Janataa24 NEWS DESK
Turuvekere: ಮಲೇರಿಯಾ ಮುಕ್ತ ಭಾರತ ನಿರ್ಮಾಣಕ್ಕೆ ಸಹಕರಿಸಿ– ಡಾ.ರಂಗನಾಥ್.
ತುರುವೇಕೆರೆ: ಮಲೇರಿಯಾ ಮುಕ್ತ ಭಾರತ ನಿರ್ಮಾಣಕ್ಕೆ ಸರ್ವರೂ ಸಹಕರಿಸಿ ಎಂದು ತಾಲೂಕು ವೈದ್ಯಾಧಿಕಾರಿಗಳಾದ ಡಾ. ರಂಗನಾಥ್ ಹೇಳಿದರು.
ತಾಲೂಕಿನ ಮಾಯಸಂದ್ರ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಹಮ್ಮಿಕೊಂಡಿದ್ದ “ಮಲೇರಿಯಾ ವಿರೋಧಿ ಮಾಸಾಚರಣೆ 2025″ರ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು ಮಲೇರಿಯಾ, ಸೊಳ್ಳೆಯಿಂದ ಮನುಷ್ಯನಿಗೆ ಹರಡುವ ರೋಗ. ಅನಾಫಿಲಿಸ್ ಸೊಳ್ಳೆ ಕಚ್ಚಿದಾಗ ಜ್ವರ ಬರುತ್ತದೆ. ಮನೆ ಸುತ್ತಮುತ್ತ ನೀರು ನಿಲ್ಲದಂತೆ ನೋಡಿಕೊಳ್ಳಿ,
ಒಂದು ಸಲ ಈ ಅನಾಫಿಲಿಸ್ ಸೊಳ್ಳೆಯು ಮನುಷ್ಯರಿಗೆ ಕಚ್ಚಿದ ಬಳಿಕ ಪ್ಲಾಸ್ಮೋಡಿಯಾ ಮನುಷ್ಯನ ಯಕೃತ್‍ನಲ್ಲಿ ತನ್ನ ಸಂತಾನಾಭಿವೃದ್ಧಿ ಮಾಡಿ, ಸೋಂಕು ಉಂಟು ಮಾಡುತ್ತದೆ. ಕೆಂಪು ರಕ್ತದ ಕಣಗಳನ್ನು ನಾಶಪಡಿಸುತ್ತದೆ. ಸಾಮಾನ್ಯವಾಗಿ ಮಲೇರಿಯಾ ಜ್ವರವನ್ನು ಹೊಂದಿದ ವ್ಯಕ್ತಿಗಳು ತೀವ್ರ ಅನಾರೋಗ್ಯದಿಂದ ಬಳಲುತ್ತಿರುತ್ತಾರೆ. ವಿಪರೀತ ಜ್ವರ, ಹಲ್ಲು ಕಚ್ಚಿಕೊಳ್ಳುವಷ್ಟು ಚಳಿ, ಜತೆಗೆ ಮೈಕೈ ನೋವು ಸಾಮಾನ್ಯ ಸಮಸ್ಯೆಗಳಾಗಿ ಕಾಡುತ್ತವೆ. ಮೊದಲೇ ಇವುಗಳ ಬಗ್ಗೆ ಅರಿತು ಚಿಕಿತ್ಸೆ ಪಡೆದರೆ ಸಾವು ಸಂಭವಿಸುವುದನ್ನು ತಪ್ಪಿಸಬಹುದಾಗಿದೆ ಎಂದರು.
ಈ ವೇಳೆ ಸ್ಥಳೀಯ ಖಾಸಗಿ ಕ್ಲಿನಿಕ್ ಗಳ ವೈದ್ಯರಿಗೆ ಮತ್ತು ಲ್ಯಾಬೋರೇಟರಿ ಟೆಕ್ನಿಷಿಯನ್ಗಳಿಗೆ, ಸ್ಥಳೀಯ ಮೆಡಿಕಲ್ ಸ್ಟೋರ್ ಮಾಲೀಕರುಗಳಿಗೆ ಅಗತ್ಯ ಕ್ರಮಗಳ ಬಗ್ಗೆ ಸಹಭಾಗಿತ್ವದ ಕಾರ್ಯಾಗಾರದ ಸಭೆ ಮೂಲಕ ಸಲಹೆ, ಸೂಚನೆ ,ನೀಡಿದರು .
ಮಾಯಸಂದ್ರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಸ್ವರೂಪ ಮಾತನಾಡಿ,‘ಮನೆ ಸುತ್ತಮುತ್ತ ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಸಂಜೆ ಸೊಳ್ಳೆಗಳು ಹೆಚ್ಚುವುದರಿಂದ ರಾತ್ರಿ ವೇಳೆ ಮಲಗುವಾಗ ಸೊಳ್ಳೆ ಪರದೆ ಬಳಸಬೇಕು. ಮೊದಲೇ ನಾವು ಸೊಳ್ಳೆಗಳ ತಾಣವನ್ನು ನಾಶಮಾಡಿ ಸೊಳ್ಳೆಗಳು ಹೆಚ್ಚಾಗದಂತೆ ನೋಡಿಕೊಳ್ಳಬೇಕು ಸುತ್ತಮುತ್ತಲು ವಾತಾವರಣದಲ್ಲಿ ನೀರು ನಿಲ್ಲದಂತೆ ಅಗತ್ಯ ಕ್ರಮ ಅನುಸರಿಸಿ ಸ್ವಚ್ಛತೆಯನ್ನು ಕಾಪಾಡಿಕೊಳ್ಳಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಡಾ.ಶಿವಮೂರ್ತಿ. ಡಾ.ಸೋಮಶೇಖರ್. ಡಾ.ಶಶಿಕುಮಾರ್. ಸಿಬ್ಬಂದಿಗಳಾದ ಸುನಿಲ್. ಯತಿರಾಜು. ಶಂಕರೇಗೌಡ. ನರೇಂದ್ರ. ಯೋಗೇಶ್. ಹಾಗೂ ಮಾಯಸಂದ್ರ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ ವರ್ಗ. ಸ್ಥಳೀಯ ಖಾಸಗಿ ಕ್ಲಿನಿಕ್ ವೈದ್ಯರುಗಳು.ಮೆಡಿಕಲ್ ಸ್ಟೋರ್ ಮಾಲೀಕರಗಳು. ಲ್ಯಾಬೋರೇಟರಿ ಟೆಕ್ನಿಷಿಯನ್ ಗಳು ಸೇರಿದಂತೆ ಆಶಾ ಕಾರ್ಯಕರ್ತೆಯರು ಮುಂತಾದವರಿದ್ದರು.
ವರದಿ: ಮಂಜುನಾಥ್ ತುರುವೇಕೆರೆ.
ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ https://chat.whatsapp.com/Jf6jZ0gyQAEA5GBRpHnkrv
https://news.google.com/publications/CAAqBwgKMPHDwgswk9_ZAw?hl=en-IN&gl=IN&ceid=IN:en
https://youtube.com/@janataa24?si=XsFcych2GMH0O6Gv
https://www.janataa24.com/turuvekere-protesting-against-stone-mining/
IAS,IPS,KAS, ಕನಸು ಹೊತ್ತ ವಿದ್ಯಾರ್ಥಿಗಳಿಗೆ ಗಾಡ್ ಫಾದರ್ ಆಗಿ ನಿಂತ ಮೂರ್ತಿ ಸಿ ಎಸ್.
Turuvekere: ಫಸಲಿಗೆ ಬಂದ 40 ತೆಂಗಿನ ಮರಗಳನ್ನ ಕಡಿದುರುಳಿಸಿದ ಕಿಡಿಗೇಡಿಗಳು.
Operation Sindor: POK ಪಾಕಿಸ್ತಾನದ 9 ಉಗ್ರ ನೆಲೆಗಳನ್ನು ನೆಲಸಮಗೊಳಿಸಿದ ಭಾರತ ಸೇನೆ.