Janataa24 NEWS DESK
Turuvekere: ಅಖಿಲ ಭಾರತ ಸಾರ್ವತ್ರಿಕ ಮುಷ್ಕರದ ಹಿನ್ನೆಲೆ, ಅಂಗನವಾಡಿ ನೌಕರರ ಸಂಘ, ಸಿ ಐ ಟಿ ಯು ವತಿಯಿಂದ ಪ್ರತಿಭಟನೆ.

ತುರುವೇಕೆರೆ: ಪಟ್ಟಣದಲ್ಲಿ ಅಂಗನವಾಡಿ ನೌಕರರ ಸಂಘ ಸಿ ಐ ಟಿ ಯು ವತಿಯಿಂದ ಇಂದು ಅಖಿಲ ಭಾರತ ಸಾರ್ವತ್ರಿಕ ಮುಷ್ಕರದ ಹಿನ್ನೆಲೆ ತಾಲೂಕು ಅಂಗನವಾಡಿ ನೌಕರರುಗಳು ಅಂಗನವಾಡಿ ಕೇಂದ್ರಗಳನ್ನು ಮುಚ್ಚಿ ಪ್ರತಿಭಟನೆ ನಡೆಸಿದರು ಮೊದಲಿಗೆ ಪಟ್ಟಣದ ಉಡಿಸಲಮ್ಮ ದೇವಿ ದೇವಸ್ಥಾನದಿಂದ ತಹಶೀಲ್ದಾರ್ ಕಚೇರಿವರಿಗೆ ಮೆರವಣಿಗೆ ನಡೆಸಿ ತಾಲೂಕು ಕಚೇರಿಯ ಮುಂಭಾಗ ಸರ್ಕಾರದ ವಿರುದ್ಧ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಪ್ರತಿಭಟನೆಕಾರರು ಆಗ್ರಹಿಸಿದರು,

ಇದೆ ವೇಳೆ ತಾಲೂಕು ಅಧ್ಯಕ್ಷರಾದ ಶ್ರೀಮತಿ ವಸಂತ್ ಕುಮಾರಿ ಮಾತನಾಡಿ ಸರ್ಕಾರದ ನೀತಿಗಳಿಂದ ಅಸಂಘಟಿತ ವಲಯದ ಕಾರ್ಮಿಕರಿಗೆ ಸೇವಾ ಭದ್ರತೆ ಇಲ್ಲದೆ ಅತಂತ್ರದ ಸ್ಥಿತಿಯಲ್ಲಿದ್ದಾರೆ ರಾಷ್ಟ್ರದ ಜಿಡಿಪಿ ಗೆ ಇವರ ಕೊಡುಗೆ ಶೇಕಡ 50 ರಷ್ಟಿದೆ, ಇದರ ಬಗ್ಗೆ ಯಾರು ಸಹ ಕಾಳಜಿ ವಹಿಸುತ್ತಿಲ್ಲ ಆದರೆ ಸರ್ಕಾರ ಮಾತ್ರ ಇಎಲ್ಐ ಹೆಸರಿನಲ್ಲಿ ಉದ್ಯೋಗ ಸೃಷ್ಟಿಸುವ ಉದ್ಯಮಿದಾರರಿಗೆ ಪ್ರೋತ್ಸಾಹ ಧನ ನೀಡಲು 2 ಲಕ್ಷ ಕೋಟಿ ರೂಗಳನ್ನು ಕಾಯ್ದಿರಿಸುವ ಮೂಲಕ ಬಂಡವಾಳಗಾರರನ್ನು ರಕ್ಷಿಸಲು ಹೊರಟಿದೆ ಗುತ್ತಿಗೆ ಕಾರ್ಮಿಕ ಪದ್ಧತಿಯ ಮೂಲಕ ಎಲ್ಲಾ ಪ್ರಮುಖ ಕೆಲಸಗಳನ್ನು ಗುತ್ತಿಗೆ ನೌಕರರನ್ನು ನೇಮಕ ಮಾಡಿ ಅವರನ್ನು ಅತಂತ್ರ ಸ್ಥಿತಿಯಲ್ಲಿ ಇರಿಸಲಾಗಿದೆ ಹಾಗಾಗಿ ಗುತ್ತಿಗೆ ನಿಯಂತ್ರಣ ಕಾಯ್ದೆ ಜಾರಿಗೆ ತರಬೇಕು ಎಂಬುದು ನಮ್ಮ ಒತ್ತಾಯ ಇದರ ಜೊತೆಗೆ ಅಂಗನವಾಡಿ ನೌಕರರಿಗೆ 26 ಸಾವಿರ ಕನಿಷ್ಠ ವೇತನ ಹಾಗೂ ಮಾಸಿಕ ಪಿಂಚಣಿ 10,000 ಮಾಡಿ ಟಿ ಎಚ್ ಆರ್ ಮೂಲಕ ಫಲಾನುಭವಿಗಳ ಪೋಶನ್ ಟ್ರ್ಯಾಕ್ಟರ್ ನ ಕೆಲಸಗಳಲ್ಲಿ ಅಂಗನವಾಡಿ ನೌಕರರಿಗೆ ತೊಂದರೆ ಕೊಡಬಾರದು, ಮುಷ್ಕರದ ಹಕ್ಕು ಸಂವಿಧಾನಾತ್ಮಕವಾದ ಹಕ್ಕುಗಳನ್ನು ಕಸಿಯುವ ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸಲು ಕೇಂದ್ರ ಸರ್ಕಾರ ಮುಂದಾಗಿದೆ 2018 ರಿಂದ ನಯಾ ಪೈಸೆ ವೇತನ ಹೆಚ್ಚಳ ಮಾಡಿಲ್ಲ ಐಸಿಡಿಎಸ್ ಯೋಜನೆ ಪ್ರಾರಂಭವಾಗಿ 50 ವರ್ಷಗಳಾಗಿದೆ ಮಾನವ ಸಂಪನ್ಮೂಲ ಬೆಳವಣಿಗೆಗೆ ದುಡಿಯುವ ಅಂಗನವಾಡಿ ನೌಕರರನ್ನು ಖಾಯಂ ಮಾಡಬೇಕು, ಜೊತೆಗೆ 12 ಗಂಟೆ ಅವಧಿ ವಿಸ್ತರಣೆಗೆ ಸಂಬಂಧಿಸಿದಂತೆ ರಾತ್ರಿ ಪಾಳಿಯದಲ್ಲಿ ಮಹಿಳಾ ಕಾರ್ಮಿಕರ ದುಡಿಮೆಗೆ ಅವಕಾಶ ನೀಡಿ ಕಾರ್ಖಾನೆ ಕಾಯ್ದೆಗೆ ತಿದ್ದುಪಡಿ ಮತ್ತು ಎಫ್ ಟಿ ಎ ನೇಮಕಕ್ಕೆ ಅವಕಾಶ ನೀಡುವ ಮಾದರಿ ಸ್ಥಾಯಿ ಆದೇಶಗಳ ತಿದ್ದುಪಡಿಗಳನ್ನು ರಾಜ್ಯ ಸರ್ಕಾರ ವಾಪಸ್ಸು ಪಡೆಯಬೇಕು ಇನ್ನು ಹಲವು ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ತಾಲೂಕು ಕಚೇರಿಗೆ ತೆರಳಿ ಗ್ರೇಡ್ 2 ತಾಸಿಲ್ದಾರ್ ಅವರಿಗೆ ಮನವಿ ಸಲ್ಲಿಸಿದರು.
ಇದೇ ಸಂದರ್ಭದಲ್ಲಿ ಅಂಗನವಾಡಿ ನೌಕರರ ಸಂಘದ ಕಾರ್ಯದರ್ಶಿ, ಖಜಾಂಚಿ, ಸಹಕಾರ್ಯದರ್ಶಿ, ಹಾಗೂ ಸರ್ಕಲ್ ಲೀಡರ್ ಗಳು ಸೇರಿದಂತೆ ಅನೇಕ ನೌಕರರು ಇದ್ದರು.
ವರದಿ: ಮಂಜುನಾಥ್ ಕೆ ಎ ತುರುವೇಕೆರೆ.
ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ https://chat.whatsapp.com/Jf6jZ0gyQAEA5GBRpHnkrv
https://news.google.com/publications/CAAqBwgKMPHDwgswk9_ZAw?hl=en-IN&gl=IN&ceid=IN:en
https://youtube.com/@janataa24?si=XsFcych2GMH0O6Gv
https://www.janataa24.com/turuvekere-protesting-against-stone-mining/
IAS,IPS,KAS, ಕನಸು ಹೊತ್ತ ವಿದ್ಯಾರ್ಥಿಗಳಿಗೆ ಗಾಡ್ ಫಾದರ್ ಆಗಿ ನಿಂತ ಮೂರ್ತಿ ಸಿ ಎಸ್.
Turuvekere: ಫಸಲಿಗೆ ಬಂದ 40 ತೆಂಗಿನ ಮರಗಳನ್ನ ಕಡಿದುರುಳಿಸಿದ ಕಿಡಿಗೇಡಿಗಳು.
Operation Sindor: POK ಪಾಕಿಸ್ತಾನದ 9 ಉಗ್ರ ನೆಲೆಗಳನ್ನು ನೆಲಸಮಗೊಳಿಸಿದ ಭಾರತ ಸೇನೆ.