JANATAA24 NEWS DESK
Udupi: ಮ್ಯಾರಥಾನ್ ಓಟದಲ್ಲಿ ಪಾಲ್ಗೊಂಡಿದ್ದ ಕುಂದಾಪುರ PSI ಕುಸಿದು ಬಿದ್ದು ಸಾವು.

ಉಡುಪಿ: ಇಂದು ಬೆಳಗ್ಗೆ ಉಡುಪಿಯಲ್ಲಿ ಪೊಲೀಸ್ ಇಲಾಖೆ ಏರ್ಪಡಿಸಿದ್ದ ಮ್ಯಾರಥಾನ್ ಓಟದಲ್ಲಿ ಪಾಲ್ಗೊಂಡಿದ್ದ ಕುಂದಾಪುರ ಗ್ರಾಮಾಂತರ ಸಬ್ ಇನ್ಸ್‌ಪೆಕ್ಟರ್ ನಾಸಿರ್ ಹುಸೇನ್ (58) ಅವರು ಹಠಾತ್ ಆಗಿ ಕುಸಿದು ಬಿದ್ದು ತೀರಿಕೊಂಡಿದ್ದಾರೆ.
ಹೃದಯಾಘಾತದಿಂದ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಇಂದು ಪೊಲೀಸ್ ಇಲಾಖೆ ಮ್ಯಾರಥಾನ್ ಆಯೋಜಿಸಿತ್ತು. ‘ಜಿಲ್ಲಾ ಪೊಲೀಸ್ ನಮ್ಮ ಪೊಲೀಸ್ ನಮ್ಮ ಹೆಮ್ಮೆ’ ಘೋಷ ವಾಕ್ಯದೊಂದಿಗೆ ಮ್ಯಾರಥಾನ್ ಆಯೋಜಿಸಲಾಗಿತ್ತು. ಡ್ರಗ್ಸ್ ಮುಕ್ತ ಕರ್ನಾಟಕ ಧ್ಯೇಯದೊಂದಿಗೆ ಓಟ ಆರಂಭಗೊಂಡಿತ್ತು. ನಗರದ ತಾಲೂಕು ಪಂಚಾಯತ್ ಮುಂಭಾಗದ ರಸ್ತೆಯಲ್ಲಿ ಎಸ್‌ಐ ಕುಸಿದುಬಿದ್ದಿದ್ದಾರೆ. ಕೂಡಲೇ ಅವರನ್ನು ಪಕ್ಕದಲ್ಲೇ ಇದ್ದ ಡಾ.ಟಿಎಂಎ ಪೈ ಆಸ್ಪತ್ರೆಗೆ ದಾಖಲಿಸಲಾಗಿದೆ. ನಾಸಿರ್ ಹುಸೇನ್ ಸಾವನ್ನು ಆಸ್ಪತ್ರೆ ವೈದ್ಯರು ದೃಢಪಡಿಸಿದರು.
ಈ ವಾರದಲ್ಲೇ ಕರಾವಳಿಯಲ್ಲಿದು ಐದನೆಯದೋ-ಆರನೆಯದೋ ಹಠಾತ್ ಸಾವಿನ ಸುದ್ದಿ. ಇಂತಹ ಅಕಾಲಿಕ ಸಾವಿನ ಸಂಗತಿಗಳು, ಅದೂ ಪೊಲೀಸ್ ಇಲಾಖೆಯಂತಹ ಫಿಟ್‌ನೆಸ್ ಇರುವ ವ್ಯಕ್ತಿಗಳಿಗೆ ಹೀಗಾದಾಗ ಜನಸಾಮಾನ್ಯರಲ್ಲಿ ಮತ್ತಷ್ಟು ಆತಂಕಕ್ಕೆ ಇದು ಕಾರಣ ಆಗುತ್ತದೆ. ಇಂತಹ ಘಟನೆ ಇದು ಮೊದಲೂ ಅಲ್ಲ, ಕಡೆಯದೂ ಅಲ್ಲ.
ಮೂಲತಃ ಚಿಕ್ಕಮಗಳೂರು ಜಿಲ್ಲೆಯ ನಾಸಿರ್ 2010 ಬ್ಯಾಚ್‌ನ ಪೊಲೀಸ್ ಅಧಿಕಾರಿ. 58 ವರ್ಷದ ನಾಸಿರ್ ಹುಸೇನ್ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಹೊಂದಿದ್ದರು. ಇತ್ತೀಚೆಗೆ ಶೆಟ್ಟಿಕಟ್ಟೆ ಅಪಘಾತ ನಡೆದಾಗ ಅಧಿಕಾರ ಠಾಣೆಗೆ ವರ್ಗಾವಣೆ ಮಾಡಲಾಗಿತ್ತು. ಬಳಿಕ ಕುಂದಾಪುರ ಗ್ರಾಮಾಂತರ ಠಾಣೆಗೆ ಬಂದಿದ್ದರು.
ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ https://chat.whatsapp.com/Jf6jZ0gyQAEA5GBRpHnkrv
https://news.google.com/publications/CAAqBwgKMPHDwgswk9_ZAw?hl=en-IN&gl=IN&ceid=IN:en
https://youtube.com/@janataa24?si=XsFcych2GMH0O6Gv
https://www.janataa24.com/turuvekere-protesting-against-stone-mining/
IAS,IPS,KAS, ಕನಸು ಹೊತ್ತ ವಿದ್ಯಾರ್ಥಿಗಳಿಗೆ ಗಾಡ್ ಫಾದರ್ ಆಗಿ ನಿಂತ ಮೂರ್ತಿ ಸಿ ಎಸ್.
Turuvekere: ಫಸಲಿಗೆ ಬಂದ 40 ತೆಂಗಿನ ಮರಗಳನ್ನ ಕಡಿದುರುಳಿಸಿದ ಕಿಡಿಗೇಡಿಗಳು.
Operation Sindor: POK ಪಾಕಿಸ್ತಾನದ 9 ಉಗ್ರ ನೆಲೆಗಳನ್ನು ನೆಲಸಮಗೊಳಿಸಿದ ಭಾರತ ಸೇನೆ.