Janataa24 NEWS DESK
Tumkur: ಹೇಮಾವತಿ ಎಕ್ಸ್ ಪ್ರೆಸ್ ಲಿಂಕ್ ಕೆನಾಲ್ ವಿರುದ್ಧ ರೈತ ಮುಖಂಡರ ಪ್ರತಿಭಟನೆ– ಪ್ರತಿಭಟನಾಕಾರರನ್ನು ವಶಕ್ಕೆ ಪಡೆದ ಪೊಲೀಸರು.
ಗುಬ್ಬಿ: ತುಮಕೂರು ಜಿಲ್ಲೆಗೆ ಮರಣ ಶಾಸನ ವಾಗಿರುವ ಹೇಮಾವತಿ ಎಕ್ಸ್ಪ್ರೆಸ್ ಲಿಂಕ್ ಕೆನಾಲ್(Hemavathi Express Link Canal) ಕಾಮಗಾರಿಯು ಅವೈಜ್ಞಾನಿಕ ಕಾಮಗಾರಿ ಯಾಗಿದ್ದು ರಾಜ್ಯ ಸರ್ಕಾರಕ್ಕೆ ನಾಚಿಕೆ ಇಲ್ಲ ಎಂದು ಮಾಜಿ ಸಚಿವ ಸೊಗಡು ಶಿವಣ್ಣ(Sogadu Shivanna) ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು.
ತಾಲೂಕಿನ ಸುಂಕಾಪುರದ ಬಳಿ ಸ್ಥಗಿತಗೊಂಡಿದ್ದ ಹೇಮಾವತಿ ಎಕ್ಸ್ ಪ್ರೆಸ್ ಲಿಂಕ್ ಕೆನಲ್ ಕಾಮಗಾರಿಯನ್ನು ಪ್ರಾರಂಭ ಮಾಡುತ್ತಿರುವ ಹಿನ್ನೆಲೆಯಲ್ಲಿ ಕಾಮಗಾರಿಯನ್ನು ಸ್ಥಗಿತಗೊಳಿಸುವ ಸಲುವಾಗಿ ನೆಡೆಯುತ್ತಿದ್ದ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಮಾತನಾಡಿದರು.
ಹೇಮಾವತಿ ಲಿಂಕ್ ಕೆನಾಲ್ ಕಾಮಗಾರಿ ಸ್ಥಗಿತ ಗೊಳಿಸುವ ಸಲುವಾಗಿ ಜಮೀನಿನ ಅನುಭವ ಹೊಂದಿರುವ ರೈತರು ಗುಬ್ಬಿ ನ್ಯಾಯಾಲಯದಲ್ಲಿ ಜಿಲ್ಲಾ ನ್ಯಾಯಾಲಯದಲ್ಲಿ ದಾವೆ ಹೂಡುವ ಮೂಲಕ ತಡೆ ಯಜ್ಞೆ ತಂದಿದ್ದರು ಜಿಲ್ಲಾಡಳಿತ ತಾಲೂಕು ಆಡಳಿತ ಕಾಮಗಾರಿ ಪ್ರಾರಂಭಕ್ಕೆ ಮುಂದಾಗಿದೆ.
ಈಗಾಗಲೇ ಹೋರಾಟ ಮಾಡಿ ಕಾಮಗಾರಿಯನ್ನು ಸ್ಥಗಿತ ಗೊಳಿಸಿದ್ದೆವು ಆದರೆ ರಾಜ್ಯ ಸರ್ಕಾರ ಜಲಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್ ಜಿಲ್ಲೆ ಹಾಗೂ ತಾಲೂಕು ಆಡಳಿತಕ್ಕೆ ಒತ್ತಡ ತರುವ ಮೂಲಕ ಅವೈಜ್ಞಾನಿಕ ಕಾಮಗಾರಿ ಮಾಡಲು ಅಧಿಕಾರಿಗಳನ್ನು ಹಾಗೂ ಪೊಲೀಸ್ ಇಲಾಖೆಯನ್ನು ಬಳಸಿಕೊಂಡು ರೈತರ ಮೇಲೆ ದರ್ಪ ದೌರ್ಜನ್ಯ ತೋರುವುದು ತನ್ನ ಹುದ್ದೆಗೆ ಶೋಬೆ ತರುವುದಲ್ಲ
ಅಧಿಕಾರಿಗಳು ಜಲಸಂಪನ್ಮೂಲ ಸಚಿವರ ನೀರಾವರಿ ಇಲಾಖೆ ಅಧಿಕಾರ ಸೂಚನೆ ಮೇರೆಗೆ ರೈತರ ಜಮೀನುಗಳನ್ನು ವಶಪಡಿಸಿಕೊಂಡು ತರಾತುರಿಯಲ್ಲಿ ಕಾಮಗಾರಿ ಗೆ ಮುಂದಾಗುತ್ತಿರುವುದು ಸರಿಯಲ್ಲ ಯಾವುದೇ ಕಾರಣಕ್ಕೂ ಕಾಮಗಾರಿ ಮಾಡಲು ನಾವು ಬಿಡುವುದಿಲ್ಲ ಈ ಕಾಮಗಾರಿ ಸ್ಥಗಿತಗೊಳಿಸುವ ಸಲುವಾಗಿ ಜೈಲಿಗೆ ಹೋಗಲು ನಾವು ಸಿದ್ದರಿದ್ದೇವೆ ಈ ಕಾಮಗಾರಿಯನ್ನು ಸ್ಥಗಿತಗೊಳಿಸಲು ಮುಂದಾಗದಿದ್ದರೆ ಜಿಲ್ಲೆಯ ರೈತರು ಮುಖಂಡರುಗಳು ಉಗ್ರವಾದ ಹೋರಾಟಕ್ಕೆ ಹಾಗೂ ಸತ್ಯಾಗ್ರಹಕ್ಕೆ ಮುಂದಾಗ ಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆಯ ಜಿಲ್ಲಾಧ್ಯಕ್ಷ ಎ. ಗೋವಿಂದರಾಜು ಮಾತನಾಡಿ ಈ ಕಾಮಗಾರಿ ಅವೈಜ್ಞಾನಿಕವಾಗಿದ್ದು ತುಮಕೂರು ಜಿಲ್ಲೆಗೆ ಹಂಚಿಕೆಯಾಗಿರುವ 24.5 ಟಿ ಎಂ ಸಿ ನೀರನ್ನು ಕಳ್ಳ ಮಾರ್ಗದಲ್ಲಿ ರಾಮನಗರ. ಮಾಗಡಿ ಇನ್ನೀತರೆ ನಗರಗಳಿಗೆ ತೆಗೆದುಕೊಂಡು ಹೋಗಲು ನೀರಾವರಿ ಸಚಿವ ಡಿ. ಕೆ. ಶಿವಕುಮಾರ್ ಮುಂದಾಗಿದ್ದಾರೆ.
ನಮ್ಮ ಜಿಲ್ಲೆ ಗೆ ನೀರು ಸಿಗದಂತೆ ಮಾಡುವ ಹಿನ್ನೇಲೆಯಲ್ಲಿ ಪೊಲೀಸ್ ಇಲಾಖೆಯನ್ನು ಬಳಸಿಕೊಂಡು ಸುಮಾರು 400ಕ್ಕೂ ಪೊಲೀಸ್ ಸಿಬ್ಬಂದಿಗಳ ಭದ್ರತೆಯಲ್ಲಿ ಹೇಮಾವತಿ ಲಿಂಕ್ ಕೆನಲ್ ಕಾಮಾಗಾರಿ ಮಾಡಿಸಲು ಸಚಿವರು ಮುಂದಾಗಿರುವುದು ಸರ್ಕಾರ ದ ದೌರ್ಜನ್ಯ ತೋರುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಇದೇ ಸಂದರ್ಭದಲ್ಲಿ ಪ್ರತಿಭಟನ ನಿರತರನ್ನು ಕಡಬ ಹೋಬಳಿ ಅತ್ತಿಕಟ್ಟೆ ಗ್ರಾಮದಲ್ಲಿ ತಡೆದು ಪೊಲೀಸರು ಪ್ರತಿಭಟನೆ ನೆಡೆಸುತ್ತಿದ್ದ ರೈತರು. ಮುಖಂಡರನ್ನು ವಶಕ್ಕೆ ಪಡೆದು ಬಂಧಿಸಿದರು.
ಪ್ರತಿಭಟನೆಯಲ್ಲಿ ಮುಖಂಡರಾದ ದೀಲಿಪ್ ಕುಮಾರ್. ಹೆಚ್. ಟಿ. ಭೈರಪ್ಪ. ಪಂಚಾಕ್ಷರಿ. ತಾಲೂಕು ರೈತ ಸಂಘದ ಅಧ್ಯಕ್ಷ ವೆಂಕಟೇಗೌಡ ಇತರ ಮುಖಂಡರು ನೂರಾರು ಸಂಖ್ಯೆ ಯ ರೈತರು ಹಾಜರಿದ್ದರು.
ವರದಿ: ಶ್ರೀಕಾಂತ್ ಗುಬ್ಬಿ.
ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ https://chat.whatsapp.com/Jf6jZ0gyQAEA5GBRpHnkrv
https://news.google.com/publications/CAAqBwgKMPHDwgswk9_ZAw?hl=en-IN&gl=IN&ceid=IN:en
https://youtube.com/@janataa24?si=XsFcych2GMH0O6Gv
https://www.janataa24.com/turuvekere-protesting-against-stone-mining/
IAS,IPS,KAS, ಕನಸು ಹೊತ್ತ ವಿದ್ಯಾರ್ಥಿಗಳಿಗೆ ಗಾಡ್ ಫಾದರ್ ಆಗಿ ನಿಂತ ಮೂರ್ತಿ ಸಿ ಎಸ್.
Turuvekere: ಫಸಲಿಗೆ ಬಂದ 40 ತೆಂಗಿನ ಮರಗಳನ್ನ ಕಡಿದುರುಳಿಸಿದ ಕಿಡಿಗೇಡಿಗಳು.
Operation Sindor: POK ಪಾಕಿಸ್ತಾನದ 9 ಉಗ್ರ ನೆಲೆಗಳನ್ನು ನೆಲಸಮಗೊಳಿಸಿದ ಭಾರತ ಸೇನೆ.