Document

Trap: ರಾಜ್ಯದ ಪ್ರತಿಷ್ಠಿತ ಮಠದ ಸ್ವಾಮೀಜಿಗೆ ಬ್ಲ್ಯಾಕ್ ಮೇಲ್ ಮಾಡಿ ಹಣ ವಸೂಲಿ–ಮಹಿಳೆ ಅರೆಸ್ಟ್.

JANATAA24 NEWS DESK 

 

Trap: ರಾಜ್ಯದ ಪ್ರತಿಷ್ಠಿತ ಮಠದ ಸ್ವಾಮೀಜಿಗೆ ಬ್ಲ್ಯಾಕ್ ಮೇಲ್ ಮಾಡಿ ಹಣ ವಸೂಲಿ–ಮಹಿಳೆ ಅರೆಸ್ಟ್.

Trap Woman arrested for blackmailing the Swamiji of a prestigious monastery in the state and extorting money.

ಬೆಂಗಳೂರು: ರಾಜ್ಯದ ಪ್ರತಿಷ್ಠಿತ ಮಠದ ಸ್ವಾಮೀಜಿಯೊಬ್ಬರನ್ನು ಬ್ಲ್ಯಾಕ್ ಮೇಲ್ ಮಾಡಿ ಹಣ ವಸೂಲಿ ಮಾಡಿದ್ದ ಮಹಿಳೆಯನ್ನು ಬಂಧಿಸಿರುವ ಘಟನೆ ನಡೆದಿದೆ. ಬೆಂಗಳೂರು ಸಿಸಿಬಿ ಪೊಲೀಸರು ಚಿಕ್ಕಮಗಳೂರು ಮೂಲದ ಮಹಿಳೆಯನ್ನು ಬಂಧಿಸಿದ್ದಾರೆ.

 

ಸ್ಪೂರ್ತಿ ಬಂಧಿತ ಮಹಿಳೆ. ಸ್ವಾಮೀಜಿಯಿಂದ ಈಗಾಗಲೇ ಮಹಿಳೆ 4.5 ಲಕ್ಷ ಹಣ ವಸೂಲಿ ಮಾಡಿದ್ದಳು.

 

ಬಳಿಕ 1 ಕೋಟಿ ರೂಪಾಯಿಗೆ ಮತ್ತೆ ಬೇಡಿಕೆ ಇಟ್ಟಿದ್ದಳು. 5 ತಿಂಗಳ ಹಿಂದೆ ಮಹಿಳೆ ತಾನು ತಿಪಟೂರಿನಲ್ಲಿ ವ್ಯಾಸಂಗ ಮಾಡಿದ್ದೇನೆ ಎಂದು ಸ್ವಾಮೀಜಿಗೆ ಪರಿಚಯಿಸಿಕೊಂಡಿದ್ದಳು. ಹೀಗೆ ಆರಂಭವಾದ ಪರಿಚಯದಲ್ಲಿ ಮಹಿಳೆ ಸ್ವಾಮೀಜಿಗೆ ಬ್ಲ್ಯಾಕ್ ಮೇಲ್ ಮಾಡಲಾರಂಭಿಸಿದ್ದಾಳೆ.

 

ಸ್ವಾಮೀಜಿ ಬೆಂಗಳೂರಿಗೆ ಬಂದಿದ್ದಾಗ ಆರೋಪಿ ಮಹಿಳೆ ಸ್ವಾಮೀಜಿಯಿಂದ 4.5 ಲಕ್ಷ ಹಣ ಪಡೆದಿದ್ದಳು. ಪದೇ ಪದೇ ಕರೆ ಮಾಡಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಮಹಿಳೆ 1 ಕೋಟಿ ರೂಪಾಯಿಗೆ ಹಣಕ್ಕೆ ಬೇಡಿಕೆ ಇಟ್ಟಿದ್ದಾಳೆ. ಮಹಿಳೆಯ ಕಾಟಕ್ಕೆ ಬೇಸತ್ತ ಸ್ವಾಮೀಜಿ ಬೆಂಗಳೂರು ಸಿಸಿಬಿ ಪೊಲೀಸರಿಗೆ ದೂರು ನೀಡಿದ್ದರು. ಸದ್ಯ ಮಹಿಳೆಯನ್ನು ಬಂಧಿಸಿರುವ ಪೊಲೀಸರು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

 

ಇದೇ ಸ್ವಾಮೀಜಿ ವಿರುದ್ಧ ಎರಡು ವರ್ಷಗಳ ಹಿಂದೆ ಹನಿಟ್ರ್ಯಾಪ್ ಯತ್ನ ನಡೆದಿತ್ತು. ಈ ವೇಳೆ ಆರೋಪಿಗಳು 6 ಕೋಟಿ ರೂಪಾಯಿಗೆ ಬೇಡಿ ಇಟ್ಟಿದ್ದರು. ಈ ಬಗ್ಗೆಯೂ ಪ್ರಕರಣ ದಾಖಲಾಗಿತ್ತು. ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದರು. ಇದೀಗ ಅದೇ ಸ್ವಾಮೀಜಿಗೆ ಮತ್ತೆ ಮಹಿಳೆಯೊಬ್ಬಳಿಂದ ಬ್ಲ್ಯಾಕ್ ಮೇಲ್ ನಡೆದಿದೆ.

ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ https://chat.whatsapp.com/Jf6jZ0gyQAEA5GBRpHnkrv

 

https://news.google.com/publications/CAAqBwgKMPHDwgswk9_ZAw?hl=en-IN&gl=IN&ceid=IN:en

 

 

https://youtube.com/@janataa24?si=XsFcych2GMH0O6Gv

 

 

https://www.janataa24.com/turuvekere-protesting-against-stone-mining/

 

IAS,IPS,KAS, ಕನಸು ಹೊತ್ತ ವಿದ್ಯಾರ್ಥಿಗಳಿಗೆ ಗಾಡ್ ಫಾದರ್ ಆಗಿ ನಿಂತ ಮೂರ್ತಿ ಸಿ ಎಸ್.

 

 

Turuvekere: ಫಸಲಿಗೆ ಬಂದ 40 ತೆಂಗಿನ ಮರಗಳನ್ನ ಕಡಿದುರುಳಿಸಿದ ಕಿಡಿಗೇಡಿಗಳು.

 

 

Operation Sindor: POK ಪಾಕಿಸ್ತಾನದ 9 ಉಗ್ರ ನೆಲೆಗಳನ್ನು ನೆಲಸಮಗೊಳಿಸಿದ ಭಾರತ ಸೇನೆ.


Document

Leave a Reply

Your email address will not be published. Required fields are marked *