Document

Turuvekere: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ, ನಮ್ಮೂರು ನಮ್ಮ ಕೆರೆ ಕಾರ್ಯಕ್ರಮ.

Janataa24 NEWS DESK 

 

 

Turuvekere: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ, ನಮ್ಮೂರು ನಮ್ಮ ಕೆರೆ ಕಾರ್ಯಕ್ರಮ.

Turuvekere: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ, ನಮ್ಮೂರು ನಮ್ಮ ಕೆರೆ ಕಾರ್ಯಕ್ರಮ.
ತುರುವೇಕೆರೆ: ತಾಲೂಕು ಯೋಜನಾ ಕಚೇರಿ ವ್ಯಾಪ್ತಿಯ ದಿಡಗ ವಲಯದ ಪುರ ಗ್ರಾಮದಲ್ಲಿ ನಮ್ಮೂರು ನಮ್ಮ ಕೆರೆ ಕಾರ್ಯಕ್ರಮದಲ್ಲಿ ಕಾಮಗಾರಿಯ ಪೂರ್ಣ ತಯಾರಿ ಸಭೆಯನ್ನು ಶ್ರೀ ವೀರಭದ್ರೇಶ್ವರ ದೇವಸ್ಥಾನ ಆವರಣದಲ್ಲಿ ನಡೆಸಲಾಯಿತು, ಇದೇ ವೇಳೆ ತುಮಕೂರು ಜಿಲ್ಲಾ ನಿರ್ದೇಶಕರಾದ ಶ್ರೀ ಸತೀಶ್ ಸುವರ್ಣ ಅವರು ಮಾತನಾಡಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಮಾಜಮುಖಿ ಕಾರ್ಯಕ್ರಮದಲ್ಲಿ ದೇವಸ್ಥಾನಕ್ಕೆ ಸಹಾಯಧನ, ನಿರ್ಗತಿಕರ ಮಾಶಾಸನ, ವಾತ್ಸಲ್ಯ ಮನೆ ನಿರ್ಮಾಣ, ಬಡ ವಿದ್ಯಾರ್ಥಿಗಳ ಕಲಿಕೆಗಾಗಿ ಸುಜ್ಞಾನ ನಿಧಿ ಶಿಷ್ಯವೇತನ, ಮುಂತಾದ ಕಾರ್ಯಕ್ರಮದೊಂದಿಗೆ ಗ್ರಾಮದಲ್ಲಿರುವ ಹೂಳು ತುಂಬಿದ ಕೆರೆಗಳಿಗೆ ಪುನರ್ಜನ್ಮ ನೀಡಿ ಕೃಷಿಗೆ ಮತ್ತು ದನ ಕರುಗಳಿಗೆ ಉಪಯೋಗಿಸುವಂತೆ ಅಭಿವೃದ್ಧಿ ಮಾಡಿಕೊಡುವ ಕೆಲಸವನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಾಡುತ್ತಿದೆ ಎಂದರು.

ಇದೇ ಸಂದರ್ಭದಲ್ಲಿ ಕಾರ್ಯಕ್ರಮದ ಉದ್ದೇಶದಂತೆ ಕೆರೆ ಸಮಿತಿಯನ್ನು ರಚನೆ ಮಾಡಿ ಅಧ್ಯಕ್ಷರನ್ನಾಗಿ ಊರಿನ ಹಿರಿಯ ಮುಖಂಡರಾದ ಕೆ, ಚಂದು ಅವರನ್ನು ಜೊತೆಗೆ ಉಪಾಧ್ಯಕ್ಷರಾಗಿ ಶಿವಶಂಕರ್, ಚಂದ್ರಶೇಖರ್, ಪ್ರಕಾಶ್, ಹಾಗೂ ಕಾರ್ಯದರ್ಶಿಯಾಗಿ ಉದಯ ಅವರನ್ನು ಕೋಶಾಧಿಕಾರಿಯಾಗಿ ನಾಗರಾಜು ಅವರನ್ನು ಆಯ್ಕೆ ಮಾಡಲಾಯಿತು, ಇದೆ ವೇಳೆ ತಾಲೂಕು ಯೋಜನಾಧಿಕಾರಿ ಶಾಲಿನಿ, ಕೃಷಿ ಮೇಲ್ವಿಚಾರಕ ದಿನೇಶ್, ಸೇವಾ ಪ್ರತಿನಿಧಿ ಸುನಿತಾ ಹಾಗೂ ಇನ್ನು ಹಲವು ಗ್ರಾಮಸ್ಥರು ಉಪಸ್ಥಿತರಿದ್ದರು.

 

ವರದಿ: ಮಂಜುನಾಥ್ ಕೆ ಎ ತುರುವೇಕೆರೆ.

ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ https://chat.whatsapp.com/Jf6jZ0gyQAEA5GBRpHnkrv

 

https://news.google.com/publications/CAAqBwgKMPHDwgswk9_ZAw?hl=en-IN&gl=IN&ceid=IN:en

 

 

https://youtube.com/@janataa24?si=XsFcych2GMH0O6Gv

 

 

https://www.janataa24.com/turuvekere-protesting-against-stone-mining/

 

IAS,IPS,KAS, ಕನಸು ಹೊತ್ತ ವಿದ್ಯಾರ್ಥಿಗಳಿಗೆ ಗಾಡ್ ಫಾದರ್ ಆಗಿ ನಿಂತ ಮೂರ್ತಿ ಸಿ ಎಸ್.

 

 

Turuvekere: ಫಸಲಿಗೆ ಬಂದ 40 ತೆಂಗಿನ ಮರಗಳನ್ನ ಕಡಿದುರುಳಿಸಿದ ಕಿಡಿಗೇಡಿಗಳು.

 

 

Operation Sindor: POK ಪಾಕಿಸ್ತಾನದ 9 ಉಗ್ರ ನೆಲೆಗಳನ್ನು ನೆಲಸಮಗೊಳಿಸಿದ ಭಾರತ ಸೇನೆ.

 

Document

Leave a Reply

Your email address will not be published. Required fields are marked *