JANATAA24 NEWS DESK
Turuvekere: ಜುಲೈ 27 ರಂದು ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ತುರುವೇಕೆರೆಯಲ್ಲಿ ಪ್ರತಿಭಟನೆ

ತುರುವೇಕೆರೆ: ತುಮಕೂರು ಜಿಲ್ಲೆ ತುರುವೇಕೆರೆಯಲ್ಲಿ ಪ್ರಗತಿಪರ ಸಂಘಟನೆಗಳಿಂದ ಇದೇ ಜುಲೈ 27 ರಂದು ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಪ್ರಗತಿಪರ ಸಂಘಟನೆಗಳು ಸೇರಿದಂತೆ ಎಸ್ ಎಫ್ ಐ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಘಟನಾ ಸಂಚಾಲಕ ದಂಡಿನಶಿವರ ಕುಮಾರ್ ತಿಳಿಸಿದರು, ಮುಂದುವರೆದ ಮಾತನಾಡಿದವರು ಈ ಪ್ರತಿಭಟನೆಯಲ್ಲಿ ಯಾವುದೇ ಪಕ್ಷದ ಮುಖಂಡರಾಗಲಿ ಕಾರ್ಯಕರ್ತರ ಆಗಲಿ ಪಕ್ಷಭೇದವಿಲ್ಲದೆ ಕೇಂದ್ರ ಸರ್ಕಾರದ ವಿರುದ್ಧ ನಡೆಯುವ ಶಾಂತಿಯುತ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಿ ಎಂದರು,
ಇದೇ ವೇಳೆ ಸಿ ಐ ಟಿ ಯು ಸತೀಶ್ ಮಾತನಾಡಿ ಕೇಂದ್ರ ಸಚಿವ ಧರ್ಮೆಂದ್ರ ಪ್ರಧಾನ್ ರಾಜಿನಾಮೆಗೆ ಒತ್ತಾಯಿಸಿ.
ಕೇಂದ್ರ ಸರಕಾರದ ವೈಫಲ್ಯ ಎಂದು ಆಕ್ರೋಶ ವ್ಯಕ್ತಪಡಿಸಿದರು ತುರುವೇಕೆರೆ ತಾಲೂಕಿನ ಪಟ್ಟಣದ ಪ್ರವಾಸಿ ಮಂದಿರದಿಂದ ತಾಲೂಕು ಕಚೇರಿಯವರಿಗೆ ಕಾಲ್ನಡಿಗೆ ಜಾತದೊಂದಿಗೆ ಪ್ರತಿಭಟನೆ ನಡೆಸಲಾಗುವುದು ಎಂದರು. ರೈತ ಮುಖಂಡ ಶ್ರೀನಿವಾಸ್ ಮಾತನಾಡಿ
ದೆಹಲಿಯ ಜಂತರ್ ಮಂಥರನಲ್ಲಿ ನಡೆದ ಪ್ರತಿಭಟನೆ ಹತ್ತಿಕ್ಕಲು ಕೇಂದ್ರ ಸರಕಾರ ಯುವಕರು ಮತ್ತು ವಿದ್ಯಾರ್ಥಿಗಳನ್ನು ಮನಸೋ ಇಚ್ಛೆಯಂತೆ ಲಾಟಿಚಾಜ್೯ ಮಾಡಿದ್ದಾರೆ.ಆದರೆ ಇದೆಲ್ಲವನ್ನೂ ನೋಡಿದರೆ ಸರಕಾರದ ದೌರ್ಬಲ್ಯ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದೇ ಸಂದರ್ಭದಲ್ಲಿ ಕನ್ನಡಪರ ಸಂಘಟನೆಗಳ ಮುಖಂಡರು, ವಿವಿಧ ಪರ ಸಂಘಟನೆಗಳ ಮುಖಂಡರು, ದಲಿತ ಸಂಘಟನೆಯ ಮುಖಂಡರುಗಳು ಬೀದಿಬದಿ ವ್ಯಾಪಾರಿಗಳ ಸಂಘದ ಮುಖಂಡರು ಇನ್ನು ಹಲವು ಸಂಘಟನೆಗಳ ಮುಖಂಡರು ಪತ್ರಿಕಾಗೋಷ್ಠಿಯಲ್ಲಿ ಪಾಲ್ಗೊಂಡಿದ್ದರು.
ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ https://chat.whatsapp.com/Jf6jZ0gyQAEA5GBRpHnkrv
https://news.google.com/publications/CAAqBwgKMPHDwgswk9_ZAw?hl=en-IN&gl=IN&ceid=IN:en
https://youtube.com/@janataa24?si=XsFcych2GMH0O6Gv
https://www.janataa24.com/turuvekere-protesting-against-stone-mining/
https://www.janataa24.com/iasipskas-who-stood-as-the-godfather-of-the/
https://www.janataa24.com/miscreants-uprooted-40-coconut-trees-turuvekere/
https://www.janataa24.com/operation-sindor-pok-9-terrorist/