Document

Turuvekere: ತಾಲೂಕು DSS ಮತ್ತು ಪ್ರಗತಿಪರ ಸಂಘಟನೆಗಳಿಂದ ಬೃಹತ್ ತಮಟೆ ಚಳುವಳಿ.

Janataa24 NEWS DESK 

 

 

Turuvekere: Massive Tamate Movement by DSS and Progressive Organizations.

Turuvekere: ತಾಲೂಕು DSS ಮತ್ತು ಪ್ರಗತಿಪರ ಸಂಘಟನೆಗಳಿಂದ ಬೃಹತ್ ತಮಟೆ ಚಳುವಳಿ.

 

ತುರುವೇಕೆರೆ: ಪಟ್ಟಣದ ಪ್ರವಾಸಿ ಮಂದಿರದಲ್ಲಿ ಪ್ರೊಫೆಸರ್ ಬಿ ಕೃಷ್ಣಪ್ಪ ಸ್ಥಾಪಿತ ಕರ್ನಾಟಕ ದಲಿತ ಸಂಘರ್ಷ ಸಮಿತಿ ತಾಲೂಕು ಸಂಚಾಲಕ ದಂಡಿನ ಶಿವರ ಕುಮಾರ್ ಇವರ ನೇತೃತ್ವದಲ್ಲಿ ಪತ್ರಿಕಾ ಮಾಧ್ಯಮಗೋಷ್ಠಿ ನಡೆಸಲಾಯಿತು. ಸೆಪ್ಟೆಂಬರ್ 30ನೇ ಸೋಮವಾರ ತಾಲ್ಲೂಕು ಕಚೇರಿ ಆವರಣದಲ್ಲಿ ಒಳ ಮೀಸಲಾತಿ ಕಲ್ಪಿಸಲು ಸಂವಿಧಾನಬದ್ಧ ಅಧಿಕಾರವಿದೆ ಎಂದು ಸುಪ್ರೀಂಕೋರ್ಟ್ ನೀಡಿರುವ ತೀರ್ಪಿನಂತೆ ಅನುಷ್ಠಾನಗೊಳಿಸಬೇಕೆಂದು ಮತ್ತು ತಾಲೂಕಿನ ಹಲವು ಸಮಸ್ಯೆಗಳ ಪರಿಹಾರಕ್ಕಾಗಿ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿ ಬೃಹತ್ ತಮಟೆ ಚಳುವಳಿಯ ಹಿನ್ನೆಲೆ ಪತ್ರಿಕಾ ಮಾಧ್ಯಮ ಗೋಷ್ಠಿ ನಡೆಸಲಾಯಿತು.

ಇದೇ ವೇಳೆ ಕರ್ನಾಟಕ ದಲಿತ ಸಂಘರ್ಷ ಸಮಿತಿ ತುರುವೇಕೆರೆ ತಾಲೂಕು ಸಂಚಾಲಕ ದಂಡಿನ ಶಿವರ ಕುಮಾರ್ ಮಾತನಾಡಿ, ಕೂಡಲೇ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ತೀರ್ಪಿನಂತೆ ಒಳ ಮೀಸಲಾತಿಯನ್ನು ಜಾರಿಗೊಳಿಸಬೇಕೆಂದು ಒತ್ತಾಯಿಸಿದರು, ಇದರ ಜೊತೆಗೆ ತಾಲೂಕಿನ ಹಲವು ಸಮಸ್ಯೆಗಳಾದ ಎಲ್ಲಾ ದಲಿತ ಕಾಲೋನಿಗಳಲ್ಲಿ ಸ್ಮಶಾನ ಮಂಜೂರು ಮಾಡಿದ್ದೇವೆ ಎಂದು ಮೇಲ್ನೋಟಕ್ಕೆ ತಿಳಿಸಿದ್ದು ಯಾವುದೇ ಗ್ರಾಮದಲ್ಲಿ ಸ್ಮಶಾನ ಸಮರ್ಪಕವಾಗಿಲ್ಲ ಕೂಡಲೇ ಸಮರ್ಪಕವಾಗಿ ಸ್ಮಶಾನವನ್ನು ಮಂಜೂರು ಮಾಡಬೇಕು ಇನ್ನು ತಾಲೂಕಿನಲ್ಲಿ ಅಂಬೇಡ್ಕರ್ ಭವನ ಮಂಜೂರು ಹಾಗಿ ಹತ್ತು ವರ್ಷ ಕಳೆದರೂ ಇನ್ನೂ ಕೂಡ ಅಂಬೇಡ್ಕರ್ ಭವನ ನಿರ್ಮಾಣವಾಗಿಲ್ಲ ಇದರ ಜೊತೆಗೆ ತಾಲೂಕಿನ ಎಲ್ಲಾ ಪಂಚಾಯಿತಿಗಳಲ್ಲಿ 25% ಅನುದಾನ ಮೀಸಲಾತಿ ಹಣವನ್ನು ಸಮರ್ಪಕವಾಗಿ ಬಳಸುತ್ತಿಲ್ಲ ಹಾಗೂ ಗ್ರಾಮ ಪಂಚಾಯಿತಿಗಳಲ್ಲಿ ನಿವೇಶನಗಳನ್ನು ಇ -ಸ್ವತ್ತು ಮಾಡಿಸಲು ಸಾರ್ವಜನಿಕರು ಅಲೆದಾಡುವಂತಹ ಪರಿಸ್ಥಿತಿ ಬಂದಿದೆ.

ಇದರ ಜೊತೆಗೆ ಬಹಳ ಮುಖ್ಯವಾಗಿ ತಾಲೂಕು ಆರೋಗ್ಯ ಕೇಂದ್ರದಲ್ಲಿ ವೈದ್ಯರುಗಳ ಕೊರತೆಯಿಂದಾಗಿ ಸಾರ್ವಜನಿಕರಿಗೆ ಸೂಕ್ತ ಸಮಯದಲ್ಲಿ ಚಿಕಿತ್ಸೆ ದೊರೆಯುತ್ತಿಲ್ಲ ಇದರಿಂದಾಗಿ ಸಾರ್ವಜನಿಕರು ಸರಿಯಾದ ಚಿಕಿತ್ಸೆ ದೊರೆಯದೆ ಆರೋಗ್ಯ ಸಮಸ್ಯೆಯಿಂದ ಹೆಚ್ಚಾಗಿ ಬಳಲುವಂತಹ ಪರಿಸ್ಥಿತಿ ಬಂದಿದೆ ಇದರ ಜೊತೆಗೆ ಬೆಳೆ ಪರಿಹಾರ ಯೋಜನೆ ಅಡಿ ರೈತರಿಗೆ ಪರಿಹಾರ ನೀಡದೆ ವಂಚನೆ ಮಾಡಲಾಗುತ್ತಿದೆ ಎಂದು ಆಕ್ರೋಶ ಹೊರಹಾಕಿದರು, ಇದೇ ಸಂದರ್ಭದಲ್ಲಿ ತಾಲೂಕಿನ ಎಲ್ಲಾ ಡಿ ಎಸ್ ಎಸ್ ನ ಪದಾಧಿಕಾರಿಗಳು ಹಾಗೂ ಪ್ರಗತಿಪರ ಸಂಘಟನೆಗಳ ಮುಖಂಡರುಗಳು ಉಪಸ್ಥಿತರಿದ್ದರು.

 

 

ವರದಿ: ಮಂಜುನಾಥ್ ಕೆ ಎ ತುರುವೇಕೆರೆ .

 

ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ https://chat.whatsapp.com/Jf6jZ0gyQAEA5GBRpHnkrv

https://news.google.com/publications/CAAqBwgKMPHDwgswk9_ZAw?hl=en-IN&gl=IN&ceid=IN:en

https://youtube.com/@janataa24?si=XsFcych2GMH0O6Gv

https://www.janataa24.com/iasipskas-who-stood-as-the-godfather-of-the/

https://www.janataa24.com/miscreants-uprooted-40-coconut-trees-turuvekere/

Mandya: ಪತ್ನಿ ನೇಣಿಗೆ ಶರಣಾದದನ್ನು ಕಂಡು ಕೆರೆಗೆ ಹಾರಿ ಪ್ರಾಣ ಬಿಟ್ಟ ಪತಿ.

Document

Leave a Reply

Your email address will not be published. Required fields are marked *