Document

Turuvekere: ಪತ್ರಕರ್ತರ ಪ್ರತಿಭಾನ್ವಿತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ.

Janataa24 NEWS DESK 

 

 

Turuvekere: ಪತ್ರಕರ್ತರ ಪ್ರತಿಭಾನ್ವಿತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ.Turuvekere: ಪತ್ರಕರ್ತರ ಪ್ರತಿಭಾನ್ವಿತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ.

ತುರುವೇಕೆರೆ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ತುಮಕೂರು ಜಿಲ್ಲಾ ಘಟಕ ವತಿಯಿಂದ ತುಮಕೂರು ಜಿಲ್ಲಾ ಪತ್ರಕರ್ತರ ಪ್ರತಿಭಾನ್ವಿತ ಮಕ್ಕಳಿಗೆ ಡಾ. ಜಿ ಪರಮೇಶ್ವರ ಮತ್ತು ಕನ್ನಿಕಾ ಪರಮೇಶ್ವರ ಉನ್ನತ ಶಿಕ್ಷಣ ಪ್ರೋತ್ಸಾಹ ಧನ ವಿತರಣೆ ಹಾಗೂ ತುಮಕೂರು ಮಹಾನಗರ ಪಾಲಿಕೆ ವತಿಯಿಂದ ನಗರ ನಿವಾಸಿ ಪತ್ರಕರ್ತರಿಗೆ ಕ್ಯಾಶ್ ಲೆಸ್ ಆರೋಗ್ಯ ವಿಮೆ ಕಾರ್ಡ್ ವಿತರಣಾ ಸಮಾರಂಭವನ್ನು ತುಮಕೂರು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು.

ಈ ವೇಳೆ ತುಮಕೂರು ಜಿಲ್ಲಾ ಪತ್ರಕರ್ತರ ಪ್ರತಿಭಾನ್ವಿತ ಮಕ್ಕಳಿಗೆ ಕರ್ನಾಟಕ ಸರ್ಕಾರದ ಗೃಹ ಮಂತ್ರಿಗಳು ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಜಿ ಪರಮೇಶ್ವರ ರವರು ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕೆ ಪ್ರೋತ್ಸಾಹ ಧನವನ್ನು ನೀಡುವ ಮೂಲಕ ಗೌರವಿಸಿ ವಿದ್ಯಾರ್ಥಿಗಳ ಮುಂದಿನ ಶಿಕ್ಷಣ ಭವಿಷ್ಯ ಉತ್ತಮವಾಗಿರಲಿ ಎಂದು ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ತುರುವೇಕೆರೆ ತಾಲೂಕಿನ ಮಾದಿಹಳ್ಳಿ ಗ್ರಾಮದ ಶ್ರೀ ರಾಮಕೃಷ್ಣ ಮಠ ಬದರಿಕಾಶ್ರಮ ವಿದ್ಯಾ ಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಕು. ದೀಕ್ಷಾ ಕೆ.ಎಸ್. ರವರಿಗೆ ಅಭಿನಂದನ ಪತ್ರ ಮತ್ತು ಪ್ರೋತ್ಸಾಹ ಧನ ನೀಡಿ ಗೌರವಿಸಲಾಯಿತು.ಪೋಷಕರಾದ ಪತ್ರಕರ್ತರಾದ ಸಚಿನ್ (ಮಾಯಸಂದ್ರ) ತುರುವೇಕೆರೆ ತಾಲೂಕು ಪಂಚಾಯತಿ ಸಿಬ್ಬಂದಿಯಾದ ಪತ್ನಿ ಗಿರಿಜಾ ಕುಟುಂಬಕ್ಕೆ ಅಭಿನಂದನೆ ಸಲ್ಲಿಸಲಾಯಿತು.

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಣಾಧಿಕಾರಿ ಜಿ ಪ್ರಭು.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ.ಅಶೋಕ್. ಮಹಾನಗರ ಪಾಲಿಕೆ ಆಯುಕ್ತರದ ಬಿವಿ ಅಶ್ವಿಜ. ಪತ್ರಕರ್ತರ ರಾಷ್ಟ್ರೀಯ ಮಂಡಳಿ ಅಧ್ಯಕ್ಷರಾದ ಮಲ್ಲಿಕಾರ್ಜುನಯ್ಯ ತುಮಕೂರು ಜಿಲ್ಲಾಧ್ಯಕ್ಷರಾದ ಚಿ.ನಿ. ಪುರುಷೋತ್ತಮ್. ಪ್ರಧಾನ ಕಾರ್ಯದರ್ಶಿ ರಘುರಾಮ್ ಸೇರಿದಂತೆ ಎಲ್ಲ ಪದಾಧಿಕಾರಿಗಳು ಜಿಲ್ಲಾ ನಿರ್ದೇಶಕರುಗಳು, ರಾಜ್ಯ ಸಮಿತಿ, ರಾಷ್ಟ್ರೀಯ ಮಂಡಳಿ ಸದಸ್ಯರು ಜಿಲ್ಲೆಯ ಎಲ್ಲಾ ಪತ್ರಕರ್ತರು ಪ್ರತಿಭಾನ್ವಿತ ವಿದ್ಯಾರ್ಥಿಗಳು, ಮುಂತಾದ ಗಣ್ಯರು, ಉಪಸ್ಥಿತರಿದ್ದರು.

ವರದಿ: ಮಂಜುನಾಥ್ ತುರುವೇಕೆರೆ.

ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ https://chat.whatsapp.com/Jf6jZ0gyQAEA5GBRpHnkrv

https://news.google.com/publications/CAAqBwgKMPHDwgswk9_ZAw?hl=en-IN&gl=IN&ceid=IN:en

https://youtube.com/@janataa24?si=XsFcych2GMH0O6Gv

https://www.janataa24.com/iasipskas-who-stood-as-the-godfather-of-the/

https://www.janataa24.com/miscreants-uprooted-40-coconut-trees-turuvekere/

IAS,IPS,KAS, ಕನಸು ಹೊತ್ತ ವಿದ್ಯಾರ್ಥಿಗಳಿಗೆ ಗಾಡ್ ಫಾದರ್ ಆಗಿ ನಿಂತ ಮೂರ್ತಿ ಸಿ ಎಸ್.

 

Document

Leave a Reply

Your email address will not be published. Required fields are marked *