Document

Turuvekere: ತುರುವೇಕೆರೆಯಲ್ಲಿ ಅದ್ಧೂರಿಯಾಗಿ ನಡೆದ ಡಾ|ಬಿ.ಆರ್. ಅಂಬೇಡ್ಕರ್ ರವರ 134 ನೇ ಜನ್ಮದಿನೋತ್ಸವ

Janataa24 NEWS DESK 

 

Turuvekere: ತುರುವೇಕೆರೆಯಲ್ಲಿ ಅದ್ಧೂರಿಯಾಗಿ ನಡೆದ ಡಾ|ಬಿ.ಆರ್. ಅಂಬೇಡ್ಕರ್ ರವರ 134 ನೇ ಜನ್ಮದಿನೋತ್ಸವ.

Turuvekere: ತುರುವೇಕೆರೆಯಲ್ಲಿ ಅದ್ಧೂರಿಯಾಗಿ ನಡೆದ ಡಾ|ಬಿ.ಆರ್. ಅಂಬೇಡ್ಕರ್ ರವರ 134 ನೇ ಜನ್ಮದಿನೋತ್ಸವ

ತುರುವೇಕೆರೆ: ಪಟ್ಟಣದ ತಾಲೂಕು ಕಚೇರಿ ಆವರಣದಲ್ಲಿ ಸಂವಿಧಾನ ಶಿಲ್ಪಿ ಡಾ// ಬಿ ಆರ್ ಅಂಬೇಡ್ಕರ್ ರವರ 134ನೇ ಹಾಗೂ ಹಸಿರು ಕ್ರಾಂತಿಯ ಹರಿಕಾರ ರಾಷ್ಟ್ರ ನಾಯಕ ಹಾಗೂ ಭಾರತದ ಮಾಜಿ ಉಪ ಪ್ರಧಾನಿ ಡಾ// ಬಾಬು ಜಗಜೀವನ್ ರಾಮ್ ರವರ 118ನೆಯ ಜನ್ಮ ದಿನಾಚರಣೆ ಅಂಗವಾಗಿ ಇಬ್ಬರ ಭಾವಚಿತ್ರವನ್ನು ಪಟ್ಟಣದ ಪ್ರಮುಖ ಬೀದಿಯಲ್ಲಿ ಮೆರವಣಿಗೆ ಮಾಡಲು ತಾಲೂಕು ಕಚೇರಿಯ ಆವರಣದಲ್ಲಿ ತಹಸಿಲ್ದಾರ್ ಕುಂ ಈ ಅಹಮದ್ ಅವರು ಚಾಲನೆ ನೀಡಿದರು, ನಂತರ ತಾಲೂಕು ಆಡಳಿತದ ಎಲ್ಲಾ ಸಿಬ್ಬಂದಿ ವರ್ಗಗಳು ಮತ್ತು ದಲಿತ ನಾಯಕರು ಮುಖಂಡರು ಒಳಗೊಂಡಂತೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಕಹಳೆ, ತಮಟೆ, ನಾಸಿಕ್ ಡೋಲ್ ವಾದ್ಯದೊಂದಿಗೆ ಮೆರವಣಿಗೆ ಪ್ರಾರಂಭವಾಗಿ ತಾಲೂಕು ಕಚೇರಿ ಎದುರುಗಿರುವ ಅಂಬೇಡ್ಕರ್ ರಸ್ತೆಯ ನಾಮಫಲಕಕ್ಕೆ ಪುಷ್ಪಾರ್ಚನೆ ಮಾಡಿ ಮೆರವಣಿಗೆ ಮುಂದೆ ಸಾಗಿತು, ಇನ್ನು ವೇದಿಕೆ ಕಾರ್ಯಕ್ರಮ ಆಯೋಜನೆ ಮಾಡಿದ್ದ ಶ್ರೀ ಸತ್ಯ ಗಣಪತಿ ಆಸ್ಥಾನ ಮಂಟಪಕ್ಕೆ ತಲುಪಿತು, ಇನ್ನು ವೇದಿಕೆ ಕಾರ್ಯಕ್ರಮಕ್ಕೆ ಮೊದಲಿಗೆ ನಾಡಗೀತೆ ಮತ್ತು ಕ್ರಾಂತಿ ಗೀತೆಯನ್ನು ಹಾಗೂ ರೈತ ಗೀತೆಯನ್ನು ಆಡುವುದರ ಮೂಲಕ ಚಾಲನೆ ನೀಡಿ ಕಾರ್ಯಕ್ರಮದ ಉದ್ಘಾಟನೆ ಮತ್ತು ಅಧ್ಯಕ್ಷತೆ ವಹಿಸಿದ ಶಾಸಕರಾದ ಎಂ ಟಿ ಕೃಷ್ಣಪ್ಪ ಅವರು ಅಂಬೇಡ್ಕರ್ ಮತ್ತು ಬಾಬು ಜಗಜೀವನ್ ರಾಮ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ದೀಪ ಬೆಳಗುವುದರ ಮೂಲಕ ಕಾರ್ಯಕ್ರಮ ಪ್ರಾರಂಭಗೊಂಡಿತು,

ಇದೆ ವೇಳೆ ಮುಖ್ಯ ಭಾಷಣಕಾರರಾಗಿ ಆಗಮಿಸಿದ ಡಾ// ರವಿಕುಮಾರ್ ನೀಹ, ಮಾತನಾಡಿ, ದೇಶದ ಜನರಿಗೆ ಅಂಬೇಡ್ಕರ್ ಪರಮಾತ್ಮ,ದೇಶದ ಜನರಿಗೆ ಸಲ್ಲಿಸಿದ ಸಂವಿಧಾನ ಶ್ರೇಷ್ಠ ಗ್ರಂಥ,ವಿಶ್ವವಿಜ್ಞಾನಿ ಡಾಕ್ಟರ್ ಅಂಬೇಡ್ಕರ್ ಅವರು ದೇಶ ಮತ್ತು ಜಗತ್ತಿಗೆ ಸಮಾನತೆ ಸ್ವಾತಂತ್ರ್ಯ ಭ್ರಾತೃತ್ವ ಮತ್ತು ನ್ಯಾಯದ ಸಂದೇಶವನ್ನು ನೀಡಿದವರು ಆದ್ದರಿಂದ ಅವರ ಆದರ್ಶಗಳನ್ನು ನಾವೆಲ್ಲರೂ ಕೂಡ ಮೈಗೂಡಿಸಿಕೊಂಡು ಶಿಕ್ಷಣ ಸಂಘಟನೆ ಹೋರಾಟ ಹಾಗೂ ನ್ಯಾಯ ಬದ್ಧವಾಗಿ ಎಲ್ಲರ ಜೊತೆ ಸಹ ಬಾಳ್ವೆಯಿಂದ ಬದುಕೋಣ ಎಂದರು, ನಂತರ ಶಾಸಕ ಎಂ ಟಿ ಕೃಷ್ಣಪ್ಪ ಮಾತನಾಡಿ ಅಂಬೇಡ್ಕರ್ ಅವರು ಈ ದೇಶಕ್ಕೆ ಸಂವಿಧಾನ ಸಮರ್ಪಣೆ ಮಾಡಿರುವುದು ನೋಡಿದರೆ ಕೇವಲ ಒಂದು ಸಮಾಜಕ್ಕೆ ನೀಡಿರುವ ಸಂವಿಧಾನವಲ್ಲ ಅದು ಈ ದೇಶದ ಜನರಿಗಾಗಿ ಕೊಟ್ಟಿರುವ ಸಂವಿಧಾನ ಹೀಗಾಗಿ ಅಂಬೇಡ್ಕರ್ ಅವರು ನಮಗೆ ದಾರಿದೀಪವೂ ಕೂಡ ಅಂಬೇಡ್ಕರ್ ಅವರ ಇತಿಹಾಸವನ್ನು ಅರಿತು ನಾವೆಲ್ಲರೂ ಬದುಕಬೇಕಾಗಿದೆ ಅಂಬೇಡ್ಕರ್ ಅವರು ಶಿಕ್ಷಣ ಪಡೆದ ರೀತಿಯನ್ನು ನೋಡಿದರೆ ಬಲು ಕಷ್ಟಕರವಾಗಿತ್ತು ಅಂಬೇಡ್ಕರ್ ಅವರು ದೇಶ ಮತ್ತು ಜಗತ್ತಿಗೆ ಸಮಾನತೆ ಸ್ವಾತಂತ್ರ್ಯ ಬ್ರಾತೃತ್ವ ಮತ್ತು ನ್ಯಾಯದ ಸಂದೇಶವನ್ನು ನೀಡಿದವರು ಆದ್ದರಿಂದ ಅವರ ಆದರ್ಶಗಳನ್ನು ನಾವೆಲ್ಲರೂ ಕೂಡ ಮೈಗೂಡಿಸಿಕೊಂಡು ಶಿಕ್ಷಣ ಸಂಘಟನೆ ಹೋರಾಟ ಹಾಗೂ ನ್ಯಾಯ ಬದ್ಧವಾಗಿ ಎಲ್ಲರ ಜೊತೆ ಸಹ ಬಾಳ್ವೆಯಿಂದ ಬದುಕಬೇಕು ತಂದೆ ತಾಯಿಗಳು ಮಕ್ಕಳಿಗಾಗಿ ಆಸ್ತಿ ಮಾಡದೆ ಶಿಕ್ಷಣ ನೀಡಿ ಮಕ್ಕಳನ್ನೇ ಆಸ್ತಿಯನ್ನಾಗಿ ಮಾಡಬೇಕು ಅಂಬೇಡ್ಕರ್ ಅವರ ಅನೇಕ ಕಷ್ಟ ಕಾರ್ಪಣ್ಯಗಳ ಮಧ್ಯೆ ಶಿಕ್ಷಣವನ್ನು ಪಡೆದು ವಿಶ್ವ ವ್ಯಾಪಿ ವಿಶ್ವ ನಾಯಕರಾಗಿ ಹೊರ ಹೊಮ್ಮಿದ್ದವರು ಹಾಗಾಗಿ ಅಂಬೇಡ್ಕರ್ ಅವರ ಆದರ್ಶ ತತ್ವ ಸಿದ್ಧಾಂತಗಳನ್ನು ಅವರು ನಡೆದು ಬಂದ ಹಾದಿಯನ್ನು ನಾವು ಕೂಡ ಸ್ಮರಿಸಿ ಮೈಗೂಡಿಸಿಕೊಂಡು ಸಾಗಬೇಕು ಆಗ ತಾನೆ ಸದೃಢ ರಾಷ್ಟ್ರ ನಿರ್ಮಾಣವಾಗಲು ಸಾಧ್ಯ ಎಂದು ಹೇಳಿದರು.ಇನ್ನು ಪಟ್ಟಣದಲ್ಲಿ ವಿಜೃಂಭಣೆಯಿಂದ ನಡೆದ ಮೆರವಣಿಗೆಗೆ ಅಂಬೇಡ್ಕರ್ ಅನುಯಾಯಿಗಳು ಮುಖಂಡರು ನಾಯಕರು ತಮಟೆ ವಾದ್ಯಕ್ಕೆ ಕುಣಿದು ಕುಪ್ಪಳಿಸಿದರು. ವೇದಿಕೆ ಕಾರ್ಯಕ್ರಮದಲ್ಲಿ ಸಮುದಾಯದ ನಾಯಕರುಗಳಿಗೆ ಹಾಗೂ ಪತ್ರಕರ್ತರಿಗೆ ತಾಲೂಕು ಆಡಳಿತದ ವತಿಯಿಂದ ಸನ್ಮಾನಿಸಲಾಯಿತು

 

ಇದೇ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾಗಿರುವ ಡಾ. ನವೀನ್, ತುರುವೇಕೆರೆ ಪಟ್ಟಣ ಪಂಚಾಯಿತಿ ಅಧ್ಯಕ್ಷರಾದ ಶ್ರೀಮತಿ ಸ್ವಪ್ನ ನಟೇಶ್, ಉಪಾಧ್ಯಕ್ಷರಾದ ಶ್ರೀಮತಿ ಕೆ ಭಾಗ್ಯ, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಣಾಧಿಕಾರಿ ಶಿವ ರಾಜಯ್ಯ, ಪಟ್ಟಣ ಪಂಚಾಯಿತಿ ಮುಖ್ಯ ಅಧಿಕಾರಿ ಶ್ರೀನಾಥ್ ಬಾಬು, ಕ್ಷೇತ್ರ ಶಿಕ್ಷಣಾಧಿಕಾರಿ ಸೋಮಶೇಖರ್, ಸಮಾಜ ಕಲ್ಯಾಣ ಇಲಾಖೆ ಗ್ರೇಡ್ 2 ಸಹಾಯಕ ನಿರ್ದೇಶಕ ಶ್ರೀಧರ್ ಮೂರ್ತಿ, ತಾಲೂಕಿನ ಎಲ್ಲಾ ದಲಿತ ಸಂಘರ್ಷ ಸಮಿತಿಯ ಅಧ್ಯಕ್ಷರು ಉಪಾಧ್ಯಕ್ಷರು ಪದಾಧಿಕಾರಿಗಳು ದಲಿತಪರ ಹಾಗೂ ಪ್ರಗತಿಪರ ಸಂಘಟನೆಗಳ ಎಲ್ಲಾ ಪದಾಧಿಕಾರಿಗಳು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಧ್ಯಕ್ಷರು ಉಪಾಧ್ಯಕ್ಷರು ಪದಾಧಿಕಾರಿಗಳು, ತಾಲೂಕು ಮಟ್ಟದ ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗ, ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು ತಾಲೂಕಿನ ಎಲ್ಲಾ ರಾಜಕೀಯ ಮುಖಂಡರುಗಳು ಗ್ರಾಮ ಪಂಚಾಯತ್ ಅಧ್ಯಕ್ಷರು ಉಪಾಧ್ಯಕ್ಷರು ಹಾಗೂ ಸರ್ವ ಸದಸ್ಯರು ಪಟ್ಟಣ ಪಂಚಾಯಿತಿಯ ಸರ್ವ ಸದಸ್ಯರು ತುರುವೇಕೆರೆ ತಾಲೂಕಿನ ಎಲ್ಲಾ ಸಹಕಾರ ಸಂಘಗಳು ಅಧ್ಯಕ್ಷರುಗಳು ಉಪಾಧ್ಯಕ್ಷರುಗಳು ಮತ್ತು ಸದಸ್ಯರುಗಳು ತಾಲೂಕಿನ ಎಲ್ಲಾ ಸಂಸ್ಥೆಗಳ ಪದಾಧಿಕಾರಿಗಳು ಚುನಾಯಿತ ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕ ಬಂಧುಗಳು ಉಪಸ್ಥಿತರಿದ್ದರು.

 

ವರದಿ: ಮಂಜುನಾಥ್ ಕೆ ಎ ತುರುವೇಕೆರೆ.

 

 

ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ https://chat.whatsapp.com/Jf6jZ0gyQAEA5GBRpHnkrv

https://news.google.com/publications/CAAqBwgKMPHDwgswk9_ZAw?hl=en-IN&gl=IN&ceid=IN:en

https://youtube.com/@janataa24?si=XsFcych2GMH0O6Gv

https://www.janataa24.com/iasipskas-who-stood-as-the-godfather-of-the/

https://www.janataa24.com/miscreants-uprooted-40-coconut-trees-turuvekere/

Mandya: ಪತ್ನಿ ನೇಣಿಗೆ ಶರಣಾದದನ್ನು ಕಂಡು ಕೆರೆಗೆ ಹಾರಿ ಪ್ರಾಣ ಬಿಟ್ಟ ಪತಿ.

Document

Leave a Reply

Your email address will not be published. Required fields are marked *