Janataa24 NEWS DESK
Turuvekere: ಕಣಕೂರು ಪ್ರಾ.ಕೃ.ಪ.ಸ.ಸಂಘಕ್ಕೆ ನೂತನ ಅಧ್ಯಕ್ಷರಾಗಿ ಶ್ರೀನಿವಾಸ್ ಕೆ, ಉಪಾಧ್ಯಕ್ಷರಾಗಿ ಅಂದಾನಿಗೌಡ ಅವಿರೋಧ ಆಯ್ಕೆ.

ತುರುವೇಕೆರೆ: ತಾಲೂಕಿನ ಮಾಯಸಂದ್ರ ಹೋಬಳಿಯ ಕಣಕೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ “ಶ್ರೀನಿವಾಸ್ ಕೆ ಮತ್ತು ಉಪಾಧ್ಯಕ್ಷರಾಗಿ ಅಂದಾನಿಗೌಡ
ರವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಕಳೆದ ತಿಂಗಳು ದಿ-31-05-2025ರಂದು ಸಂಘದ ನೂತನಆಡಳಿತ ಮಂಡಳಿಯ ಚುನಾವಣೆಯು ನಡೆದಿತ್ತು, ಚುನಾವಣೆಯಲ್ಲಿ 12 ಮಂದಿ ನಿರ್ದೇಶಕರುಗಳು ಗೆಲುವನ್ನು ಸಾಧಿಸಿದ್ದರು.ಬಳಿಕ ಸಂಘದ ಆಡಳಿತ ಮಂಡಳಿಯ ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಚುನಾವಣೆಯು ಜೂ. 10ರ ಮಂಗಳವಾರ ನಡೆಯಿತು. 12 ನಿರ್ದೇಶಕ ಬಲವುಳ್ಳ ಸಂಘದಲ್ಲಿ ಅಧ್ಯಕ್ಷ ಸ್ಥಾನಕ್ಕೆ ಶ್ರೀನಿವಾಸ್ ಕೆ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಅಂದಾನಿಗೌಡ ರವರು ಮಾತ್ರ ನಾಮಪತ್ರ ಸಲ್ಲಿಸಿದ್ದರಿಂದ ಸಹಕಾರ ಇಲಾಖೆಯ ಚುನಾವಣಾಧಿಕಾರಿಯಾದ ಲತಾ ಟಿ ರವರು ಅಧ್ಯಕ್ಷ -ಉಪಾಧ್ಯಕ್ಷ ಸ್ಥಾನಗಳನ್ನು ಅವಿರೋಧ ಆಯ್ಕೆ ಎಂದು ಘೋಷಿಸಿದರು.
ಈ ವೇಳೆ ಪತ್ರಕರ್ತರೊಂದಿಗೆ ನೂತನ ಅಧ್ಯಕ್ಷರಾದ ಶ್ರೀನಿವಾಸ್ ಕೆ ರವರು ಮಾತನಾಡಿ, ಅವಿರೋಧವಾಗಿ ಆಯ್ಕೆಯಾಗಲು ಸಹಕರಿಸಿದ ಸರ್ವ ನಿರ್ದೇಶಕರುಗಳಿಗೆ ಮತ್ತು ಸಹಕರಿಸಿದ ಸರ್ವರಿಗೂ ಧನ್ಯವಾದಗಳನ್ನು ಅರ್ಪಿಸುತ್ತೇನೆ. ಮತ್ತು ನಮ್ಮ ಸಂಘದ ಸರ್ವ ನಿರ್ದೇಶಕರ ಜೊತೆಗೂಡಿ ಸಂಘದ ವ್ಯಾಪ್ತಿಯಲ್ಲಿನ ಎಲ್ಲಾ ಹಳ್ಳಿಗಳಿಗ ರೈತರುಗಳಿಗೆ ಸರ್ಕಾರಿದಿಂದ ದೊರೆಯುವ ಎಲ್ಲಾ ಸೌಲಭ್ಯಗಳನ್ನು ಪ್ರಾಮಾಣಿಕವಾಗಿ ದೊರಕಿಸುವ ನಿಟ್ಟಿನಲ್ಲಿ ಸೇವೆ ಸಲ್ಲಿಸುತ್ತೇನೆ ಮತ್ತು ಸಹಕಾರ ಸಂಘದ ಶ್ರೇಯೋಭಿವೃದ್ಧಿಗಾಗಿ, ಸಂಘದ ಏಳಿಗೆಗಾಗಿ ಶ್ರಮಿಸಿದಾಗಿ ತಿಳಿಸಿದರು.
ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಆಯ್ಕೆಯ ಘೋಷಣೆಯಾಗುತ್ತಿದ್ದಂತೆ ತಮ್ಮ ಬೆಂಬಲಿಗರು, ಅಭಿಮಾನಿಗಳು, ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು ಹಾಗೂ ಸ್ಥಳೀಯ ಮುಖಂಡರುಗಳು, ಸಂಘದ ಆಡಳಿತ ಮಂಡಳಿಯೂ ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷರನ್ನು ಅಭಿನಂದಿಸಿ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಸಂಘದ ಆಡಳಿತ ಮಂಡಳಿಯ ನೂತನ ನಿರ್ದೇಶಕರುಗಳಾದ ಕಾಂತಣ್ಣ. ಕೆಂಚಯ್ಯ. ರಮೇಶ್. ಮೇಘ. ವನಜಾಕ್ಷಮ್ಮ. ಜಹೀರ್. ನಂದೀಪ್. ಕರಿಯಪ್ಪ. ನಾಗರಾಜು. ಮುಕ್ಕುಂದ. ಹಾಗೂ ಮುಖಂಡರುಗಳಾದ ರಾಜಣ್ಣ. ತಿಮ್ಮೇಗೌಡ. ಲಕ್ಕೇಗೌಡ್ರು. ಮಾ. ಗ್ರಾ.ಫಂ ಅಧ್ಯಕ್ಷರು. ತಿಮ್ಮೇಗೌಡ. ರಾಮಲಿಂಗಯ್ಯ. ಯಶೋಧರ್. ಜಯಚಂದ್ರ. ಮುಕ್ತಿಯಾರ್. ಗಂಗಾಧರ್. ದೊಡ್ಡ ಮಾರ್ಗೋನಹಳ್ಳಿಯ ಗಿರೀಶ್. ಚೇತನ್, ಗಂಗಾಧರ್. ಸೇರಿದಂತೆ ಯುವ ಮುಖಂಡ ಕಣಕೂರು ಯತೀಶ್ ಪೈಂಟ್ ಮತ್ತು ಗ್ರಾಮಸ್ಥರು, ಸ್ಥಳೀಯ ಜನಪ್ರತಿನಿಧಿಗಳು, ಮುಂತಾದವರು ಉಪಸ್ಥಿತರಿದ್ದರು.
ವರದೀ: ಮಂಜುನಾಥ್ ತುಮಕೂರು.
ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ https://chat.whatsapp.com/Jf6jZ0gyQAEA5GBRpHnkrv
https://news.google.com/publications/CAAqBwgKMPHDwgswk9_ZAw?hl=en-IN&gl=IN&ceid=IN:en
https://youtube.com/@janataa24?si=XsFcych2GMH0O6Gv
https://www.janataa24.com/turuvekere-protesting-against-stone-mining/
IAS,IPS,KAS, ಕನಸು ಹೊತ್ತ ವಿದ್ಯಾರ್ಥಿಗಳಿಗೆ ಗಾಡ್ ಫಾದರ್ ಆಗಿ ನಿಂತ ಮೂರ್ತಿ ಸಿ ಎಸ್.
Turuvekere: ಫಸಲಿಗೆ ಬಂದ 40 ತೆಂಗಿನ ಮರಗಳನ್ನ ಕಡಿದುರುಳಿಸಿದ ಕಿಡಿಗೇಡಿಗಳು.
Operation Sindor: POK ಪಾಕಿಸ್ತಾನದ 9 ಉಗ್ರ ನೆಲೆಗಳನ್ನು ನೆಲಸಮಗೊಳಿಸಿದ ಭಾರತ ಸೇನೆ.