ್ಕೆ ಸ್ವಚ್ಛಗೊಳಿಸುವುದು ಮತ್ತು ದುರಸ್ತಿ ಮಾಡಿ.
ಹಾಗೂ ಮನೆಗಳು ಮತ್ತು ಬಡಾವಣೆಗಳಿಂದ ಮುಖ್ಯ ಚರಂಡಿಗೆ ನೀರು ಸರಾಗವಾಗಿ ಹರಿಯುವಂತೆ ಉಪಚರಂಡಿ ವ್ಯವಸ್ಥೆಗಳನ್ನು ಕಲ್ಪಿಸಿ ಆರೋಗ್ಯಕರ ಜೀವನ ನಡೆಸಲು ವ್ಯವಸ್ಥೆ ಕಲ್ಪಿಸಬೇಕೆಂದು ನಿವಾಸಿಗಳು ಮಾಧ್ಯಮದ ಮೂಲಕ ಅಧಿಕಾರಿಗಳಿಗೆ ಹಾಗೂ ಜನಪ್ರತಿನಿಧಿಗಳಿಗೆ ಮನವಿ ಮಾಡಿ ತಮ್ಮ ಆಕ್ರೋಶವನ್ನು ಹೊರ ಹಾಕಿದರು.
ವರದಿ: ಮಂಜುನಾಥ್ ಡಿ ತಿಪಟೂರು.
ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ https://chat.whatsapp.com/Jf6jZ0gyQAEA5GBRpHnkrv
https://news.google.com/publications/CAAqBwgKMPHDwgswk9_ZAw?hl=en-IN&gl=IN&ceid=IN:en
https://youtube.com/@janataa24?si=XsFcych2GMH0O6Gv
https://www.janataa24.com/turuvekere-protesting-against-stone-mining/
IAS,IPS,KAS, ಕನಸು ಹೊತ್ತ ವಿದ್ಯಾರ್ಥಿಗಳಿಗೆ ಗಾಡ್ ಫಾದರ್ ಆಗಿ ನಿಂತ ಮೂರ್ತಿ ಸಿ ಎಸ್.
Turuvekere: ಫಸಲಿಗೆ ಬಂದ 40 ತೆಂಗಿನ ಮರಗಳನ್ನ ಕಡಿದುರುಳಿಸಿದ ಕಿಡಿಗೇಡಿಗಳು.
Operation Sindor: POK ಪಾಕಿಸ್ತಾನದ 9 ಉಗ್ರ ನೆಲೆಗಳನ್ನು ನೆಲಸಮಗೊಳಿಸಿದ ಭಾರತ ಸೇನೆ.