JANATAA24 NEWS DESK
Turuvekere: ಕಣಕೂರು ಪಿ.ಎ.ಸಿ.ಎಸ್ ನೂತನ ಅಧ್ಯಕ್ಷರಾಗಿ ಗುಡ್ಡೇನಹಳ್ಳಿ ಕಾಂತಣ್ಣ ಅವಿರೋಧ ಆಯ್ಕೆ.

ತುರುವೇಕೆರೆ: ತಾಲೂಕಿನ ಮಾಯಸಂದ್ರ ಹೋಬಳಿಯ ಕಣಕೂರು ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ
“ಗುಡ್ಡೇನಹಳ್ಳಿ ಕಾಂತಣ್ಣ” ರವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಈ ಹಿಂದಿನ ಅಧ್ಯಕ್ಷರಾಗಿದ್ದ ಶ್ರೀನಿವಾಸ್ ಕೆ, ರವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಬುಧವಾರ ಚುನಾವಣೆ ನಡೆಯಿತು. 12 ಸದಸ್ಯ ಬಲವುಳ್ಳ ಸಂಘದಲ್ಲಿ ರವರು ಮಾತ್ರ ನಾಮಪತ್ರ ಸಲ್ಲಿಸಿದ್ದರಿಂದ ಚುನಾವಣಾಧಿಕಾರಿಯಾದ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚೇತನ್ ಟಿ.ಬಿ. ರವರು ಅವಿರೋಧ ಆಯ್ಕೆ ಎಂದು ಘೋಷಿಸಿದರು.
ಈ ವೇಳೆ ಪತ್ರಕರ್ತರೊಂದಿಗೆ ನೂತನ ಅಧ್ಯಕ್ಷ ಗುಡ್ಡೇನಹಳ್ಳಿ ಕಾಂತಣ್ಣ ರವರು ಮಾತನಾಡಿ, ಅವಿರೋಧವಾಗಿ ಆಯ್ಕೆಯಾಗಲು ಸಹಕರಿಸಿದ ಸರ್ವ ಸದಸ್ಯರಿಗೂ ಎಲ್ಲರಿಗೂ ಧನ್ಯವಾದಗಳನ್ನು ಅರ್ಪಿಸುತ್ತೇನೆ. ಮತ್ತು ನಮ್ಮ ಸಂಘದ ವ್ಯಾಪ್ತಿಯಲ್ಲಿನ ಎಲ್ಲಾ ಹಳ್ಳಿಗಳಿ ರೈತರುಗಳಿಗೆ ಸರ್ಕಾರದಿಂದ ದೊರೆಯುವ ಸೌಲಭ್ಯಗಳನ್ನು ಒದಗಿಸುವ ಕಾರ್ಯದಲ್ಲಿ ಪ್ರವೃತ್ತರಾಗಿರುತ್ತೇನೆ. ಹಾಗೂ ನಮ್ಮ ಸಂಘದ ಅಭಿವೃದ್ಧಿಗಾಗಿ ಒತ್ತು ನೀಡುವುದರ ಮೂಲಕ, ಸಾರ್ವಜನಿಕರ ಮತ್ತು ರೈತರ ಸಮಸ್ಯೆಗೆ ಸದಾ ಸ್ಪಂದಿಸುವುದಾಗಿ ತಿಳಿಸಿದರು.
ನೂತನ ಅಧ್ಯಕ್ಷರ ಆಯ್ಕೆಯ ಘೋಷಣೆಯಾಗುತ್ತಿದ್ದಂತೆ ತಮ್ಮ ಬೆಂಬಲಿಗರು, ಅಭಿಮಾನಿಗಳು, ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು ಹಾಗೂ ಸ್ಥಳೀಯ ಮುಖಂಡರುಗಳು, ಸಂಘದ ಆಡಳಿತ ಮಂಡಳಿ ಮತ್ತು ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾದ ಸಿದ್ಧಲಿಂಗಪ್ಪನವರು ನೂತನ ಅಧ್ಯಕ್ಷರನ್ನು ಅಭಿನಂದಿಸಿ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ನಿಕಟಪೂರ್ವ ಅಧ್ಯಕ್ಷರಾದ ಶ್ರೀನಿವಾಸ್, ಉಪಾಧ್ಯಕ್ಷರಾದ ಅಂದಾನಿಗೌಡ. ನಿರ್ದೇಶಕರುಗಳಾದ ಮುಕುಂದ. ರಮೇಶ್. ಕೆಂಚಯ್ಯ. ಜಹೀರ್. ನಂದೀಪ್. ಕರಿಯಪ್ಪ. ನಾಗರಾಜು. ವನಜಾಕ್ಷಮ್ಮ. ಮೇಘಾ, ಮೇಲ್ವಿಚಾರಕರಾದ ಹರೀಶ್, ಸಂಘದ ಸಿಬ್ಬಂದಿಗಳಾದ ಮಾನಸ, ನರಸಿಂಹಮೂರ್ತಿ, ಯತೀಶ್ ಪೈಂಟ್. ಸೇರಿದಂತೆ ಸ್ಥಳೀಯ ಗ್ರಾಮಸ್ಥರು, ಜನಪ್ರತಿನಿಧಿಗಳು, ಮುಂತಾದವರು ಉಪಸ್ಥಿತರಿದ್ದರು.
ವರದಿ: ಮಂಜುನಾಥ್ ತುರುವೇಕೆರೆ.
ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ https://chat.whatsapp.com/Jf6jZ0gyQAEA5GBRpHnkrv
https://news.google.com/publications/CAAqBwgKMPHDwgswk9_ZAw?hl=en-IN&gl=IN&ceid=IN:en
https://youtube.com/@janataa24?si=XsFcych2GMH0O6Gv
https://www.janataa24.com/turuvekere-protesting-against-stone-mining/
https://www.janataa24.com/iasipskas-who-stood-as-the-godfather-of-the/
https://www.janataa24.com/miscreants-uprooted-40-coconut-trees-turuvekere/
https://www.janataa24.com/operation-sindor-pok-9-terrorist/