Janataa24 NEWS DESK
Turuvekere: ಒಳಚರಂಡಿ ಯೋಜನೆಯ ಎರಡನೇ ಹಂತದ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ ಶಾಸಕ ಎಂ ಟಿ ಕೃಷ್ಣಪ್ಪ.

ತುರುವೇಕೆರೆ: ಪಟ್ಟಣದ ವರ ವಲಯದಲ್ಲಿರುವ ಪಟ್ಟಣ ಪಂಚಾಯಿತಿಗೆ ಒಳಪಡುವ ಮಲಿನ ನೀರು ಸಂಸ್ಕರಣ ಘಟಕ ಆವರಣದಲ್ಲಿ ಪಟ್ಟಣದಲ್ಲಿ ಎರಡನೇ ಹಂತದ ಒಳಚರಂಡಿ ಯೋಜನೆಗೆ ಶಾಸಕ ಎಂ ಟಿ ಕೃಷ್ಣಪ್ಪ ಅವರು ಗುದ್ದಲಿ ಪೂಜೆ ನೆರವೇರಿಸಿದರು.
ಇದೆ ವೇಳೆ ಮಾತನಾಡಿದ ಅವರು ಸುಮಾರು 6:50 ಕೋಟಿ ರೂ ವೆಚ್ಚದಲ್ಲಿ ಮನೆ ಮನೆಗೆ ಒಳಚರಂಡಿ ಸಂಪರ್ಕ ಕಲ್ಪಿಸುವ ಸಲುವಾಗಿ ಈ ಕಾಮಗಾರಿಯನ್ನು ಕೈಗೆತ್ತಿಕೊಂಡಿದ್ದು ವೇಗವಾಗಿ ಈ ಕಾಮಗಾರಿಯನ್ನು ಮುಗಿಸಲಾಗುವುದು ಎಂದರು. ಇದೆ ವೇಳೆ ಹಿರಿಯರಾದ ತಿಮ್ಮಯ್ಯ ರವರಿಗೆ ಅಭಿನಂದಿಸಲಾಯಿತು.
ಇದೇ ಸಂದರ್ಭದಲ್ಲಿ ಪಟ್ಟಣ ಪಂಚಾಯಿತಿ ಅಧ್ಯಕ್ಷರಾದ ಸ್ವಪ್ನ ನಟೇಶ್, ಮಾಜಿ ಅಧ್ಯಕ್ಷ ಹಾಗೂ ಹಾಲಿ ಸದಸ್ಯರಾದ ಆಶಾ ರಾಣಿ, ಎನ್ ಆರ್ ಸುರೇಶ್, ಮಧು, ರುದ್ರೇಶ್, ಸುನಿಲ್, ಪಟ್ಟಣ ಪಂಚಾಯಿತಿ ಆರ್ ಐ ಪ್ರಶಾಂತ್, ಶಾಸಕರ ಆಪ್ತ ಸಹಾಯಕ ರಾಘು, ಗುತ್ತಿಗೆದಾರ ಆನಂದ್ ಗೌಡ, ಪಟ್ಟಣ ಪಂಚಾಯಿತಿ ಸಿಬ್ಬಂದಿ ವರ್ಗ ಇನ್ನೂ ಹಲವರು ಉಪಸ್ಥಿತರಿದ್ದರು.
ವರದಿ: ಮಂಜುನಾಥ್ ಕೆ ಎ ತುರುವೇಕೆರೆ .
ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ https://chat.whatsapp.com/Jf6jZ0gyQAEA5GBRpHnkrv
https://news.google.com/publications/CAAqBwgKMPHDwgswk9_ZAw?hl=en-IN&gl=IN&ceid=IN:en
https://youtube.com/@janataa24?si=XsFcych2GMH0O6Gv
https://www.janataa24.com/turuvekere-protesting-against-stone-mining/
IAS,IPS,KAS, ಕನಸು ಹೊತ್ತ ವಿದ್ಯಾರ್ಥಿಗಳಿಗೆ ಗಾಡ್ ಫಾದರ್ ಆಗಿ ನಿಂತ ಮೂರ್ತಿ ಸಿ ಎಸ್.
Turuvekere: ಫಸಲಿಗೆ ಬಂದ 40 ತೆಂಗಿನ ಮರಗಳನ್ನ ಕಡಿದುರುಳಿಸಿದ ಕಿಡಿಗೇಡಿಗಳು.
Operation Sindor: POK ಪಾಕಿಸ್ತಾನದ 9 ಉಗ್ರ ನೆಲೆಗಳನ್ನು ನೆಲಸಮಗೊಳಿಸಿದ ಭಾರತ ಸೇನೆ.