Janataa24 NEWS DESK
Tirupati: ತಿರುಪತಿಯಲ್ಲಿ ಕಾಲ್ತುಳಿತ ಮಂದಿ ಸಾವು.! 30ಕ್ಕೂ ಅಧಿಕ ಭಕ್ತರಿಗೆ ಗಾಯ.

ಅಮರಾವತಿ: ಆಂಧ್ರಪ್ರದೇಶದ ತಿರುಪತಿ ದೇವಸ್ಥಾನದಲ್ಲಿ (Tirupati Temple) ಬುಧವಾರ ತಡರಾತ್ರಿ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ ನಾಲ್ವರು ಸಾವನ್ನಪ್ಪಿದ್ದಾರೆ.
ತಿರುಪತಿಯಲ್ಲಿ ದರ್ಶನಕ್ಕೆ ಟಿಕೆಟ್ ವಿತರಣೆ ವೇಳೆ ಉಂಟಾದ ಕಾಲ್ತುಳಿತದಲ್ಲಿ ಮೂವರು ಮಹಿಳೆಯರು ಸೇರಿದಂತೆ ಕನಿಷ್ಠ 7 ಭಕ್ತರು ಸಾವನ್ನಪ್ಪಿದ್ದಾರೆ. ತಿರುಪತಿಯ ವಿಷ್ಣು ನಿವಾಸದ ಬಳಿ ಇರುವ ತಿರುಮಲ ಶ್ರೀವಾರಿ ವೈಕುಂಠ ದ್ವಾರದಲ್ಲಿ ಬುಧವಾರ ರಾತ್ರಿ ಈ ಅವಘಡ ಸಂಭವಿಸಿದೆ.
ನೂರಾರು ಭಕ್ತರು ವೈಕುಂಠ ದ್ವಾರ ದರ್ಶನಕ್ಕಾಗಿ ಟಿಕೆಟ್ಗಾಗಿ ಮುಗಿಬಿದ್ದಿದ್ದರಿಂದ ಕಾಲ್ತುಳಿತ ಸಂಭವಿಸಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ‘ಕಾಲ್ತುಳಿತದಲ್ಲಿ ನಾಲ್ವರು ಮಹಿಳೆಯರು ಮತ್ತು ಮೂವರು ಪುರುಷರು ಸಾವನ್ನಪ್ಪಿದ್ದಾರೆ, 30ಕ್ಕೂ ಅಧಿಕ ಮಂದಿಗೆ ಗಾಯಗಳಾಗಿರುತ್ತವೆ ಎಂದು ಖಚಿತಪಡಿಸಿದ್ದಾರೆ.
ತಿರುಪತಿ ದೇವಸ್ಥಾನದ ಕಾಲ್ತುಳಿತ ಘಟನೆಯ ಬಗ್ಗೆ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ತೀವ್ರ ಆಘಾತ ವ್ಯಕ್ತಪಡಿಸಿದ್ದಾರೆ. ಜ.10ರಿಂದ ಆರಂಭವಾಗುವ 10 ದಿನಗಳ ವೈಕುಂಠ ದ್ವಾರ ದರ್ಶನಕ್ಕೆ ದೇಶ-ವಿದೇಶಗಳಿಂದ ನೂರಾರು ಭಕ್ತರು ಆಗಮಿಸಿದ್ದರು.
ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ https://chat.whatsapp.com/Jf6jZ0gyQAEA5GBRpHnkrv
https://news.google.com/publications/CAAqBwgKMPHDwgswk9_ZAw?hl=en-IN&gl=IN&ceid=IN:en
https://youtube.com/@janataa24?si=XsFcych2GMH0O6Gv
https://www.janataa24.com/iasipskas-who-stood-as-the-godfather-of-the/
https://www.janataa24.com/miscreants-uprooted-40-coconut-trees-turuvekere/
Mandya: ಪತ್ನಿ ನೇಣಿಗೆ ಶರಣಾದದನ್ನು ಕಂಡು ಕೆರೆಗೆ ಹಾರಿ ಪ್ರಾಣ ಬಿಟ್ಟ ಪತಿ.