Document

Turuvekere: ಪಟ್ಟಣದಲ್ಲಿ ಅಂಬೇಡ್ಕರ್ ಪುತ್ತಳಿ ಪ್ರತಿಷ್ಠಾಪನೆಗೆ ಒಗ್ಗಟಿನ ಪ್ರದರ್ಶನ.

JANATAA24 NEWS DESK 

 

 

Turuvekere: ಪಟ್ಟಣದಲ್ಲಿ ಅಂಬೇಡ್ಕರ್ ಪುತ್ತಳಿ ಪ್ರತಿಷ್ಠಾಪನೆಗೆ ಒಗ್ಗಟಿನ ಪ್ರದರ್ಶನ.

Turuvekere,

ತುರುವೇಕೆರೆ: ಪಟ್ಟಣದ ಪ್ರವಾಸಿ ಮಂದಿರದಲ್ಲಿ ಉಪಸ್ಥಿತರಿದ್ದ ಶಾಸಕ ಎಂ ಟಿ ಕೃಷ್ಣಪ್ಪ ಮಾತನಾಡಿ ಎಲ್ಲಾ ಸಮುದಾಯದ ಮುಖಂಡರು ಒಗ್ಗೂಡಿ ಸಮಿತಿಯನ್ನು ರಚಿಸಿ ತೀರ್ಮಾನಿಸಿ ನಾನು ಕೂಡ ಅಂಬೇಡ್ಕರ್ ಪುತ್ತಳಿ ಪ್ರತಿಷ್ಠಾಪಿಸಲು ಎಲ್ಲಾ ರೀತಿಯ ಸಹಕಾರ ನೀಡುತ್ತೇನೆ ಎಂದು ಹೇಳಿ ಅಲ್ಲಿಂದ ತೆರಳಿದರು.

ಇದಾದ ಬಳಿಕ ತುರುವೇಕೆರೆ ತಾಲೂಕು ಬಿಮೋತ್ಸವ ಆಚರಣೆ ಸಮಿತಿ ಸಂಸ್ಥಾಪಕ ಅಧ್ಯಕ್ಷರಾದ ಮೂರ್ತಿ ಸಿ ಎಸ್ ನೇತೃತ್ವದಲ್ಲಿ ಪಟ್ಟಣದಲ್ಲಿ ಡಾ. ಬಿ ಆರ್ ಅಂಬೇಡ್ಕರ್ ಪುತ್ತಳಿ ಪ್ರತಿಷ್ಠಾಪನೆ ಕುರಿತು ಚರ್ಚಿಸಲು ಪೂರ್ವಭಾವಿ ಸಭೆಯನ್ನು ನಡೆಸಲಾಯಿತು ಈ ಸಭೆಯಲ್ಲಿ ಎಲ್ಲಾ ಸಮುದಾಯದ ಅಧ್ಯಕ್ಷರು ಪದಾಧಿಕಾರಿಗಳು ವಿವಿಧಪರ ಸಂಘಟನೆಗಳ ಮುಖಂಡರು ಭಾಗವಹಿಸಿ ಈಗಾಗಲೇ ರಾಜ್ಯಾದ್ಯಂತ ಎಲ್ಲಾ ತಾಲೂಕುಗಳಲ್ಲಿ ಡಾ. ಬಿಆರ್ ಅಂಬೇಡ್ಕರ್ ರವರ ಪುತ್ತಳಿಯನ್ನು ನಿರ್ಮಾಣ ಮಾಡಿದ್ದು ತುರುವೇಕೆರೆ ತಾಲೂಕಿನಲ್ಲಿ ಇನ್ನೂ ಸಹ ನಿರ್ಮಾಣಗೊಳ್ಳದ ಹಿನ್ನೆಲೆ ಮುಖಂಡರೊಂದಿಗೆ ಚರ್ಚಿಸಲಾಯಿತು.

ತಾಲೂಕಿನ ಪ್ರತಿಯೊಂದು ಸಮುದಾಯದ ಮುಖಂಡರು ಈ ಸಭೆಯಲ್ಲಿ ಭಾಗವಹಿಸಿ ಅಂಬೇಡ್ಕರ್ ಪುತ್ತಳಿ ನಿರ್ಮಾಣಕ್ಕಾಗಿ ನಮ್ಮ ಸಹಕಾರವು ಇದೆ ಸಮ ಸಮಾಜ ಸರ್ವ ಜನಾಂಗದ ತೋಟ ನಿರ್ಮಾಣಕ್ಕಾಗಿ ನಾವು ಸಿದ್ಧರಿದ್ದೇವೆ ಎಂದು ಹೇಳಿ ಸಂವಿಧಾನ ಪೀಠಿಕೆ ಹೇಳುವುದರ ಮೂಲಕ ತಮ್ಮ ನಿರ್ಧಾರವನ್ನು ವ್ಯಕ್ತಪಡಿಸಿದ್ದಾರೆ ಬಳಿಕ ಎಲ್ಲಾ ಸಮುದಾಯದ ಮುಖಂಡರೊಂದಿಗೆ ಚರ್ಚಿಸಿ ಪಟ್ಟಣದ ಮೂರ್ನಾಲ್ಕು ಸ್ಥಳಗಳನ್ನು ತಮ್ಮ ತಮ್ಮ ಅನಿಸಿಕೆ ಮೂಲಕ ವ್ಯಕ್ತಪಡಿಸಿದರು.

ನಂತರ ಇದೆ ವೇಳೆ ಅಂಬೇಡ್ಕರ್ ಪುತ್ತಳಿ ಪ್ರತಿಷ್ಠಾಪಿಸಲು ಒಂದು ಸಮಿತಿಯನ್ನು ರಚನೆ ಮಾಡಿ ಆ ಸಮಿತಿಗೆ ಡಾ. ಬಿ ಆರ್ ಅಂಬೇಡ್ಕರ್ ಪುತ್ತಳಿ ಪ್ರತಿಷ್ಠಾಪನ ಸೇವಾ ಸಮಿತಿ ಎಂಬ ನಾಮಕರಣ ಮಾಡಿ ಸಭೆಯಲ್ಲಿ ತಾಲೂಕು ಹಿರಿಯ ವಕೀಲರಾದ ದನಪಾಲ್ ಅವರನ್ನು ಸರ್ವಾನುಮತದಿಂದ ಎಲ್ಲಾ ಸಮುದಾಯದ ಮುಖಂಡರ ಒಪ್ಪಿಗೆ ಮೇರೆಗೆ ಸಮಿತಿಯ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಯಿತು ಜೊತೆಗೆ ಇನ್ನೋರ್ವ ಮುಖಂಡರಾದ ಕುಮಾರಸ್ವಾಮಿ ಅವರನ್ನು ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆ ಮಾಡಲಾಯಿತು ಮುಂದಿನ ಸಭೆಯಲ್ಲಿ ತಾಲೂಕಿನ ಎಲ್ಲಾ ಸಮುದಾಯದ ಒಬ್ಬೊಬ್ಬ ಮುಖಂಡರನ್ನು ಈ ಡಾ. ಬಿಆರ್ ಅಂಬೇಡ್ಕರ್ ಪುತ್ತಳಿ ಪ್ರತಿಷ್ಠಾಪನ ಸೇವಾ ಸಮಿತಿಯಲ್ಲಿ ಆಯ್ಕೆ ಮಾಡಲು ಪೂರ್ವಭಾವಿ ಸಭೆಯಲ್ಲಿ ತೀರ್ಮಾನಿಸಲಾಯಿತು.

 

ಇದೇ ಸಂದರ್ಭದಲ್ಲಿ ತಾಲೂಕಿನ ಎಲ್ಲಾ ಸಮುದಾಯದ ಮುಖಂಡರು ವಿವಿಧ ಪರ ಸಂಘಟನೆಗಳ ಮುಖಂಡರು ಮಹಿಳಾ ಮುಖಂಡರು ಪಟ್ಟಣ ಪಂಚಾಯಿತಿ ಅಧ್ಯಕ್ಷರು ಸದಸ್ಯರು ಇನ್ನು ಹಲವು ಯುವ ಮುಖಂಡರು ಸೇರಿದಂತೆ ಹಲವರು ಉಪಸ್ಥಿತರಿದ್ದರು.

 

ವರದಿ: ಮಂಜುನಾಥ್ ಕೆ ಎ ತುರುವೇಕೆರೆ.

ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ https://chat.whatsapp.com/Jf6jZ0gyQAEA5GBRpHnkrv

 

https://news.google.com/publications/CAAqBwgKMPHDwgswk9_ZAw?hl=en-IN&gl=IN&ceid=IN:en

 

 

https://youtube.com/@janataa24?si=XsFcych2GMH0O6Gv

 

 

https://www.janataa24.com/turuvekere-protesting-against-stone-mining/

 

IAS,IPS,KAS, ಕನಸು ಹೊತ್ತ ವಿದ್ಯಾರ್ಥಿಗಳಿಗೆ ಗಾಡ್ ಫಾದರ್ ಆಗಿ ನಿಂತ ಮೂರ್ತಿ ಸಿ ಎಸ್.

 

 

Turuvekere: ಫಸಲಿಗೆ ಬಂದ 40 ತೆಂಗಿನ ಮರಗಳನ್ನ ಕಡಿದುರುಳಿಸಿದ ಕಿಡಿಗೇಡಿಗಳು.

 

 

Operation Sindor: POK ಪಾಕಿಸ್ತಾನದ 9 ಉಗ್ರ ನೆಲೆಗಳನ್ನು ನೆಲಸಮಗೊಳಿಸಿದ ಭಾರತ ಸೇನೆ.


Document

Leave a Reply

Your email address will not be published. Required fields are marked *