Janataa24 NEWS DESK
Turuvekere: ಬಾಲ್ ಬ್ಯಾಡ್ಮಿಂಟನ್ ಕ್ರೀಡೆಯಲ್ಲಿ ಬಾಣಸಂದ್ರದ VSSN ಬಾಲಕ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ.
ತುರುವೇಕೆರೆ: ಪಟ್ಟಣದ ಮಾಯಸಂದ್ರ ರಸ್ತೆಯಲ್ಲಿರುವ ಜಿ ಜೆ ಸಿ ಕಾಲೇಜು ಆವರಣದಲ್ಲಿ ನಡೆದ ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಕ್ರೀಡಾಕೂಟದಲ್ಲಿ ತಾಲೂಕಿನ ಸುಮಾರು 11 ಕಾಲೇಜಿನ ತಂಡಗಳು ಈ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದು ಬಾಲ್ ಬ್ಯಾಡ್ಮಿಂಟನ್ ಕ್ರೀಡೆಯಲ್ಲಿ ಬಾಣಸಂದ್ರದ ವಿ ಎಸ್ ಎಸ್ ಎನ್ ಕಾಲೇಜಿನ ಬಾಲಕರ ತಂಡ ಪಟ್ಟಣದ ಜಿ ಜೆ ಸಿ ಕಾಲೇಜಿನ ತಂಡದೊಂದಿಗೆ ಸೆಣಸಾಡಿ ಗೆಲುವು ಸಾಧಿಸಿ ಪ್ರಥಮ ಸ್ಥಾನ ಪಡೆದುದರ ಜೊತೆಗೆ ಇದೇ ಕಾಲೇಜಿನ ಬಾಲಕಿಯರ ತಂಡ ಪಟ್ಟಣದ ಬಾಣಸಂದ್ರ ರಸ್ತೆಯಲ್ಲಿರುವ ಶ್ರೀ ಸ್ವಾಮಿ ವಿವೇಕಾನಂದ ಕಾಲೇಜಿನ ತಂಡದೊಂದಿಗೆ ಸೆಣಸಾಡಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದು,
ಗೆಲುವು ಸಾಧಿಸಿದ ಬಾಣಸಂದ್ರದ ವಿ ಎಸ್ ಎಸ್ ಎನ್ ಕಾಲೇಜಿನ ಬಾಲಕ ಮತ್ತು ಬಾಲಕಿಯರ ತಂಡಕ್ಕೆ ಕಾಲೇಜಿನ ಪ್ರಾಂಶುಪಾಲರು,ಉಪನ್ಯಾಸಕರು, ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ವರ್ಗ ಅಭಿನಂದನೆ ಸಲ್ಲಿಸಿದ್ದು, ಇದೆ ವೇಳೆ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಬಾಲಕ ಮತ್ತು ಬಾಲಕಿಯರ ತಂಡದ ಕ್ರೀಡಾಪಟುಗಳಿಗೆ ತುರುವೇಕೆರೆ ತಾಲೂಕಿನ ಭೀಮೋತ್ಸವ ಆಚರಣೆ ಸಮಿತಿ ಸಂಸ್ಥಾಪಕ ಅಧ್ಯಕ್ಷರಾದ ಮೂರ್ತಿ ಸಿಎಸ್ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಲು ಸಮವಸ್ತ್ರವನ್ನು ವಿತರಿಸಿ ಪ್ರೋತ್ಸಾಹಿಸಿದರು.
ತಾಲೂಕಿನಾದ್ಯಂತ ಮೂರ್ತಿ ಸಿ ಎಸ್ ಅವರು ಪಟ್ಟಣ ಮತ್ತು ಗ್ರಾಮಾಂತರ ಭಾಗದ ಯುವಕರಿಗೆ ಮತ್ತು ಶಾಲಾ ಕಾಲೇಜಿನ ವಿದ್ಯಾರ್ಥಿಗಳಿಗೆ ಯಾವುದೇ ಕ್ರೀಡೆಯಲ್ಲಿ ಭಾಗವಹಿಸುವ ತಂಡಗಳಿಗೆ ಇದೇ ರೀತಿ ಪ್ರೋತ್ಸಾಹಿಸುತ್ತಾ ಬಂದಿದ್ದು ಇದಲ್ಲದೆ ತಾಲೂಕಿನಲ್ಲಿ ಯಾವುದೇ ಶಾಲೆಯಲ್ಲಿ ಗ್ರಾಮಾಂತರ ಭಾಗದ ವಿದ್ಯಾರ್ಥಿಗಳು ಹೆಚ್ಚು ಅಂಕ ಪಡೆದು ಮುಂದಿನ ವಿದ್ಯಾಭ್ಯಾಸಕ್ಕಾಗಿ ಪರಿತಪಿಸುವಂತಹ ಸಂದರ್ಭದಲ್ಲಿ ಅಂತಹ ವಿದ್ಯಾರ್ಥಿಗಳನ್ನು ಗುರುತಿಸಿ ಅಂತಹ ವಿದ್ಯಾರ್ಥಿಗಳನ್ನು ದತ್ತು ಪಡೆದು ಅವರ ಉನ್ನತ ಮಟ್ಟದ ವ್ಯಾಸಂಗದ ಖರ್ಚು ವೆಚ್ಚವನ್ನು ಮತ್ತು ಉನ್ನತ ದರ್ಜೆಯ ವಸತಿ ಶಾಲೆಗಳಿಗೆ ತಾವೇ ಖುದ್ದು ಮುಂದಾಗಿ ನೋಂದಾಯಿಸಿ ವಿದ್ಯಾರ್ಥಿಗಳಿಗೆ ಬೆನ್ನೆಲುಬಾಗಿ ನಿಂತಿರುವುದು ಈಗಾಗಲೇ ತಾಲೂಕಿನಾದ್ಯಂತ ಮನೆ ಮಾತಾಗಿ ಉಳಿದಿದ್ದಾರೆ ಶಿಕ್ಷಣಕ್ಕೆ ಹೆಚ್ಚು ಒತ್ತುಕೊಟ್ಟು ವಿದ್ಯಾರ್ಥಿಗಳಿಗೆ ಪ್ರೋತ್ಸಾಹಿಸುತ್ತಿರುವ ಮೂರ್ತಿ ಸಿ ಎಸ್ ಅವರಿಗೆ ಶುಭವಾಗಲಿ ಎಂದು ಆಶಿಸೋಣ,
ಇನ್ನು ಇದೆ ಸಂದರ್ಭದಲ್ಲಿ ದಲಿತ ಮುಖಂಡರಾದ ಬಾಣಸಂದ್ರ ಕೃಷ್ಣ ಸ್ವಾಮಿ, ಸಂಗ್ಲಾಪುರ ಸುನಿಲ್, ವಾಸು, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರಾದ ಗಿರೀಶ್ ಮತ್ತು ಇನ್ನು ಹಲವರು ಉಪಸ್ಥಿತರಿದ್ದರು.
ವರದಿ: ಮಂಜುನಾಥ್ ಕೆ ಎ ತುರುವೇಕೆರೆ.
ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ https://chat.whatsapp.com/Jf6jZ0gyQAEA5GBRpHnkrv
https://news.google.com/publications/CAAqBwgKMPHDwgswk9_ZAw?hl=en-IN&gl=IN&ceid=IN:en
https://youtube.com/@janataa24?si=XsFcych2GMH0O6Gv
https://www.janataa24.com/turuvekere-protesting-against-stone-mining/
IAS,IPS,KAS, ಕನಸು ಹೊತ್ತ ವಿದ್ಯಾರ್ಥಿಗಳಿಗೆ ಗಾಡ್ ಫಾದರ್ ಆಗಿ ನಿಂತ ಮೂರ್ತಿ ಸಿ ಎಸ್.
Turuvekere: ಫಸಲಿಗೆ ಬಂದ 40 ತೆಂಗಿನ ಮರಗಳನ್ನ ಕಡಿದುರುಳಿಸಿದ ಕಿಡಿಗೇಡಿಗಳು.
Operation Sindor: POK ಪಾಕಿಸ್ತಾನದ 9 ಉಗ್ರ ನೆಲೆಗಳನ್ನು ನೆಲಸಮಗೊಳಿಸಿದ ಭಾರತ ಸೇನೆ.