Janataa24 NEWS DESK
Turuvekere: ಜನವರಿ 20 ರಂದು ಕಾಡುಗೊಲ್ಲ ಸಂಘದಿಂದ ಪಟ್ಟಣದಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ.

ತುರುವೇಕೆರೆ: ತಾಲೂಕಿನ ಮಾಯಸಂದ್ರ ಹೋಬಳಿ ವ್ಯಾಪ್ತಿಯಲ್ಲಿರುವ ಕಂಚಿಹಟ್ಟಿ ಗೊಲ್ಲರಹಟ್ಟಿ ಗ್ರಾಮದಲ್ಲಿ ನಿನ್ನೆ ತಡರಾತ್ರಿ “ಹಟ್ಟಿ ಅರಿವು” ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು, ಈ ಕಾರ್ಯಕ್ರಮ ಕುರಿತು ತಾಲೂಕು ಕಾಡುಗೊಲ್ಲ ಸಂಘದ ಅಧ್ಯಕ್ಷರಾದ ಬಸವರಾಜು ಮಾತನಾಡಿ ಜನವರಿ 20ರಂದು ತುರುವೇಕೆರೆ ಪಟ್ಟಣದ ತಿಪಟೂರು ರಸ್ತೆಯಲ್ಲಿರುವ ಗಣಪತಿ ಪೆಂಡಾಲ್ ಆವರಣದಲ್ಲಿ ನಮ್ಮ ಸಂಘದ ರಾಜ್ಯಾಧ್ಯಕ್ಷರಾದ ರಾಜಣ್ಣ ಅವರ ಸೂಚನೆಯಂತೆ ತಾಲೂಕು ಕಾಡುಗೊಲ್ಲ ಸಂಘದಿಂದ 2023-24 ನೇ ಸಾಲಿನಲ್ಲಿ ಎಸ್ ಎಸ್ ಎಲ್ ಸಿ ಮತ್ತು ಪಿ ಯು ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ ಇದರ ಜೊತೆಗೆ ನಮ್ಮ ಸಮುದಾಯದ ಮಹಿಳೆಯರಿಗಾಗಿ ಮತ್ತು ಪುರುಷರಿಗಾಗಿ ವಿವಿಧ ಸ್ಪರ್ಧೆಗಳನ್ನು ಆಯೋಜನೆ ಮಾಡಲಾಗಿದ್ದು ಸ್ಪರ್ಧೆಗಳಾದ ಸೋಬಾನ ಪದ, ಕೋಲಾಟ, ಏಕಪಾತ್ರ ಅಭಿನಯ, ರಂಗೋಲಿ ಸ್ಪರ್ಧೆ, ಇನ್ನೂ ಅನೇಕ ಸ್ಪರ್ಧೆಗಳು ನಡೆಯಲಿದ್ದು ಆ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಗುವುದು ಇದರ ಜೊತೆಗೆ ನಮ್ಮ ಸಮುದಾಯವಾದ ಕಾಡುಗೊಲ್ಲ ಸಮುದಾಯವನ್ನು ಎಸ್ ಟಿ ಸಮುದಾಯಕ್ಕೆ ಸೇರಿಸಬೇಕೆಂದು ಕೇಂದ್ರ ಸರ್ಕಾರಕ್ಕೆ ಹಕ್ಕೊತ್ತಾಯ ಮಾಡಲಾಗುವುದು ಎಂದರು,
ಮುಂದುವರೆದು ಗ್ರಾಮದ ಹಿರಿಯ ಮುಖಂಡ ತಿಮ್ಮಪ್ಪ ಮಾತನಾಡಿ ನಮ್ಮ ತಾಲೂಕಿನಲ್ಲಿ ಸುಮಾರು 58 ಗೊಲ್ಲರಹಟ್ಟಿಗಳಿದ್ದು ಪ್ರತಿಯೊಂದು ಗ್ರಾಮದಿಂದ ನಮ್ಮ ಸಮುದಾಯದ ಜನತೆಯನ್ನು ಕಾರ್ಯಕ್ರಮಕ್ಕೆ ಕರೆತಂದು ನಮ್ಮ ಸಮುದಾಯದ ಅಭಿವೃದ್ಧಿಗಳಿಗಾಗಿ ಶ್ರಮಿಸುತ್ತಿರುವ ಹಾಗೂ ಹೋರಾಟ ಮಾಡುತ್ತಿರುವ ರಾಜ್ಯಾಧ್ಯಕ್ಷರು ತಾಲೂಕು ಅಧ್ಯಕ್ಷರು ಸಂಘದ ಪದಾಧಿಕಾರಿಗಳ ನಿರ್ಣಯದಂತೆ ನಾವುಗಳು ಒಗ್ಗೂಡಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತೇವೆ ಎಂದರು,
ಇದೆ ಸಂದರ್ಭದಲ್ಲಿ ಕಂಚಿಹಟ್ಟಿ ಗ್ರಾಮದ ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಮಂಜುಳಾ ವೆಂಕಟೇಶ್ ಮಾತನಾಡಿ ನಮ್ಮ ಕಾಡುಗೊಲ್ಲ ಸಮುದಾಯವನ್ನು ಎಸ್ ಟಿ ಸಮುದಾಯಕ್ಕೆ ಸೇರಿಸಿಕೊಳ್ಳಬೇಕು ಎಂಬ ಹಕ್ಕೋತ್ತಾಯ ಮತ್ತು ಪ್ರತಿಭಾ ಪುರಸ್ಕಾರದ ಕಾರ್ಯಕ್ರಮಕ್ಕೆ ನಮ್ಮ ಸಮುದಾಯದ ಜನತೆಗೆ ಅರಿವು ಮೂಡಿಸುವ ಹಟ್ಟಿ ಅರಿವು ಕಾರ್ಯಕ್ರಮವನ್ನು ತುರುವೇಕೆರೆ ತಾಲೂಕಿನ ಪ್ರತಿಯೊಂದು ಗೊಲ್ಲರಹಟ್ಟಿ ಗ್ರಾಮಗಳಿಗೆ ತಾಲೂಕಿನ ಕಾಡುಗೊಲ್ಲ ಸಂಘದ ಪ್ರತಿಯೊಬ್ಬ ಪದಾಧಿಕಾರಿಗಳು ಭೇಟಿ ನೀಡಿ ಗ್ರಾಮಸ್ಥರನ್ನು ಒಗ್ಗೂಡಿಸಿ ಕಾರ್ಯಕ್ರಮದ ಉದ್ದೇಶವನ್ನು ಮನವರಿಕೆ ಮಾಡಿ ಅವರನ್ನು ಕಾರ್ಯಕ್ರಮಕ್ಕೆ ಕರೆತರಲಾಗುವುದು ಎಂದರು,
ಇನ್ನು ಕಂಚಿಹಟ್ಟಿ ಗ್ರಾಮದಲ್ಲಿ ಹಟ್ಟಿ ಅರಿವು ಕಾರ್ಯಕ್ರಮದ ನೇತೃತ್ವವನ್ನು ಗ್ರಾಮದ ಯುವ ಹೋರಾಟಗಾರ ದರ್ಶನ್ ರವರು ವಹಿಸಿದ್ದು ಜನವರಿ 20ರಂದು ನಡೆಯುವ ಪ್ರತಿಭಾ ಪುರಸ್ಕಾರ ಕಾರ್ಯಕ್ರಮಕ್ಕೆ ಆಹ್ವಾನಿಸಲು ಆಗಮಿಸಿದ ತಾಲೂಕು ಕಾಡುಗೊಲ್ಲ ಸಂಘದ ಅಧ್ಯಕ್ಷರು ಉಪಾಧ್ಯಕ್ಷರು ಮತ್ತು ಪದಾಧಿಕಾರಿಗಳಿಗೆ ಶಾಲು ಹೊದಿಸಿ ಹೂ ಮಾಲೆ ಹಾಕಿ ಸನ್ಮಾನಿಸಿದರು, ಇದೇ ವೇಳೆ ಕಾಡುಗೊಲ್ಲ ಸಂಘದ ತಾಲೂಕು ಉಪಾಧ್ಯಕ್ಷರಾದ ರವಿ, ಸ್ವಾಮಿ, ದೊಡ್ಡೇಗೌಡ ,ಕುಮಾರ್, ಪ್ರಧಾನ ಕಾರ್ಯದರ್ಶಿಯಾದ ಸತೀಶ್ ಮೂರ್ತಿ, ಸಹ ಕಾರ್ಯದರ್ಶಿ ಶಿವು, ಸಂಘಟನಾ ಕಾರ್ಯದರ್ಶಿ ಶಂಕರ್, ಶಿವಣ್ಣ, ಯುವ ಸೇನೆ ಅಧ್ಯಕ್ಷರಾದ ತಿಮ್ಮೇಗೌಡ, ಗ್ರಾಮಸ್ಥರಾದ ಹಾಲಪ್ಪ ,ಜೈಪಾಲ್, ಸುದರ್ಶನ್, ಗೌರಮ್ಮ, ಪಾರ್ವತಮ್ಮ. ಇನ್ನು ಹಲವರು ಉಪಸ್ಥಿತರಿದ್ದರು.
ವರದಿ: ಮಂಜುನಾಥ್ ಕೆ ಎ ತುರುವೇಕೆರೆ.
ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ https://chat.whatsapp.com/Jf6jZ0gyQAEA5GBRpHnkrv
https://news.google.com/publications/CAAqBwgKMPHDwgswk9_ZAw?hl=en-IN&gl=IN&ceid=IN:en
https://youtube.com/@janataa24?si=XsFcych2GMH0O6Gv
https://www.janataa24.com/iasipskas-who-stood-as-the-godfather-of-the/
https://www.janataa24.com/miscreants-uprooted-40-coconut-trees-turuvekere/
Mandya: ಪತ್ನಿ ನೇಣಿಗೆ ಶರಣಾದದನ್ನು ಕಂಡು ಕೆರೆಗೆ ಹಾರಿ ಪ್ರಾಣ ಬಿಟ್ಟ ಪತಿ.